ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

370 ವಿಧಿ ರದ್ದು: ಮೋದಿ ವಿರುದ್ದ ಸಿದ್ದರಾಮಯ್ಯ ಒಂದರ ಮೇಲೊಂದು ಟ್ವೀಟ್ ಪ್ರಹಾರ

|
Google Oneindia Kannada News

Recommended Video

370 ವಿಧಿ ರದ್ದು: ಮೋದಿ ವಿರುದ್ದ ಸಿದ್ದರಾಮಯ್ಯ ಒಂದರ ಮೇಲೊಂದು ಟ್ವೀಟ್ ಪ್ರಹಾ

ಬೆಂಗಳೂರು, ಆ 6: 370ವಿಧಿ ರದ್ದತಿ ಮತ್ತು ಜಮ್ಮು, ಕಾಶ್ಮೀರ ರಾಜ್ಯ ವಿಭಜನೆಯ ಬಗ್ಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿ ವಿರುದ್ದ ಟ್ವೀಟ್ ಗಳ ಪ್ರವಾಹವನ್ನೇ ಹರಿಸಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಹೀಗಿದೆ, ' ಪ್ರಣಾಳಿಕೆಯಲ್ಲಿನ ಆಶ್ವಾಸನೆಯಂತೆ ಕಾಶ್ಮೀರಕ್ಕೆ‌ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಪಡಿಸಿದ್ದೀರಿ ಎನ್ನುತ್ತೀರಲ್ಲಾ‌ @narendramodi ಅವರೇ, ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು, ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿಟ್ಟು, ಸೈನಿಕರ ಕಾವಲು ಹಾಕಿ ಇದನ್ನು ಮಾಡ್ತೀರಿ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೀರಾ?

ಆರ್ಟಿಕಲ್ 370 ರದ್ದು: ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನ 'ಏಕಾಂಗಿ'ಆರ್ಟಿಕಲ್ 370 ರದ್ದು: ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನ 'ಏಕಾಂಗಿ'

ಇನ್ನೊಂದು ಟ್ವೀಟ್ ನಲ್ಲಿ, ' ಕೇಂದ್ರದಲ್ಲಿ @BJP4India ಅಧಿಕಾರಕ್ಕೆ ಬಂದ ನಂತರವೇ ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಭದ್ರತಾ ಸಿಬ್ಬಂದಿ ಮತ್ತು ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗಿದ್ದಾರೆ ಎನ್ನುತ್ತಿವೆ ದಾಖಲೆಗಳು.ಇದಕ್ಕೆ ಕಾರಣ ಸಂವಿಧಾನದ 370ನೇ ವಿಧಿಯೇ? ಇಲ್ಲವೇ ಪರಿಸ‍್ಥಿತಿಯನ್ನು ನಿಯಂತ್ರಣ ಮಾಡಲಿಕ್ಕಾಗದ ನಿಮ್ಮ ಅಸಾಮರ್ಥ್ಯವೇ?

Article 370 Scrap, Former CM Of Karnataka Siddaramaiah Series Of Tweet Against PM Modi

ಮತ್ತೊಂದು ಟ್ವೀಟ್, ' ಪಾಕಿಸ್ತಾನದ ವಿರುದ್ಧ ಯುದ್ಧ ಗೆದ್ದಾಗ, ಸ್ವರ್ಣಮಂದಿರದಲ್ಲಿದ್ದ ಉಗ್ರಗಾಮಿಗಳನ್ನು ಖಾಲಿ ಮಾಡಿಸಿದಾಗ.. ಶ್ರೀಮತಿ ಇಂದಿರಾಗಾಂಧಿಯವರು ರಾಜಕೀಯವಾಗಿ ಬಳಸಿಕೊಳ್ಳಲಿಲ್ಲ,ಅದು ತಮ್ಮ ಕರ್ತವ್ಯ ಎಂದು ತಿಳಿದಿದ್ದರು. @narendramodi ಅವರೇ ನೀವ್ಯಾಕೆ ಪ್ರತಿ ಕೆಲಸವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ತಿದ್ದೀರಿ?'.

ನಾಲ್ಕನೇ ಟ್ವೀಟ್, ' ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ‍್ಥಾನಮಾನ ರದ್ದಾಯಿತಲ್ಲಾ, ಈಗಲಾದರೂ ದೇಶದ ಕುಸಿಯುತ್ತಿರುವ ಆರ್ಥಿಕ ಸ್ಥಿತಿಯ ಬಗ್ಗೆ, ಕರ್ನಾಟಕದಲ್ಲಿ ಅತೀವೃಷ್ಟಿ ಮತ್ತು ಅನಾವೃಷ್ಟಿಯಿಂದ ನರಳುತ್ತಿರುವ ಜನರ ಬಗ್ಗೆ ಸ್ವಲ್ಪ ಗಮನಹರಿಸುತ್ತೀರಾ, @PMOIndia ಅವರೇ? @INCKarnataka'.

ಕಾಶ್ಮೀರಿಗಳ ಬೆಂಬಲಕ್ಕೆ ಯಾವ ಹಂತಕ್ಕೆ ಹೋಗಲು ಸಹ ಸಿದ್ಧ: ಪಾಕ್ ಸೇನೆ ಕಾಶ್ಮೀರಿಗಳ ಬೆಂಬಲಕ್ಕೆ ಯಾವ ಹಂತಕ್ಕೆ ಹೋಗಲು ಸಹ ಸಿದ್ಧ: ಪಾಕ್ ಸೇನೆ

ಸಿದ್ದರಾಮಯ್ಯನವರ ಟ್ವೀಟಿಗೆ ನೂರಾರು ಕಾಮೆಂಟುಗಳು ಬಂದಿದ್ದು, ಅದರಲ್ಲಿ ಒಂದು ಹೀಗಿದೆ, ' ನೀವು ಪ್ರಣಾಳಿಕೆಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಮಾಡಿಸುತ್ತೇನೆಂದು ಪ್ರಣಾಳಿಕೆಯಲ್ಲಿ ಹೇಳಿದ್ರಾ? ಲಿಂಗಾಯತರನ್ನು ಪ್ರತ್ಯೇಕ ಮಾಡುತ್ತೇನೆಂದು ಹೇಳಿದ್ರಾ ? ಎಲ್ಲವನ್ನೂ ಪ್ರಣಾಳಿಕೆಯಲ್ಲಿ ಹೇಳಿಯೇ ಮಾಡುವುದಿಲ್ಲ ತಾನೆ ಆಗಲೇ ಇದೆರಡನ್ನು ಪ್ರಣಾಳಿಕೆಯಲ್ಲಿ ಹೇಳಿದ್ದರೆ ಈ ಟರ್ಮ್ ನಲ್ಲಿ ಏನಾಯಿತೋ ಅದು ಆಗಲೇ ಆಗಿರುತ್ತಿತ್ತು ತಿಳಿಯಿತೇ?'.

English summary
Jammu And Kashmir, Article 370 Scrap: Former Chief Minister Of Karnataka Siddaramaiah Series Of Tweet Against Prime Minister Narendra Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X