• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

JDS ಜೊತೆಗೆ ಚುನಾವಣಾ ಮೈತ್ರಿ; ನಿಲುವು ಪ್ರಕಟಿಸಿದ BJP ಹೈಕಮಾಂಡ್!

|
Google Oneindia Kannada News

ಬೆಂಗಳೂರು, ಸೆ. 01: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಉದ್ದೇಶಿತ ರಾಜ್ಯ ಪ್ರವಾಸ ಬಿಜೆಪಿಯಲ್ಲಿ ಚರ್ಚೆ ಹುಟ್ಟುಹಾಕಿದೆ. ಅವರು ಮಾಡುವ ಪ್ರವಾಸದಿಂದ ಪಕ್ಷದ ಮೇಲೆ ಯಾವ ರೀತಿ ಪ್ರಭಾವ ಆಗಬಹುದು ಎಂಬುದನ್ನು ಹೈಕಮಾಂಡ್ ಗಮನಿಸುತ್ತಿದೆ ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೈಸೂರಿನಲ್ಲಿ ಮಹತ್ವದ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ನಾಲ್ಕು ದಿನಗಳ ರಾಜ್ಯ ಪ್ರವಚಾಸದಲ್ಲಿರುವ ಅರುಣ್ ಸಿಂಗ್ ಇನ್ನೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿಲ್ಲ. ಪಕ್ಷ ಸಂಘಟನೆ ಹಾಗೂ ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಜೊತೆಗೆ ಬಿಜೆಪಿ ಚುನಾವಣಾ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಈ ವಿಚಾರದ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾತನಾಡಿದ್ದಾರೆ. ಜೆಡಿಎಸ್ ಜೊತೆಗೆ ಚುನಾವಣಾ ಮೈತ್ರಿಯನ್ನು ಮಾಡಿಕೊಳ್ಳುವ ಬಗ್ಗೆ ಅವರು ಪಕ್ಷದ ನಿಲುವನ್ನು ಪ್ರಕಟಿಸಿದ್ದಾರೆ.

ಜೆಡಿಎಸ್ ಜೊತೆಗೆ ಬಿಜೆಪಿ ಚುನಾವಣಾ ಮೈತ್ರಿ?

ಜೆಡಿಎಸ್ ಜೊತೆಗೆ ಬಿಜೆಪಿ ಚುನಾವಣಾ ಮೈತ್ರಿ?

"ಜೆಡಿಎಸ್ ಪಕ್ಷವು ಮುಳುಗುತ್ತಿರುವ ಹಡಗು. ಯಾರೂ ಮುಳುಗುತ್ತಿರುವ ಹಡಗಿನ ಜೊತೆಗಿರುವ ಯೋಚನೆ ಮಾಡಲು ಸಾಧ್ಯವಿಲ್ಲ. ರಾಜ್ಯದಲ್ಲಿ ಬಿಜೆಪಿ ಮುಂದಿನ ಬಾರಿ ಪೂರ್ಣ ಬಹುಮತದೊಂದಿಗೆ ಅಧಿಕಾರ ಪಡೆಯಲಿದೆ. ಹೀಗಾಗಿ ಜೆಡಿಎಸ್ ಸೇರಿದಂತೆ ಯಾವುದೇ ಪಕ್ಷದ ಜೊತೆ ಹೊಂದಾಣಿಕೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರ ರಾಜ್ಯ ಪ್ರವಾಸದ ಬಗ್ಗೆಯೂ ಬಿಜೆಪಿ ಹೈಕಮಾಂಡ್ ನಿಲುವನ್ನು ಅರುಣ್ ಸಿಂಗ್ ಬಹಿರಂಗ ಪಡಿಸಿದ್ದಾರೆ.

ಪಕ್ಷದ ನಿಲುವನ್ನು ಪ್ರಕಟಿಸಿದ ಅರುಣ್ ಸಿಂಗ್!

ಪಕ್ಷದ ನಿಲುವನ್ನು ಪ್ರಕಟಿಸಿದ ಅರುಣ್ ಸಿಂಗ್!

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜ್ಯದ ಅತ್ಯುನ್ನತ ನಾಯಕರು. ಅವರ ರಾಜ್ಯ ಪ್ರವಾಸದಿಂದ ಪಕ್ಷಕ್ಕೆ ಒಳಿತಾಗಲಿದೆ. ಹೀಗಾಗಿ ಅವರ ಪ್ರವಾಸದ ಕುರಿತು ಹೈಕಮಾಂಡ್ ಯಾವುದೇ ಅಡ ತಡೆ ಹಾಕಿಲ್ಲ. ಹಾಕುವುದೂ ಇಲ್ಲ. ಹೀಗಾಗಿ ಈ ಬಗ್ಗೆ ಹೆಚ್ಚಿನ ಚರ್ಚೆ ಅಗತ್ಯವಿಲ್ಲ. ಪಕ್ಷದ ನಿಲುವನ್ನು ನಾನು ಪ್ರಕಟಿಸಿದ್ದೇನೆ ಎಂದು ಅರುಣ್ ಸಿಂಗ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಜೊತೆಗೆ ರಾಜ್ಯದ ಹಿತಾಸಕ್ತಿಯನ್ನು ಬಿಜೆಪಿ ಕಾಯುತ್ತಿಲ್ಲ ಎಂಬ ವಿರೋಧ ಪಕ್ಷಗಳ ನಾಯಕರ ಆರೋಪಗಳಿಗೆ ಪ್ರತಿಕ್ರಿಯೆಯನ್ನು ಕೊಟ್ಟಿದ್ದಾರೆ.

ಮೇಕೆದಾಟು ಕುರಿತು ಬಿಜೆಪಿ ನಿರ್ಧಾರವೇನು?

ಮೇಕೆದಾಟು ಕುರಿತು ಬಿಜೆಪಿ ನಿರ್ಧಾರವೇನು?

ಮೇಕೆದಾಟು ಯೋಜನೆಯ ವಿಚಾರದಲ್ಲಿ ಕರ್ನಾಟಕ ರಾಜ್ಯದ ಹಿತಾಸಕ್ತಿಯನ್ನು ಬಿಜೆಪಿ ಕಾಪಾಡುತ್ತದೆ. ನೀರಾವರಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ನಾವು ರಾಜ್ಯದ ಹಿತಾಸಕ್ತಿಯನ್ನು ಕಾಯುತ್ತೇವೆ. ಅದರೊಂದಿಗೆ ಬಿಜೆಪಿ ಯಾವುದೇ ಚುನಾವಣೆಯನ್ನು ಎದುರಿಸಲು ಸದಾ ಸಿದ್ಧವಾಗಿದೆ ಎಂದು ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಚುನಾವಣೆ ಸಿದ್ಧತೆ ಕುರಿತು ಕೇಳಿದ ಪ್ರಶ್ನೆಗೆ ಅರುಣ್ ಸಿಂಗ್ ಉತ್ತರಿಸಿದ್ದಾರೆ.

Recommended Video

  Team India ಬಗ್ಗೆ ಎಚ್ಚರಿಕೆ ಕೊಟ್ಟ England ಆಟಗಾರ | Oneindia Kannada
  ರಾಜ್ಯಕ್ಕೆ ಬರಲಿದೆ ಭರಪೂರ ವಿದೇಶಿ ಹೂಡಿಕೆ!

  ರಾಜ್ಯಕ್ಕೆ ಬರಲಿದೆ ಭರಪೂರ ವಿದೇಶಿ ಹೂಡಿಕೆ!

  ವಿದೇಶಿ ನೇರ ಹೂಡಿಕೆಯ (ಎಫ್‍ಡಿಐ) ಶೇಕಡಾ 42 ಭಾಗವು ಕರ್ನಾಟಕದಲ್ಲಿ ಹೂಡಿಕೆಯಾಗುತ್ತಿದೆ. ಹಾರ್ಟಿಕಲ್ಚರ್ ಟೆಕ್ನಾಲಜಿ ಪಾರ್ಕ್, ಫುಡ್ ಪಾರ್ಕ್, ಟೆಕ್ಸ್‍ಟೈಲ್ ಪಾರ್ಕ್ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳೂ ರಾಜ್ಯದಲ್ಲಿ ಅನುಷ್ಠಾನಕ್ಕೆ ಬರಲಿವೆ ಎಂದು ಅರುಣ್ ಸಿಂಗ್ ತಿಳಿಸಿದರು. ಜೊತೆಗೆ ಕರ್ನಾಟಕ ರಾಜ್ಯದಲ್ಲಿ ತಾಂತ್ರಿಕ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿಯ ಕುರಿತು ಸರ್ಕಾರದ ಸಾಧನೆಗೆ ಅವರು ಮೆಚ್ಚುಗೆ ಸೂಚಿಸಿದ್ದಾರೆ.


  ಭಾರತ್ ಮಾಲಾ ಯೋಜನೆಯಡಿ ಕರ್ನಾಟಕಕ್ಕೆ 6,397 ಕೋಟಿ ರೂಪಾಯಿ ನೀಡಲಾಗಿದೆ. ಮೈಸೂರು- ಬೆಂಗಳೂರು ನಡುವಿನ ಹೆದ್ದಾರಿಯನ್ನು ದಶಪಥ ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತಿದೆ. ಶೀಘ್ರವೇ ಕಾಮಗಾರಿ ಪೂರ್ಣವಾಗಲಿದ್ದು, ಮೈಸೂರಿನಿಂದ ಕೇವಲ 90 ನಿಮಿಷದಲ್ಲಿ ಬೆಂಗಳೂರು ತಲುಪಲು ಇದು ಅನುಕೂಲವಾಗಲಿ ಎಂದು ಅರುಣ್ ಸಿಂಗ್ ತಿಳಿಸಿದ್ದಾರೆ.

  English summary
  State BJP in-charge Arun Singh announces party's stand on electoral alliance with JDS in next assembly elections.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X