Breaking: ಬಿಜೆಪಿ ಪದಾಧಿಕಾರಿಗಳ ಸಭೆ; ಮಹತ್ವದ ವಿಚಾರ ಬಗ್ಗೆ ಚರ್ಚೆ

ಬೆಂಗಳೂರು ಆಗಸ್ಟ್ 18: ಕರ್ನಾಟಕ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಗುರುವಾರ ಬಗ್ಗೆ 11 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರದ ಲ್ಲಿರುವ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ಆರಂಭವಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದ ನಳೀನ್‌ ಕುಮಾರ್ ಕಟೀಲ್ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಪಕ್ಷ ಸಂಘಟನೆ, ರಾಜ್ಯ ರಾಜಕೀಯ ಬೆಳವಣಿಗೆ, ಮುಂದಿನ ಚುನಾವಣೆ ಸೇರಿದಂತೆ ಹಲವು ಪ್ರಮುಖ ಸಂಗತಿಗಳ ಕುರಿತು ಮಹತ್ತರ ಚರ್ಚೆಗಳು ನಡೆಯಲಿವೆ.

ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕುಂತೂರು, ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದಾರೆ.

Arun Singh holds Karnataka state BJP state office bearers meeting

ಈ ಪದಾಧಿಕಾರಿಗಳ ಸಭೆಗೂ ಮುನ್ನ ಬುಧವಾರವಷ್ಟೇ ಕೇಂದ್ರ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನು ಬಿಜೆಪಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದ ನಳೀನ್‌ ಕುಮಾರ್ ಕಟೀಲ್ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕುಂತೂರು, ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು ಭೇಟಿ ಮಾಡಿದರು. ಪಕ್ಷ ಸಂಘಟನೆಯ ಮಹತ್ತರ ಜವಾಬ್ದಾರಿ ವಹಿಸಿಕೊಂಡ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಭಕೋರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+