ದೇವರಹಿಪ್ಪರಗಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಬಿಜೆಪಿಗೆ?

ಬೆಂಗಳೂರು, ಮಾರ್ಚ್ 19 : ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಬಿಜೆಪಿ ಸೇರುವ ತಯಾರಿ ನಡೆಸಿದ್ದಾರೆ?. 2015ರಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅವರನ್ನು ಉಚ್ಛಾಟನೆ ಮಾಡಲಾಗಿತ್ತು.

'ನಾನೀಗ ಸ್ವತಂತ್ರ ಶಾಸಕ, ಕಾಂಗ್ರೆಸ್ ಪಕ್ಷ ನನ್ನನ್ನು ಉಚ್ಛಾಟನೆ ಮಾಡಿದೆ. ವರ್ಷದಿಂದ ಜೆಡಿಎಸ್‌ ಜೊತೆ ಗುರುತಿಸಿಕೊಂಡಿದ್ದೇನೆ, ಪಕ್ಷ ಸಂಘಟನೆ ಮಾಡುತ್ತಿದ್ದೇನೆ' ಎಂದು ಎ.ಎಸ್.ಪಾಟೀಲ ನಡಹಳ್ಳಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

'ದೇವರಹಿಪ್ಪರಹಿ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ, ಮುದ್ದೆಬಿಹಾಳ ಕ್ಷೇತ್ರದಿಂದ ನಾನು ಸ್ಪರ್ಧಿಸಲು ಕೆಲಸ ಮಾಡುತ್ತಿರುವೆ. ಆದರೆ, ಈವರೆಗೂ ಯಾವುದೇ ಪ್ರಾಥಮಿಕ ಸದಸ್ಯತ್ವನ್ನು ನಾನು ಪಡೆದಿಲ್ಲ' ಎಂದು ಎ.ಎಸ್.ಪಾಟೀಲ ನಡಹಳ್ಳಿ ಸ್ಪಷ್ಟಪಡಿಸಿದ್ದಾರೆ.

AS Patil Nadahalli

'ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮುದ್ದೇಬಿಹಾಳ ಕ್ಷೇತ್ರಕ್ಕೆ ನನ್ನನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ನನ್ನ ಹೆಸರನ್ನು ಒಪ್ಪಿಗೆ ಪಡೆಯದೇ ಘೋಷಣೆ ಮಾಡಲಾಗಿದೆ. ಆದರೆ, ನಾನಿನ್ನೂ ತೀರ್ಮಾನ ಕೈಗೊಂಡಿಲ್ಲ. ಮಾರ್ಚ್ 23ರ ನಂತರ ಆಪ್ತರ ಜೊತೆ ಸಮಾಲೋಚನೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇನೆ' ಎಂದು ನಡಹಳ್ಳಿ ಹೇಳಿದ್ದಾರೆ.

'ನಾನು ಎಲ್ಲಿಗೇ ಹೋದರೂ ಅಧಿಕೃತವಾಗಿ ಘೋಷಣೆ ಮಾಡಿಯೇ ಹೋಗುವೆ. ನಾನೀನ ಪಕ್ಷೇತರ ಶಾಸಕನಂತೆ' ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+