Get Updates
Get notified of breaking news, exclusive insights, and must-see stories!

ಅರಸೀಕರೆ ಶಾಸಕ ಕೆ. ಎಂ. ಶಿವಲಿಂಗೇ ಗೌಡ ರಾಜೀನಾಮೆ

ಬೆಂಗಳೂರು, ಏಪ್ರಿಲ್ 02; ಕರ್ನಾಟಕದ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಮೇ 10ರ ಬುಧವಾರ ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ರ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆ ಘೋಷಣೆಯಾದ ಬಳಿಕ ಪಕ್ಷಾಂತರ ಹೆಚ್ಚಾಗಿದೆ. ಜೆಡಿಎಸ್‌ನ ಮತ್ತೊಬ್ಬ ಶಾಸಕ ಭಾನುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಭಾನುವಾರ ಶಿರಸಿಯ ಗೃಹ ಕಚೇರಿಯಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿದ ಅರಸೀಕರೆಯ ಜೆಡಿಎಸ್ ಶಾಸಕ ಕೆ. ಎಂ. ಶಿವಲಿಂಗೇ ಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕೆಲವು ದಿನಗಳಿಂದ ಅವರು ಜೆಡಿಎಸ್ ತೊರೆಯಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.

Arsikere MLA KM Shivalinge Gowda Quits MLA Post

ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್. ಆರ್. ಶ್ರೀನಿವಾಸ್. ಅರಕಲಗೂಡು ಕ್ಷೇತ್ರದ ಶಾಸಕ ಎ. ಟಿ. ರಾಮಸ್ವಾಮಿ ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷ ತೊರೆದಿದ್ದಾರೆ. ಹಾಲಿ ಶಾಸಕರು ಪಕ್ಷ ತೊರೆದ ಪಟ್ಟಿಗೆ ಕೆ. ಎಂ. ಶಿವಲಿಂಗೇ ಗೌಡ ಹೊಸ ಸೇರ್ಪಡೆಯಾಗಿದ್ದಾರೆ. ಎಸ್. ಆರ್. ಶ್ರೀನಿವಾಸ್ ಕಾಂಗ್ರೆಸ್ ಸೇರಿದ್ದಾರೆ. ಎ. ಟಿ. ರಾಮಸ್ವಾಮಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಅರಸೀಕರೆಯಲ್ಲಿ ಕಳೆದ ತಿಂಗಳು ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ನಡೆದಿತ್ತು. ಪಕ್ಷದ ಚಟುವಟಿಕೆಗಳಿಂದ ದೂರ ಇದ್ದ ಅರಸೀಕರೆಯ ಜೆಡಿಎಸ್ ಶಾಸಕ ಕೆ. ಎಂ. ಶಿವಲಿಂಗೇ ಗೌಡ ಸಮಾವೇಶದಲ್ಲಿ ಪಾಲ್ಗೊಂಡಿರಲಿಲ್ಲ. ಅವರ ಚಿತ್ರಗಳಿದ್ದ ಬ್ಯಾನರ್‌, ಫೆಕ್ಸ್‌ಗಳನ್ನು ಸಹ ಸಮಾವೇಶದ ಸ್ಥಳದಿಂದ ತೆರವು ಮಾಡಲಾಗಿತ್ತು.

ಮೂರು ಬಾರಿ ಶಾಸಕರು; ಕೆ. ಎಂ. ಶಿವಲಿಂಗೇ ಗೌಡ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಪ್ತರು. ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಇತ್ತು. ಈ ಕುರಿತು ಅವರು ಸಹ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕೆ. ಎಂ. ಶಿವಲಿಂಗೇ ಗೌಡ ಅರಸೀಕರೆಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ.

Arsikere MLA KM Shivalinge Gowda Quits MLA Post

ಅರಸೀಕರೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕೆ. ಎಂ. ಶಿವಲಿಂಗೇ ಗೌಡ 2008ರಲ್ಲಿ 74,025, 2013ರ ಚುನಾವಣೆಯಲ್ಲಿ 76,579 ಮತ್ತು 2018ರ ಚುನಾವಣೆಯಲ್ಲಿ 93,986 ಮತಗಳನ್ನು ಪಡೆದು ಜಯಗಳಿಸಿದ್ದರು. ಆದರೆ 2018ರ ಚುನಾವಣೆ ಬಳಿಕ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಅವರಿಗೆ ಸಚಿವ ಸ್ಥಾನ ನೀಡಿರಲಿಲ್ಲ.

ಜೆಡಿಎಸ್ ವರಿಷ್ಠರ ವಿರುದ್ಧ ಅಸಮಾಧಾನಗೊಂಡಿದ್ದ ಕೆ. ಎಂ. ಶಿವಲಿಂಗೇ ಗೌಡ ಪಕ್ಷದ ಚಟುವಟಿಕೆಗಳಿಂದ ದೂರವಾಗಿ ಹಲವು ದಿನಗಳು ಕಳೆದಿತ್ತು. ಭಾನುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅವರು ಅಧಿಕೃತವಾಗಿ ಪಕ್ಷವನ್ನು ತೊರೆದ ನಾಯಕರ ಪಟ್ಟಿ ಸೇರಿದ್ದಾರೆ. 2018ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆದ್ದಿದ್ದ ಮೂವರು ಹಾಲಿ ಶಾಸಕರು ಈಗಾಗಲೇ ಪಕ್ಷ ತೊರೆದಿದ್ದಾರೆ.

ಕೆ. ಎಂ. ಶಿವಲಿಂಗೇ ಗೌಡರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಜೆಡಿಎಸ್ ಪ್ರಯತ್ನ ಮಾಡಿತ್ತು. ಮಾಜಿ ಸಚಿವ ಎಚ್. ಡಿ. ರೇವಣ್ಣ ಮತ್ತು ಶಾಸಕರ ನಡುವಿನ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ಪಕ್ಷ ಬಿಡಲು ಮಾನಸಿಕವಾಗಿ ತಯಾರಾಗಿದ್ದ ಅವರು ಮನವೊಲಿಕೆಗೆ ಒಪ್ಪಿರಲಿಲ್ಲ. ಅರಸೀಕೆರೆಯಲ್ಲಿ ನಡೆದ ಸಮಾವೇಶದಲ್ಲಿ ಶಾಸಕರ ವಿರುದ್ಧ ಜೆಡಿಎಸ್ ನಾಯಕರು ವಾಗ್ದಾಳಿ ನಡೆಸಿದ್ದರು.

ಜೆಡಿಎಸ್ ತೊರೆದ ನಾಯಕರು; ಇದುವರೆಗೂ ಜೆಡಿಎಸ್ ಬಿಟ್ಟ ನಾಯಕರಲ್ಲಿ ಹಾಲಿ ಶಾಸಕರಾದ ಎ. ಟಿ. ರಾಮಸ್ವಾಮಿ, ಎಸ್. ಆರ್. ಶ್ರೀನಿವಾಸ್, ಕೆ. ಎಂ. ಶಿವಲಿಂಗೇಗೌಡ ಪ್ರಮುಖರು. ಉಳಿದಂತೆ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ. ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್. ಎಚ್. ಕೋನರಡ್ಡಿ ಪಕ್ಷ ಬಿಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿದ್ದ ಆರ್. ಎಂ. ಮಂಜುನಾಥ ಗೌಡ, ತುಮಕೂರು ಜಿಲ್ಲೆಯ ನಾಯಕ ಬೆಮಲ್ ಕಾಂತರಾಜ್, ಕಡೂರು ಕ್ಷೇತ್ರದ ಮಾಜಿ ಶಾಸಕ ವೈ. ಎಸ್. ವಿ. ದತ್ತಾ ಅವರು ಸಹ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+