ಬೆಂಗಳೂರು ನಗರಾಭಿವೃದ್ಧಿಗಾಗಿ 1,35,000 ಕೋಟಿ ರೂ; ಎ-ಖಾತಾ ಬಗ್ಗೆ ಬಿಗ್ ಅಪ್‌ಡೇಟ್ ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 15: ಬೆಂಗಳೂರು ನಗರಾಭಿವೃದ್ಧಿಗಾಗಿ ಸುಮಾರು 1,35,000 ಕೋಟಿ ರೂ.ಗಳಿಗೂ ಹೆಚ್ಚಿನ ವೆಚ್ಚದಲ್ಲಿ ಡಬಲ್ ಡೆಕರ್ ರಸ್ತೆಗಳು, ಸುರಂಗ ರಸ್ತೆಗಳು, ಬೆಂಗಳೂರು ಬ್ಯುಸಿನೆಸ್ ಕಾರಿಡಾರ್, ವೈಟ್ ಟಾಪಿಂಗ್ ರಸ್ತೆಗಳು, ಡಾಂಬರು ರಸ್ತೆಗಳು, 6ನೇ ಹಂತದ ಕಾವೇರಿ ನೀರು ಸರಬರಾಜು ಯೋಜನೆ, ಹೊಸ ಮೆಟ್ರೋ ರೈಲು ಮಾರ್ಗಗಳು, ಬಫರ್ ರಸ್ತೆ, ಮೇಲ್ಸೇತುವೆ, ಉತ್ತರ-ದಕ್ಷಿಣ ಕಾರಿಡಾರ್, ಪೂರ್ವ-ಪಶ್ಚಿಮ ಕಾರಿಡಾರ್, ಉದ್ಯಾನಗಳ ಅಭಿವೃದ್ಧಿ, ಸಾರ್ವಜನಿಕ ಪಾರ್ಕಿಂಗ್ ವ್ಯವಸ್ಥೆ, ಶಿಕ್ಷಣ-ಆರೋಗ್ಯ ವ್ಯವಸ್ಥೆಯ ಸುಧಾರಣೆ, ಟ್ರಾಫಿಕ್ ನಿರ್ವಹಣೆ, ಆಟದ ಮೈದಾನಗಳು ಇತ್ಯಾದಿ ಯೋಜನೆಗಳಲ್ಲಿ ಕೆಲವು ಚಾಲನೆಗೊಂಡಿವೆ. ಇನ್ನುಳಿದವು ಪ್ರಾಥಮಿಕ ಹಂತದಲ್ಲಿವೆ ಎಂದು ಸಿದ್ದರಾಮಯ್ಯ ತಿಳಿಸಿದರು.
79ನೇ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಜಿ.ಬಿ.ಎ. ವ್ಯಾಪ್ತಿಯಲ್ಲಿ ಇ-ಖಾತಾ ವ್ಯವಸ್ಥೆಯು ನಾಗರಿಕರಿಗೆ ಆನ್ಲೈನ್ ಮೂಲಕ ಡಿಜಿಟೈಸ್ಡ್ ಆಸ್ತಿ ದಾಖಲೆಗಳನ್ನು ಒದಗಿಸುತ್ತದೆ. ಈ ವ್ಯವಸ್ಥೆಯಲ್ಲಿ ಸಾರ್ವಜನಿಕರು ಮನೆಗಳಿಂದಲೇ ಖಾತಾವನ್ನು ಪಡೆಯುವ ವ್ಯವಸ್ಥೆ ಕಲ್ಪಿಸುತ್ತಿದ್ದೇವೆ. ಇದು ಭಾರತದಲ್ಲಿನ ಅತಿದೊಡ್ಡ ಡಿಜಿಟಲ್ ಇ-ಖಾತಾ ವ್ಯವಸ್ಥೆಯಾಗಿದೆ. ಈ ವ್ಯವಸ್ಥೆಯನ್ನು ರಾಜ್ಯದ ಉಳಿದ ಪ್ರದೇಶಗಳಿಗೂ ವಿಸ್ತರಿಸಲು ಯೋಜಿಸುತ್ತಿದ್ದೇವೆ. ಇದರ ಜೊತೆಗೆ 4000 ಚದರ ಅಡಿಯವರೆಗೆ ನಂಬಿಕೆ ನಕ್ಷೆ ಪರಿಕಲ್ಪನೆಯನ್ನೂ ಜಾರಿಗೊಳಿಸಿದ್ದೇವೆ.

ಬೆಂಗಳೂರು ಮತ್ತು ರಾಜ್ಯದ ಉಳಿದ ಕಡೆಗಳಲ್ಲಿ ಬಹುದಿನಗಳಿಂದ ಜನರಿಗೆ ಸಮಸ್ಯೆಯಾಗಿದ್ದ ಬಿ-ಖಾತಾ ಗೊಂದಲಗಳನ್ನು ಬಗೆಹರಿಸಿ ಎ-ಖಾತಾ ಕೊಡುವ ಕ್ರಾಂತಿಕಾರಿ ತೀರ್ಮಾನ ಮಾಡಿ ಅನುಷ್ಠಾನ ಮಾಡುತ್ತಿದ್ದೇವೆ.
ಬಳಸಿದ ನೀರಿನ ಮರುಬಳಕೆಯಲ್ಲಿ ಕರ್ನಾಟಕವು ಅಳವಡಿಸಿಕೊಂಡಿರುವ ಮಾದರಿಯನ್ನು ಒಕ್ಕೂಟ ಸರ್ಕಾರವು ದೇಶದ ವಿವಿಧ ಕಡೆ ಅಳವಡಿಸಿಕೊಳ್ಳಲು ನಿರ್ದೇಶನಗಳನ್ನು ನೀಡಿದೆ. ಬೆಂಗಳೂರಿನಲ್ಲಿ ಬಳಸಿದ ನೀರನ್ನು ಎರಡು ಹಂತದಲ್ಲಿ ಶುದ್ಧೀಕರಿಸಿ ಒಟ್ಟಾರೆ 926 ಕೆರೆಗಳನ್ನು ಮತ್ತು 143 ಚೆಕ್-ಡ್ಯಾಂಗಳನ್ನು ತುಂಬಿಸಲು ಕ್ರಮವಹಿಸಿದ್ದೇವೆ. ಈಗಾಗಲೇ 233 ಕೆರೆಗಳು ಹಾಗೂ 143 ಚೆಕ್ ಡ್ಯಾಂಗಳನ್ನು ತುಂಬಿಸಲಾಗುತ್ತಿದೆ. ನಮ್ಮ ಈ ಉಪಕ್ರಮವನ್ನು ವಿಶ್ವ ಸಂಸ್ಥೆಯ ಮುಖ್ಯಸ್ಥರು ಕೋಲಾರಕ್ಕೆ ಬಂದು, 'The KC valley waste water management project in Karnataka is transformation in the making' ಎಂದು ಮೆಚ್ಚುಗೆ ಸೂಚಿಸಿದ್ದಾರೆ.
2027ರ ವೇಳೆಗೆ ಎತ್ತಿನ ಹೊಳೆ ಯೋಜನೆಯನ್ನೂ ಪೂರ್ಣಗೊಳಿಸುವ ಗುರಿ ಹಾಕಿಕೊಂಡಿದ್ದೇವೆ. ನೀರಾವರಿ ಕ್ಷೇತ್ರದಲ್ಲಿಯೂ ಸರ್ಕಾರ ಹೆಚ್ಚಿನ ಗಮನ ಹರಿಸಿದ್ದು ನಾವು ಚುನಾವಣೆಗೆ ಮೊದಲು ಹೇಳಿದ್ದ ಆಶ್ವಾಸನೆಗಳನ್ನು ಈಡೇರಿಸಲು ಪ್ರಾಮಾಣಿಕವಾದ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ವಿವಿಧ ವಸತಿ ಯೋಜನೆಗಳಡಿಯಲ್ಲಿ ಜೂನ್-2025ರ ಅಂತ್ಯದವರೆಗೆ 3,87,756 ಮನೆಗಳನ್ನು ಪೂರ್ಣಗೊಳಿಸಲಾಗಿದೆ. ಕರ್ನಾಟಕ ಗೃಹ ಮಂಡಳಿಯಲ್ಲಿ ರಾಜ್ಯಾದ್ಯಂತ 26 ವಸತಿ ಯೋಜನೆಗಳು ಪ್ರಗತಿಯಲ್ಲಿವೆ.
ಚುನಾವಣೆಗೆ ಮೊದಲು ನೀಡಿದ್ದ ಭರವಸೆಯಂತೆ ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸಿ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಸಾಧ್ಯವಾಗಿಸಲು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿವರ್ಷ 5,000 ಕೋಟಿ ರೂ.ಗಳನ್ನು ಒದಗಿಸಿ ಶಿಕ್ಷಣ, ಆರೋಗ್ಯ, ಕೈಗಾರಿಕಾಭಿವೃದ್ಧಿ, ಮೂಲಭೂತ ಸೌಕರ್ಯ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ. 7 ಜಿಲ್ಲೆಗಳ 38 ವಿಧಾನಸಭಾ ಕ್ಷೇತ್ರಗಳ ಗ್ರಾಮೀಣ ಪ್ರದೇಶದ 1150 ಕಿ.ಮೀ. ರಸ್ತೆಗಳನ್ನು "ಕಲ್ಯಾಣ ಪಥ" ಕಾರ್ಯಕ್ರಮದಡಿ 1.000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿ ಮಾಡುತ್ತಿದ್ದೇವೆ.
ರಾಜ್ಯದ ಕರಾವಳಿ ಜಿಲ್ಲೆಗಳ ಸಮುದ್ರ ಕೊರೆತವನ್ನು ತಗ್ಗಿಸಲು 200 ಕೋಟಿ ರೂ.ವೆಚ್ಚದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕ್ರಮವಹಿಸಲಾಗುತ್ತಿದೆ. ಕರಾವಳಿಯಲ್ಲಿ ಕೋಮು ಸಂಘರ್ಷದಿಂದ ಅಮಾಯಕ ಜನರು ಆಸ್ತಿ, ಪಾಸ್ತಿ ಹಾಗೂ ಪ್ರಾಣ ಹಾನಿ ಉಂಟಾಗುತ್ತಿತ್ತು. ಕೋಮು ಹಿಂಸೆಯನ್ನು ನಿವಾರಿಸಲು 'ವಿಶೇಷ ಕಾರ್ಯ ಪಡೆ'ಯನ್ನು ರಚಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಆರೋಗ್ಯ ಇಲಾಖೆಯಲ್ಲಿ ನಮ್ಮ ಸರ್ಕಾರವು ಹಲವಾರು ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮುಖ್ಯವಾಗಿ, ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ. ಕ್ಯಾನ್ಸರ್ ರೋಗಿಗಳ ಪ್ರಯಾಣ ಮತ್ತು ಚಿಕಿತ್ಸೆಯ ಹೊರೆ ಕಡಿಮೆ ಮಾಡಲು ಹಬ್ ಮತ್ತು ಸ್ಕೋಪ್ ಮಾದರಿಯಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನಾವು ತೆಗೆದುಕೊಂಡ ಕ್ರಮಗಳಿಂದಾಗಿ 2025ನೇ ಸಾಲಿನಲ್ಲಿ ತಾಯಂದಿರ ಮರಣ ಪ್ರಮಾಣ ಶೇ.26 ರಷ್ಟು ಕಡಿಮೆ ಆಗಿದೆ. ಪ್ರಮುಖ 14 ಅಸಾಂಕ್ರಾಮಿಕ ರೋಗಗಳಿಗೆ ಮನೆ ಬಾಗಿಲಲ್ಲೆ ತಪಾಸಣೆ, ಚಿಕಿತ್ಸೆ ಮತ್ತು ಅನುಸರಣೆ ಸೇವೆಗಳನ್ನು ನೀಡುವ ಗೃಹ ಆರೋಗ್ಯ ಯೋಜನೆಯನ್ನು ವಿಸ್ತರಿಸಿದ್ದೇವೆ ಎಂದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications