ಕೇಜ್ರಿವಾಲ್‌ಗೆ ಕಾನೂನು ಹೋರಾಟದಲ್ಲಿ ಹಿನ್ನಡೆ; ಭಾನುವಾರ ಜೈಲಿಗೆ
ನವದೆಹಲಿ, ಜೂನ್ 01: ಕಾನೂನು ಹೋರಾಟದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಹಿನ್ನಡೆ ಉಂಟಾಗಿದೆ. ಅಬಕಾರಿ ನೀತಿ ಹಗರಣದ ಆರೋಪಿಯಾಗಿರುವ ಅವರು ಭಾನುವಾರ ಜೈಲಿಗೆ ಮರಳಬೇಕಿದೆ.
ಅರವಿಂದ್ ಕೇಜ್ರಿವಾಲ್ ಜಾಮೀನು ವಿಸ್ತರಣೆ ಮಾಡುವಂತೆ ಕೋರಿ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆಯನ್ನು ದೆಹಲಿ ಕೋರ್ಟ್ ಜೂನ್ 7ಕ್ಕೆ ಮುಂದೂಡಿಕೆ ಮಾಡಿದೆ. ಆದ್ದರಿಂದ ಜಾಮೀನು ಅವಧಿ ಅಂತ್ಯಗೊಳ್ಳುತ್ತಿರುವ ಕೇಜ್ರಿವಾಲ್ ತಿಹಾರ್ ಜೈಲಿಗೆ ಮರಳಬೇಕಿದೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಷರತ್ತು ಬದ್ಧ ಜಾಮೀನು ಅವಧಿ ಜೂನ್ 1ಕ್ಕೆ ಅಂತ್ಯಗೊಳ್ಳುತ್ತಿದೆ.
ದೆಹಲಿ ಕೋರ್ಟ್‌ನಲ್ಲಿ ವಿಚಾರಣೆ: ಅರವಿಂದ್ ಕೇಜ್ರಿವಾಲ್ ಜಾಮೀನು ಅವಧಿ ವಿಸ್ತರಣೆ ಮಾಡುವಂತೆ ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಕೋರ್ಟ್ ಕಳೆ ಹಂತದ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿ ಎಂದು ಸೂಚನೆ ನೀಡಿ, ಅರ್ಜಿ ತಿರಸ್ಕರಿಸಿತ್ತು.
ಆದ್ದರಿಂದ ಅರವಿಂದ್ ಕೇಜ್ರಿವಾಲ್ ದೆಹಲಿ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಶನಿವಾರ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ ಜಾಮೀನು ವಿಸ್ತರಣೆ ಮಾಡಲು ಆಕ್ಷೇಪಣೆ ಸಲ್ಲಿಕೆ ಮಾಡಿತು.
ಅರವಿಂದ್ ಕೇಜ್ರಿವಾಲ್ ವಿಚಾರಣೆ ಸಂದರ್ಭದಲ್ಲಿ ಆರೋಗ್ಯ ಸೇರಿದಂತೆ ವಿವಿಧ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ವಾದ ಮಂಡಿಸಿತು. ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ನಾನು ಜೂನ್ 2ರಂದು ಶರಣಾಗುತ್ತೇನೆ ಎಂದು ಹೇಳಿದ್ದಾರೆ ಎಂದು ವಾದಿಸಿದರು.
ಅರವಿಂದ್ ಕೇಜ್ರಿವಾಲ್‌ರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಲೋಕಸಭೆ ಚುನಾವಣೆ 2024 ಪ್ರಚಾರದಲ್ಲಿ ಭಾಗವಹಿಸಲು ಸುಪ್ರೀಂಕೋರ್ಟ್ ಮೇ 10ರಂದು ಅರವಿಂದ್ ಕೇಜ್ರಿವಾಲ್‌ಗೆ 21 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು ಮತ್ತು ಜೂನ್ 2ರಂದು ಜೈಲಿಗೆ ವಾಪಸ್ ಆಗಬೇಕು ಎಂದು ಷರತ್ತು ವಿಧಿಸಿತ್ತು.
ತಮಗೆ ಗಂಭೀರ ಕಾಯಿಲೆಗಳಿವೆ, ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಿದೆ ಎಂದು ಆದ್ದರಿಂದ ಜಾಮೀನು ಅವಧಿ ವಿಸ್ತರಣೆ ಮಾಡಬೇಕು ಎಂದು ಅರವಿಂದ್ ಕೇಜ್ರಿವಾಲ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಕೋರ್ಟ್ ಕೆಳಹಂತದ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಎಂದು ಸೂಚನೆ ನೀಡಿತ್ತು.
ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ್ದ ಅರವಿಂದ್ ಕೇಜ್ರಿವಾಲ್ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಾನು ಮನೆಯಿಂದ ಹೊರಡುತ್ತೇನೆ, ಜೈಲಿಗೆ ಹೋಗಿ ಶರಣಾಗುತ್ತೇನೆ ಎಂದು ಹೇಳಿದ್ದರು. ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡುವ ಮೊದಲು 50 ದಿನಗಳ ಕಾಲ ಜೈಲಿನಲ್ಲಿದ್ದರು.
2024ರ ಲೋಕಸಭೆ ಚುನಾವಣೆಯಲ್ಲಿ ಎಎಪಿ ಪಕ್ಷ ಕಾಂಗ್ರೆಸ್ ನೇತೃತ್ವದ ಎಎಪಿ ಮೈತ್ರಿಕೂಟವನ್ನು ಬೆಂಬಲಿಸಿದೆ. ಸೀಟು ಹಂಚಿಕೆ ಮಾಡಿಕೊಂಡು ಚುನಾವಣೆ ಎದುರಿಸಿದೆ. ಜೂನ್ 4ರಂದು ಲೋಕಸಭೆ ಚುನಾವಣೆ ಫಲಿತಾಂಶ ಘೋಷಣೆಯಾಗಲಿದೆ.
ಅರವಿಂದ್ ಕೇಜ್ರಿವಾಲ್ ಭಾನುವಾರ ಜೈಲಿಗೆ ಹೋಗುವ ಹಿನ್ನಲೆಯಲ್ಲಿ ಇಂಡಿಯಾ ಮೈತ್ರಿಕೂಟ ನವದೆಹಲಿಯಲ್ಲಿ ಇಂದು ಸಂಜೆ ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಲೋಕಸಭೆ ಚುನಾವಣೆ 7ನೇ ಹಂತದ ಮತದಾನವೂ ಇಂದು ನಡೆಯುತ್ತಿದ್ದು, ಎಕ್ಸಿಟ್ ಪೋಲ್ ಫಲಿತಾಂಶ ಸಂಜೆ ಪ್ರಕಟವಾಗಲಿದೆ.
ಜಾಮೀನು ವಿಸ್ತರಣೆ ಕೋರಿ ಅರವಿಂದ್ ಕೇಜ್ರಿವಾಲ್ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆಯನ್ನು ಜೂನ್ 7ರ ತನಕ ದೆಹಲಿ ಕೋರ್ಟ್ ಮುಂದೂಡಿದೆ. ಆದ್ದರಿಂದ ಅವರ ಜಾಮೀನು ಅವಧಿ ಅಂತ್ಯವಾಗುತ್ತಿದ್ದು, ಜೈಲಿಗೆ ಮರಳಬೇಕಿದೆ. ಜೂನ್ 7ರ ಬಳಿಕ ಕೋರ್ಟ್ ಜಾಮೀನು ವಿಸ್ತರಣೆ ಮಾಡಿ ರಿಲೀಫ್ ನೀಡಲಿದೆಯೇ? ಕಾದು ನೋಡಬೇಕಿದೆ.
ದೆಹಲಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ಎಎಪಿ ಪಕ್ಷ ಅಧಿಕಾರದಲ್ಲಿದೆ. ಲೋಕಸಭೆ ಚುನಾವಣೆಯಲ್ಲಿ ಎಎಪಿ ಪಕ್ಷ ಎಷ್ಟು ಸ್ಥಾನಗಳಲ್ಲಿ ಜಯಗಳಿಸಲಿದೆ? ಎಂಬುದು ಎಲ್ಲರ ಕುತೂಹಲವಾಗಿದೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications