ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಪ.ಜಾತಿ, ಪ.ಪಂಗಡ ವಸತಿ ಶಾಲೆಗಳಿಗೆ ಮರು ನಾಮಕರಣ; ಸರ್ಕಾರ

|
Google Oneindia Kannada News

ಬೆಂಗಳೂರು, ಜನವರಿ 12: ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಸತಿ ಶಾಲೆಗಳಿಗೆ ಮರು ನಾಮಕರಣ ಮಾಡಿ ರಾಜ್ಯ ಸರ್ಕಾರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆದೇಶಿಸಿದೆ.

ಈ ಕುರಿತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಸತಿ ಶಾಲೆಗಳನ್ನು ಮರು ನಾಮಕರಣ ಮಾಡಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯುದಯಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

* ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಶಾಲೆಗಳಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಎಂದು ಮರು ನಾಮಕರಣಗೊಳಿಸಲಾಗಿದೆ.

Around 68 SC/ST Residential Schools in Karnataka Named After Dr BR Ambedkar

* ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಆಶ್ರಮ ಶಾಲೆಗಳನ್ನು ಈಗಾಗಲೇ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆ ಎಂದು ಮರು ನಾಮಕರಣ ಮಾಡಲಾಗಿದೆ.

* ರಾಜ್ಯದಲ್ಲಿ ಒಟ್ಟು 68 ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳು ಮತ್ತು 119 ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗಳಿವೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ವಾಗ್ದಾಳಿ
ಕಾಂಗ್ರೆಸ್ ನಾಯಕರು ನೀರಿಗಾಗಿ ಪಾದಯಾತ್ರೆ ಮಾಡುತ್ತಿಲ್ಲ, ಕುರ್ಚಿ ಸಲುವಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು.

Around 68 SC/ST Residential Schools in Karnataka Named After Dr BR Ambedkar

Recommended Video

Virat Virat Kohli ಶ್ರೇಷ್ಠ ಆಟಗಾರ ಆಗಿದ್ದರೂ ಈ ವಿಚಾರದಲ್ಲಿ ಹಿಂದೆ | Oneindia Kannada

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಪಾದಯಾತ್ರೆ ಕೈಗೊಂಡಿದ್ದಾರೆ. ಒಂದೇ ಕಲ್ಲಿನಿಂದ ಮೂರು ಹಕ್ಕಿ ಹೊಡೆಯುವ ಪ್ರಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿಯನ್ನು ಮುಗಿಸಲು ಪಾದಯಾತ್ರೆ ಮಾಡಲಾಗುತ್ತದೆ ಎಂದು ಟೀಕಿಸಿದರು.

ಸಿಎಂ ಆಗುವ ದೃಷ್ಟಿಯಿಂದ ಹಾಗೂ ಸಿದ್ದರಾಮಯ್ಯ ವರ್ಚಸ್ಸು ಕಡಿಮೆಗೊಳಿಸಲು ಡಿ.ಕೆ. ಶಿವಕುಮಾರ್ ಪ್ಲಾನ್ ಮಾಡಿಕೊಂಡಿದ್ದಾರೆ. ತಮ್ಮದೇ ಸರ್ಕಾರ ಬರುವುದೆಂದು ಹಗಲುಗನಸು ಕಾಣುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಸಚಿವ ಬಿ. ಶ್ರೀರಾಮುಲು ಕಿಡಿಕಾರಿದರು.

English summary
The Department of Welfare of Scheduled Caste and Scheduled Tribes (SCs) of the State Government has ordered the re-naming of Scheduled Castes and Scheduled Tribes residential schools in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X