ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರೋಗ್ಯ ಕರ್ನಾಟಕ ಆಯುಷ್ಮಾನ್ ಭಾರತ್‌ ಜೊತೆ ವಿಲೀನ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 23 : ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಗೆ ಚಾಲನೆ ನೀಡಿದರು. ಕರ್ನಾಟಕದಲ್ಲಿ ಜಾರಿಯಲ್ಲಿರುವ ಆರೋಗ್ಯ ಕರ್ನಾಟಕ ಯೋಜನೆ ಕೇಂದ್ರ ಸರ್ಕಾರದ ಯೋಜನೆ ಜೊತೆ ವಿಲೀನವಾಗಲಿದೆ.

ಆಯುಷ್ಮಾನ್ ಭಾರತ್ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಆಯುಷ್ಮಾನ್ ಭಾರತ್ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಯೋಜನೆಯನ್ನು ವಿಲೀನಗೊಳಿಸಲು ಒಪ್ಪಿಗೆ ನೀಡಲಾಗಿದೆ. ಯೋಜನೆ ವಿಲೀನ ಮಾಡಲು ರಾಜ್ಯ ಸರ್ಕಾರ ಕೆಲವು ಬದಲಾವಣೆಗೆ ಬೇಡಿಕೆ ಇಟ್ಟಿತ್ತು. ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಆಯುಷ್ಮಾನ್ ಭಾರತ ಯೋಜನೆ : ಯಾರು ಫಲಾನುಭವಿ, ಯಾರು ಅರ್ಹರು? ಆಯುಷ್ಮಾನ್ ಭಾರತ ಯೋಜನೆ : ಯಾರು ಫಲಾನುಭವಿ, ಯಾರು ಅರ್ಹರು?

ಆರೋಗ್ಯ ಕರ್ನಾಟಕ ಯೋಜನೆಯಡಿ 1516 ಸೇವೆಗಳಿವೆ. ಆಯುಷ್ಮಾನ್ ಭಾರತ್ ಅಡಿ 1349 ಸೇವೆಗಳಿವೆ. ಎರಡೂ ಯೋಜನೆಗಳು ವಿಲೀನವಾದ ಬಳಿಕ ಜನರಿಗೆ 1628 ಸೇವೆಗಳು ಯೋಜನೆಯಡಿ ಲಭ್ಯವಾಗಲಿದೆ. ಶೀಘ್ರದಲ್ಲೇ ವಿಲೀನ ಕುರಿತು ಅಧಿಕೃತ ಆದೇಶ ಹೊರಬೀಳಲಿದೆ.

ಯಶಸ್ವಿನಿ ಯೋಜನೆ ಕುರಿತು ಸರ್ಕಾರದ ಸ್ಪಷ್ಟನೆಗಳುಯಶಸ್ವಿನಿ ಯೋಜನೆ ಕುರಿತು ಸರ್ಕಾರದ ಸ್ಪಷ್ಟನೆಗಳು

Arogya Karnataka scheme to merge with Ayushman Bharat

ಯೋಜನೆಗಳು ವಿಲೀನಗೊಂಡ ಬಳಿಕ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ವರ್ಷಕ್ಕೆ 2 ಲಕ್ಷವಿದ್ದ ನೆರವನ್ನು 5 ಲಕ್ಷಕ್ಕೆ ಏರಿಕೆ ಮಾಡಲಾಗುತ್ತದೆ. ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ 1.50 ಲಕ್ಷಕ್ಕೆ ಏರಿಕೆಯಾಗಲಿದೆ.

ಈ ಯೋಜನೆಗೆ ಸುಮಾರು 1000 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಕೇಂದ್ರ ಸರ್ಕಾರ 286 ಕೋಟಿ, ರಾಜ್ಯ ಸರ್ಕಾರ 782 ಕೋಟಿ ಅನುದಾನವನ್ನು ಹಂಚಿಕೆ ಮಾಡಿಕೊಳ್ಳಲಿವೆ.

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸಹಾಯವಾಣಿ ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸಹಾಯವಾಣಿ

ರಾಜ್ಯದ ಬೇಡಿಕೆ ಏನಾಗಿತ್ತು?

ಆರೋಗ್ಯ ಕರ್ನಾಟಕವನ್ನು ಆಯುಷ್ಮಾನ್ ಭಾರತ್‌ನಲ್ಲಿ ವಿಲೀನಗೊಳಿಸಲು ರಾಜ್ಯ ಸರ್ಕಾರ ಕೆಲವು ಬೇಡಿಕೆ ಮುಂದಿಟ್ಟಿತ್ತು. ಅವುಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಅವುಗಳ ವಿವರ ಇಲ್ಲಿದೆ.

* ಬಡವರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲು ರಾಜ್ಯ ಸರ್ಕಾರವು ಹಲವು ವರ್ಷಗಳಿಂದ ರಾಷ್ಟ್ರಕ್ಕೆ ಮಾದರಿಯಾಗುವ ಯೋಜನೆ ಜಾರಿಗೆ ತಂದಿದೆ. ಅದನ್ನು ಮೇಲ್ದರ್ಜೆಗೇರಿಸಲು ಅವಕಾಶ ಕೇಳಲಾಗಿತ್ತು. ಅದಕ್ಕೆ ಕೇಂದ್ರ ಸಮ್ಮತಿ ಸೂಚಿಸಿದೆ.

* ಆಯುಷ್ಮಾನ್ ಭಾರತ್ ಅಡಿ ಚಿಕಿತ್ಸೆಗಳ ದರವನ್ನು ಆರೋಗ್ಯ ಕರ್ನಾಟಕ ಯೋಜನೆಯ ದರಕ್ಕೆ ಅನುಸಾರವಾಗಿ ನಿಗದಿ ಮಾಡಬೇಕು ಎಂಬ ಬೇಡಿಕೆ ಇತ್ತು. ಇದಕ್ಕೂ ಸರ್ಕಾರ ಒಪ್ಪಿದೆ.

ಆಯುಷ್ಮಾನ್ ಭಾರತ್ ಅಥವಾ ಮೋದಿಕೇರ್ ಎಂದರೇನು? ಆಯುಷ್ಮಾನ್ ಭಾರತ್ ಅಥವಾ ಮೋದಿಕೇರ್ ಎಂದರೇನು?

* ಆಯುಷ್ಮಾನ್ ಭಾರತ್ ಯೋಜನೆಗಿಂತ ಆರೋಗ್ಯ ಕರ್ನಾಟಕ ಯೋಜನೆಯಡಿ 250 ರಿಂದ 260 ಹೆಚ್ಚುವರಿ ಚಿಕಿತ್ಸಾ ಪ್ಯಾಕೇಜ್‌ಗಳಿವೆ ವಿಲೀನ ಸಂದರ್ಭದಲ್ಲಿ ಈ ಪ್ಯಾಕೇಜ್ ಪರಿಗಣಿಸಬೇಕು ಎಂಬ ಬೇಡಿಕೆಗೂ ಒಪ್ಪಿಗೆ ಸಿಕ್ಕಿದೆ.

* ಆರೋಗ್ಯ ಕರ್ನಾಟಕ ಯೋಜನೆಯಡಿ ಬಳಕೆದಾರರ ಶುಲ್ಕ ಸಂಗ್ರಹ ಮಾಡಲು ಅವಕಾಶವಿದೆ. ಇದನ್ನು ಆಯುಷ್ಮಾನ್ ಯೋಜನೆಗೂ ವಿಸ್ತರಣೆ ಮಾಡಬೇಕು ಎಂಬ ರಾಜ್ಯದ ಬೇಡಿಕೆಗೆ ಒಪ್ಪಿಗೆ ನೀಡಲಾಗಿದೆ.

English summary
Karnataka government approved to merge Arogya Karnataka scheme with Ayushman Bharat scheme. PM Narendra Modi launched the scheme on Sunday, September 23, 2018 at Jharkhand.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X