ಗೊಂದಲಕ್ಕೆ ತೆರೆ, ಅಧಿಕೃತವಾಗಿ ಬಿಜೆಪಿ ಸೇರಿದ ಎ.ಎಸ್ ಪಾಟೀಲ್ ನಡಹಳ್ಳಿ

ಬೆಂಗಳೂರು, ಮಾರ್ಚ್ 21: ದೇವರಹಿಪ್ಪರಗಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಎ.ಎಸ್ ಪಾಟೀಲ್ ನಡಹಳ್ಳಿ 'ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಲು ವಿಶೇಷ ಅಧಿವೇಶನ ನಡೆಸಿ ನಿರ್ಣಯ ಕೈಗೊಳ್ಳಬೇಕು' ಎಂದು ಒತ್ತಾಯಿಸಿದ್ದರು. ಜತೆಗೆ ಪದೇ ಪದೇ ಕಾಂಗ್ರೆಸ್ ಸರಕಾರದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರು. ಈ ಹಿನ್ನಲೆಯಲ್ಲಿ 2017ರ ಅಕ್ಟೋಬರ್ 13ರಂದು ಅವರನ್ನು ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಲಾಗಿತ್ತು.

ಅವರು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಿದ್ದರು. ಮತ್ತು '2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ' ಎಂದು ಘೋಷಣೆ ಮಾಡಿದ್ದರು.

AS Patil Nadahalli joins BJP infront of BS Yeddyurappa

ಕಳೆದ ಕೆಲವು ದಿನಗಳಿಂದ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಓಡಾಡುತ್ತಿದ್ದವು. ಇದೀಗ ಅವರು ಅಧಿಕೃತವಾಗಿ ಬಿಜೆಪಿ ಧ್ವಜ ಹಿಡಿದಿದ್ದಾರೆ.

AS Patil Nadahalli joins BJP infront of BS Yeddyurappa

ದೇವರಹಿಪ್ಪರಗಿ ಕ್ಷೇತ್ರ ವಿಜಯಪುರ ಜಿಲ್ಲೆಯಲ್ಲಿದೆ. 2013ರ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎ.ಎಸ್.ಪಾಟೀಲ ನಡಹಳ್ಳಿ ಅವರು 36,231 ಮತಗಳನ್ನು ಪಡೆದು ಬಿಜೆಪಿಯ ಸೋಮನಗೌಡ ಪಾಟೀಲ ಅವರನ್ನು ಸೋಲಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+