ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಅಭಯ್ ನೇಮಕ
ಬೆಂಗಳೂರು, ಏಪ್ರಿಲ್ 10: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಒಕಾ ಅವರನ್ನು ನೇಮಿಸಲಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರಿಗೆ ಸುಪ್ರಿಂ ನ್ಯಾಯಮೂರ್ತಿಯಾಗಿ ಬಡ್ತಿ ದೊರೆತ ಕಾರಣ ಹೊಸ ನ್ಯಾಯಮೂರ್ತಿಗಳ ನೇಮಕವಾಗಿದೆ.
ದಿನೇಶ್ ಮಾಹೇಶ್ವರಿ ಸೇರಿದಂತೆ ಇನ್ನೂ ಇಬ್ಬರನ್ನು ಸುಪ್ರಿಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡುವಂತೆ ಕೊಲಿಜಿಯಂ ತೀರ್ಮಾನ ತೆಗೆದುಕೊಂಡು ಶೀಫಾರಸ್ಸು ಮಾಡಿತ್ತು.

ಅಭಯ್ ಒಕಾ ಅವರ ಜೊತೆಗೆ ಇನ್ನೂ ಐವರನ್ನು ವಿವಿಧ ರಾಜ್ಯಗಳ ಹೈಕೋರ್ಟ್ ಗೆ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಿಸಲು ಸುಪ್ರಿಂ ನ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು.












Click it and Unblock the Notifications