ಯಡಿಯೂರಪ್ಪ ಮಾತುಗಳು ನನಗೆ ಸ್ಪೂರ್ತಿದಾಯಕ: ಕನ್ನಡದಲ್ಲಿ ಟ್ವೀಟ್ ಮಾಡಿ, ಬಿಎಸ್‌ವೈ ಭಾಷಣದ ವಿಡಿಯೊ ಹಂಚಿಕೊಂಡ ಪ್ರಧಾನಿ ಮೋದಿ
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಕೊನೆಯ ಭಾಷಣ ಮಾಡಿದ್ದಾರೆ. ಆ ಭಾಷಣದ ವಿಡಿಯೊವನ್ನು ಹಂಚಿಕೊಂಡಿರುವ ಪ್ರಧಾನಿ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು, ಫೆಬ್ರವರಿ 24: ಕರ್ನಾಟಕದ ಪ್ರಭಾವಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ವಿಧಾಯದ ಭಾಷಣ ಮಾಡಿದ್ದಾರೆ. ವಿಧಾನಸಭೆಯಲ್ಲಿ ಮಾಡಿದ ಕೊನೆಯ ಭಾಷಣದಲ್ಲಿ ಅವರು ಸ್ಪೂರ್ತಿದಾಯಕ ಮಾತುಗಳನ್ನು ಆಡಿದ್ದಾರೆ. ನಿವೃತ್ತಿ ನಂತರವೂ ರಾಜ್ಯದಾದ್ಯಂತ ಸುತ್ತಾಡಿ ಬಿಜೆಪಿಯನ್ನು ಸಂಘಟಿಸಿ, ಅಧಿಕಾರಕ್ಕೆ ತರುವುದಾಗಿಯೂ ಅವರು ಹೇಳಿದ್ದಾರೆ.
ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಶ್ರೀ @BSYBJP ಅವರ ಮನದಾಳದ ಮಾತು. https://t.co/NYzqQKPj77
— BJP Karnataka (@BJP4Karnataka) February 23, 2023
'ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಮತ್ತು ಕೊನೆಯ ಉಸಿರು ಇರುವವರೆಗೂ ಬಿಜೆಪಿಯೊಂದಿಗೆ ಕೆಲಸ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಪಕ್ಷದ ನಾಯಕರಾಗಲಿ, ಕಾರ್ಯಕರ್ತರಾಗಲಿ ಯಾವುದೇ ಕಾರಣಕ್ಕೂ ಎದುಗುಂದಬಾರದು. ಬಿಜೆಪಿ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಮನೆಮನೆಗೆ ತೆರಳಿ ಜನರಿಗೆ ಮನವರಿಕೆ ಮಾಡಿಕೊಡಬೇಕು' ಎಂದು ಬಿಎಸ್‌ವೈ ತಿಳಿಸಿದ್ದಾರೆ.

'ಬಿಜೆಪಿಯಾಗಲಿ, ಪ್ರಧಾನಿ ನರೇಂದ್ರ ಮೋದಿ ಆಗಲಿ ನನ್ನನ್ನು ಕಡೆಗಣಿಸಿಲ್ಲ. ಕೆಲ ವಿರೋಧ ಪಕ್ಷಗಳ ನಾಯಕರು ನನ್ನ ಬಗ್ಗೆ ಅನುಕಂಪ ತೋರಿಸುತ್ತಿದ್ದಾರೆ. ಯಡಿಯೂರಪ್ಪನವರನ್ನು ಬಿಜೆಪಿ ಕಡೆಗಣಿಸಿದೆ ಎಂದು ಹೇಳುತ್ತಿದ್ದಾರೆ. ಅವರೀಗ ರಾಜಕಾರಣ ಮಾಡುತ್ತಿದ್ದಾರೆ. ನಾನು ಒಂದು ಮಾತನ್ನು ಹೇಳಬಯಸುತ್ತೇನೆ. ಬಿಜೆಪಿಯಾಗಲಿ, ಮೋದಿಯಾಗಲಿ ನನ್ನನ್ನು ಕಡೆಗಣಿಸಿಲ್ಲ' ಎಂದು ಬಿಎಸ್‌ವೈ ಹೇಳಿದ್ದಾರೆ.
ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ. https://t.co/tdpgUXqRAz
— Narendra Modi (@narendramodi) February 24, 2023
ಈ ಎಲ್ಲ ಮಾತುಗಳಿರುವ ವಿಡಿಯೊ ಲಿಂಕ್ ಅನ್ನು ಕರ್ನಾಟಕ ಬಿಜೆಪಿ ಘಟಕವು ಟ್ವೀಟ್ ಮಾಡಿದೆ. 'ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಶ್ರೀ ಬಿ ಎಸ್ ಯಡಿಯೂರಪ್ಪನವರ ಮನದಾಳದ ಮಾತು' ಎಂದು ಬರೆದುಕೊಂಡಿದೆ.

ಇದನ್ನು ಮರುಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 'ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ' ಎಂದು ತಿಳಿಸಿದ್ದಾರೆ.
ತಮ್ಮ ಆತ್ಮೀಯ ಹಾರೈಕೆಗಳಿಗೆ ಧನ್ಯವಾದಗಳು ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ @narendramodi ರವರೇ! ತಮ್ಮ ಸ್ಫೂರ್ತಿದಾಯಕ ನಾಯಕತ್ವದಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಕೂಡ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ, ಇನ್ನಷ್ಟು ಹುಮ್ಮಸ್ಸಿನಿಂದ ನಿರಂತರ ಕೆಲಸ ಮಾಡಲಿದ್ದೇವೆ. https://t.co/akvTnLjgSR
— B.S.Yediyurappa (@BSYBJP) February 24, 2023
ಇದಕ್ಕೆ ಪ್ರತಿಕ್ರಿಯಿಸಿರುವ ಬಿಎಸ್‌ವೈ, 'ತಮ್ಮ ಆತ್ಮೀಯ ಹಾರೈಕೆಗಳಿಗೆ ಧನ್ಯವಾದಗಳು ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೇ, ತಮ್ಮ ಸ್ಫೂರ್ತಿದಾಯಕ ನಾಯಕತ್ವದಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಕೂಡ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ, ಇನ್ನಷ್ಟು ಹುಮ್ಮಸ್ಸಿನಿಂದ ನಿರಂತರ ಕೆಲಸ ಮಾಡಲಿದ್ದೇವೆ' ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರ ಟ್ವೀಟ್ ಅನ್ನು ಮರುಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 'ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ, ಪಕ್ಷದ ವರಿಷ್ಠ ನಾಯಕರು ಹಾಗೂ ನನ್ನ ಮಾರ್ಗದರ್ಶಕರಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ನೀಡಿದ ಭಾಷಣವನ್ನು ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತುಂಬು ಹೃದಯದಿಂದ ಕೊಂಡಾಡಿರುವುದು ಹೆಮ್ಮೆಯ ಸಂಗತಿ. ತಾವೊಬ್ಬ ವಿನಮ್ರ ಕಾರ್ಯಕರ್ತ ಅನ್ನುವ ಮೂಲಕ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ' ಎಂದು ತಿಳಿಸಿದ್ದಾರೆ.
'ಸ್ಥಾನಮಾನವನ್ನು ಲೆಕ್ಕಿಸದೆ ಒಳಿತನ್ನು ಮೆಚ್ಚಿ ಬೆನ್ನು ತಟ್ಟುವ ಶ್ರೀ ನರೇಂದ್ರ ಮೋದಿಜೀ ಅವರ ಗುಣ ಅನುಕರಣೀಯ. ಹಾಗೂ ಬಿಎಸ್‌ವೈ ಅವರು ನಾನು ಮಂಡಿಸಿದ ಬಜೆಟ್ ಬಗ್ಗೆ ವ್ಯಕ್ತಪಡಿಸಿದ ಶ್ಲಾಘನೆಯ ಮಾತುಗಳು ನನಗೆ ಪ್ರೇರಣೆಯಾಗಿವೆ' ಎಂದೂ ಬೊಮ್ಮಾಯಿ ಹೇಳಿದ್ದಾರೆ.












Click it and Unblock the Notifications