ಸಿಡಿ ಪ್ರಕರಣ; ರಮೇಶ್ ಜಾರಕಿಹೊಳಿ ಬಂಧನ ಯಾವಾಗ?
ಬೆಂಗಳೂರು, ಮಾರ್ಚ್ 30; ಮಾಜಿ ಸಚಿವ, ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿಗೆ ನ್ಯಾಯಾಲಯದ ಮುಂದೆ ಹಾಜರಾಗಿದ್ದಾಳೆ. ಆರೋಪಿ ರಮೇಶ್ ಜಾರಕಿಹೊಳಿ ಬಂಧನ ಯಾವಾಗ?.
ಕರ್ನಾಟಕ ಕಾಂಗ್ರೆಸ್ ಸರಣಿ ಟ್ವೀಟ್‌ಗಳ ಮೂಲಕ ಸರ್ಕಾರವನ್ನು ಈ ಕುರಿತು ಮಂಗಳವಾರ ಪ್ರಶ್ನೆ ಮಾಡಿದೆ. "ಬಿಜೆಪಿ ಕರ್ನಾಟಕ, ಬಸವರಾಜ ಬೊಮ್ಮಾಯಿ ಅವರೇ ಈಗ ಹೇಳಿ ಅತ್ಯಾಚಾರ ಆರೋಪಿಯ ಬಂಧನ ಯಾವಾಗ?" ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಸಂತ್ರಸ್ತ ಯುವತಿ ಬೆಂಗಳೂರಿನಲ್ಲಿ ಪ್ರತ್ಯಕ್ಷವಾದರೆ ರಮೇಶ್ ಜಾರಕಿಹೊಳಿ ಗೋಕಾಕ್‌ನಲ್ಲಿದ್ದರು. ಸೋಮವಾರ ಪೊಲೀಸ್ ವಿಚಾರಣೆ ಎದುರಿಸಿದ್ದ ಅವರು ಗೋಕಾಕ್‌ನ ನಿವಾಸಕ್ಕೆ ತೆರಳಿದ್ದರು.
ಇಂದು ಮಧ್ಯಾಹ್ನ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರದ ಮಹಾಲಕ್ಷ್ಮೀ ದೇವಾಲಯಕ್ಕೆ ಭೇಟಿ ನೀಡಿದರು. ಸುಮಾರು ಅರ್ಧಗಂಟೆಗಳ ಕಾಲ ದೇವಾಲಯದಲ್ಲಿದ್ದ ಅವರು ಬಳಿಕ ಗೋಕಾಕ್‌ಗೆ ವಾಪಸ್ ಆಗಿದ್ದಾರೆ.

ಕಾನೂನು ಬದಲಾಗಿದೆ
ಕರ್ನಾಟಕ ಕಾಂಗ್ರೆಸ್ #ArrestRapistRamesh ಹ್ಯಾಷ್ ಟ್ಯಾಗ್ ಮೂಲಕ ಸರಣಿ ಟ್ವೀಟ್ ಮಾಡುತ್ತಿದೆ. "ಬಿಜೆಪಿ ಆಡಳಿತದಲ್ಲಿ ಕಾನೂನು ಬದಲಾಗಿದೆ. ಇಲ್ಲಿ ಸಂತ್ರಸ್ತೆಯನ್ನು ಪೊಲೀಸ್ ವಶಕ್ಕೆ ಪಡೆಯಬಹುದು, ಆರೋಪಿ ಸ್ವಇಚ್ಛೆಯಂತೆ ತಿರುಗಾಡಿಕೊಂಡಿರಬಹುದು!!" ಎಂದು ಟೀಕಿಸಿದೆ.

ಗೃಹ ಸಚಿವರಿಗೆ ಪ್ರಶ್ನೆ
"ಸಂತ್ರಸ್ತೆ ಬಂದು ನ್ಯಾಯಾಧೀಶರೆದುರು ಹೇಳಿಕೆಯನ್ನೂ ಕೊಟ್ಟಾಯಿತು. ಇಷ್ಟಾದರೂ ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ಬೀದಿ ಗೂಳಿಯಂತೆ ತಿರುಗಿಕೊಂಡಿದ್ದಾರೆ, ಇನ್ನೂ ಕೂಡ ಆರೋಪಿಯ ಬಂಧನವಾಗಲಿಲ್ಲ ಏಕೆ #BuildupBommai ಅವರೇ?" ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
|
ಕಾನೂನಿನ ನಂಬಿಕೆ ನಾಶ
"ಯುವತಿ ವಿಡಿಯೋ ಹೇಳಿಕೆ ನೀಡಿದಾಗಲೂ ಕೇಸ್ ಹಾಕಲಿಲ್ಲ. ಸಂತ್ರಸ್ತೆ ದೂರು ಸಲ್ಲಿಸಿ, FIR ದಾಖಲಾದರೂ ಬಂಧಿಸಲಿಲ್ಲ. ಕೋರ್ಟಿಗೆ ಹಾಜರಾಗಿ ಹೇಳಿಕೆ ನೀಡಿದರೂ ಬಂಧನವಿಲ್ಲ" ಎಂದು ಕಾಂಗ್ರೆಸ್ ಟೀಕಿಸಿದೆ.
|
ಬಂಧನವಾಗಲಿಲ್ಲವೆಂದರೆ ಏನರ್ಥ
"ಸಂತ್ರಸ್ತೆ ಕೋರ್ಟಿಗೆ ಬಂದು ಹೇಳಿಕೆ ನೀಡಿದ ಮೇಲೂ ಅತ್ಯಾಚಾರ ಆರೋಪಿಯ ಬಂಧನವಾಗಲಿಲ್ಲವೆಂದರೆ ಏನರ್ಥ ಬಸವರಾಜ ಬೊಮ್ಮಾಯಿ ಅವರೇ?" ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Recommended Video
|
ಆರೋಪಿಯ ಬಂಧನ ಯಾವಾಗ
"ಅತ್ಯಾಚಾರ ಆರೋಪಿಯ ಬಂಧನ ಯಾವಾಗ?" ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಗೃಹ ಸಚಿವರನ್ನು ಪ್ರಶ್ನಿಸಿದೆ.












Click it and Unblock the Notifications