ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ಜುಲೈ 15: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿಗೆ ಹಲವು ಸಾಲ ಸೌಲಭ್ಯಕ್ಕಾಗಿ ಆರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಿದೆ.
ಸಾಲ ಸೌಲಭ್ಯ ಪಡೆಯಲು ಕರ್ನಾಟಕ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. "ನಮೂನೆ -ಜಿ" ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು, ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರ ಮೊಬೈಲ್ ಸಂಖ್ಯೆಯ ಆಧಾರ್ ಸಂಖ್ಯೆಗೆ ಜೋಡಣೆಯಾಗಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿರಬೇಕು.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯ ಮಾರ್ಗಸೂಚಿ
* ಈ ಯೋಜನೆಯಲ್ಲಿ ನಿಗಮವು ಸ್ವಯಂ ಉದ್ಯೋಗ ಕೈಗೊಳ್ಳಲು ರೂ.1,00,000/-ಗಳ ಆರ್ಥಿಕ ನೆರವು ಒದಗಿಸಲಾಗುವುದು ಹಾಗೂ ಈ ಮೊತ್ತದಲ್ಲಿ ರೂ.20,000/-ಗಳ ಸಹಾಯಧನ, ಬಾಕಿ ಉಳಿಕೆ ಮೊತ್ತವಾದ ರೂ.80,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.
* ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ.3,00,000/-ಗಳ ಮಿತಿ ಒಳಗಿರಬೇಕು.
*ಅರ್ಜಿದಾರರು 18 ವರ್ಷ ಮೇಲ್ಪಟ್ಟು 55 ವರ್ಷದೊಳಗಿನವರಾಗಿರಬೇಕು.
*ಮಹಿಳೆಯರಿಗೆ 33%, ವಿಶೇಷಚೇತನರಿಗೆ 5% ಮತ್ತು ತೃತೀಯಲಿಂಗಿಗಳಿಗೆ 5% ಮೀಸಲಾತಿ ಇರುತ್ತದೆ.
*ಒಂದು ಕುಟುಂಬದಲ್ಲಿ ಒಂದು ಅಭ್ಯರ್ಥಿಯನ್ನು ಮಾತ್ರ ಆಯ್ಕೆ ಮಾಡಲಾಗುವುದು.

*ಈ ಯೋಜನೆ ಅಡಿಯಲ್ಲಿ ಪಡೆದ ಸಾಲವನ್ನು 3 ವರ್ಷಗಳ ಅವಧಿಯಲ್ಲಿ 34 ಮಾಸಿಕ ಕಂತುಗಳಲ್ಲಿ ಅಸಲು ಮತ್ತು ಬಡ್ಡಿ ಸೇರಿಸಿ ಮರುಪಾವತಿಸಬೇಕು 2 ತಿಂಗಳ ವಿರಾಮ ಅವಧಿ ಇರುತ್ತದೆ. ಕಡ್ಡಾಯವಾಗಿ ಎಲ್ಲಾ ಮರುಪಾವತಿಯನ್ನು Online ಮುಖಾಂತರ ಪಾವತಿಸಬೇಕು.
* 2019-20 ಮತ್ತು 2020-21ನೇ ಸಾಲಿನ ಫಲಾನುಭವಿಗಳು ಪಡೆದ ಸಾಲವನ್ನು ಅವಧಿಯೊಳಗೆ ಸಂಪೂರ್ಣವಾಗಿ ಮರುಪಾವತಿಸಿದ್ದಲ್ಲಿ, ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಅರಿವು ಶೈಕ್ಷಣಿಕ ಸಾಲ ಯೋಜ -ಸಿ.ಇ.ಟಿ (CET) ಹಾಗೂ ಎನ್.ಇ.ಇ.ಟಿ (NEET) ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು.
ಆಸಕ್ತರು ವೆಬ್ ಸೈಟ್ http://www.kacdc.karnataka.gov.in ನಲ್ಲಿ ಆಗಸ್ಟ್ 31ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ (ನಿ), ಜಿಲ್ಲಾ ವ್ಯವಸ್ಥಾಪಕರು ಕಚೇರಿ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ, ಬೆಂಗಳೂರು-560 032 ಅಥವಾ ದೂರವಾಣಿ ಸಂಖ್ಯೆ 9448451111, 080-23539601 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ (ನಿ) ದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡದ ಅವಶ್ಯಕತೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ 100 ರಿಂದ 150 ಸಂಖ್ಯಾಬಲವುಳ್ಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ತೆರೆಯಲು ವಿದ್ಯಾರ್ಥಿನಿಲಯಕ್ಕೆ ಕಟ್ಟಡದ ಅವಶ್ಯಕತೆ ಇದೆ. ಎಲ್ಲಾ ಮೂಲಭೂತ ಸೌಕರ್ಯ ಒಳಗೊಂಡಿರುವ ಹಾಗೂ ವಿದ್ಯಾರ್ಥಿನಿಲಯ ನಡೆಸಲು ಯೋಗ್ಯವಿರುವ ಕಟ್ಟಡಗಳನ್ನು ಹೊಂದಿರುವ ಕಟ್ಟಡದ ಮಾಲೀಕರು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ದಕ್ಷಿಣ ತಾಲ್ಲೂಕು, ಜಿಲ್ಲಾ ಪಂಚಾಯತ್ ಕಚೇರಿ ಆವರಣ, ಬನಶಂಕರಿ, ಕನಕಪುರ ಮುಖ್ಯರಸ್ತೆ, ಬೆಂಗಳೂರು ಇಲ್ಲಿ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9900833882 / 9880738902 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications