ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರ ಬಂಧನ!
ತುಮಕೂರು, ಅಕ್ಟೋಬರ್ 26: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ. ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರನ್ನ ಪೊಲೀಸರು ಬಂಧಿಸಿದ್ದಾರೆ.
ಹೌದು, ತುಮಕೂರಿನ ಮಾರನಾಯಕನಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಬಂಧಿತರು ಓರಿಸ್ಸಾ ಮೂಲದವರಾಗಿದ್ದಾರೆ. ಒಡಿಶಾ ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು. ಬಂಧಿತರು ಮಾರನಾಯಕನಪಾಳ್ಯದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು.

ಕಳೆದ ಹಲವು ದಿನಗಳಿಂದ ನವಿಲುಗಳನ್ನ ಕೊಂದು ಭಕ್ಷಿಸುತ್ತಿದ್ದ ಬಂಧಿತರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು, ಒಡಿಶಾ ಮೂಲದ ಈ ಮೂವರನ್ನ ಬಂಧಿಸಿದ್ದಾರೆ. ಈ ವೇಳೆ 1.5 ಕೆ.ಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು. ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು.ಮಾಂಸ ಬೇಯಿಸಿದ್ದ ಪಾತ್ರೆಗಳನ್ನ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನೂ ವಶಕ್ಕೆ ಪಡೆದ ಮಾಂಸವನ್ನು ಅಧಿಕಾರಿಗಳು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಅಲ್ಲದೇ ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.












Click it and Unblock the Notifications