ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ ಕೊಟ್ಟ ಶಿಕ್ಷಣ ಇಲಾಖೆ!

ಬೆಂಗಳೂರು, ನ. 04: ಉಪ ಚುನಾವಣೆ ಮುಗಿಯುತ್ತಿದ್ದಂತೆಯೆ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ ಕೊಟ್ಟಿದೆ. ಈಗಾಗಲೇ ಶಿಕ್ಷಕರ ವರ್ಗಾವಣೆಗೆ ಎಲ್ಲ ಪೂರ್ವಭಾವಿ ಕ್ರಮಗಳು ಸಿದ್ಧಗೊಂಡಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ನೀತಿ ಸಂಹಿತೆ ಮುಕ್ತಾಯಗೊಂಡ ನಂತರವೇ ವರ್ಗಾವಣಾ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿಕೆ ಕೊಟ್ಟಿದ್ದಾರೆ.

ಹಾಗೆಯೇ ಪದವಿ ಪೂರ್ವ ಉಪನ್ಯಾಸಕರ ವರ್ಗಾವಣಾ ಕೌನ್ಸೆಲಿಂಗ್‍ನ್ನು ನೀತಿ ಸಂಹಿತೆ ಮುಗಿದ ತಕ್ಷಣವೇ ಕೈಗೆತ್ತಿಕೊಳ್ಳಲಾಗುವುದು. ಅದಕ್ಕಿಂತ ಮೊದಲು ಪ್ರಾಂಶುಪಾಲರ ಬಡ್ತಿ ಮತ್ತು ಅವರ ವರ್ಗಾವಣೆ ಮಾಡಲಾಗುವುದು. ಪ್ರಾಂಶುಪಾಲರ ವರ್ಗಾವಣೆಯಿಂದ ತೆರವಾಗುವ ಉಪನ್ಯಾಸಕ ಹುದ್ದೆಗಳನ್ನು ಒಳಗೊಂಡಂತೆ ಖಾಲಿಯಾಗುವ ಉಪನ್ಯಾಸಕರ ಹುದ್ದೆಗಳನ್ನು ಸೇರಿಸಿ ಉಪನ್ಯಾಸಕರ ವರ್ಗಾವಣಾ ಕೌನ್ಸೆಲಿಂಗ್ ಆರಂಭಿಸಲಾಗುವುದು ಎಂದು ಅವರು ವಿವರಿಸಿದರು.

As By-election Process And State Govt Is Giving Good News To Govt School Teachers

ಬೆಂಗಳೂರಿನ ಸಮಗ್ರ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಸಾಶಿಇ ಆಯುಕ್ತರು, ನಿರ್ದೇಶಕರುಗಳು, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ ನಂತರ ಸುರೇಶ್ ಕುಮಾರ್ ಮಾತನಾಡಿದ್ದಾರೆ.

Recommended Video

      Hindu ಭಾವನೆಗಳನ್ನು ಘಾಸಿಗೊಳಿಸಿದ್ರಾ Amithabh bachan | KBC | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+