ಕುರಾನ್ ಹೇಳಿರುವಂತೆ ಪತ್ನಿ ನೋಡಿಕೊಳ್ಳುವುದು ಪತಿ ಕರ್ತವ್ಯ

ಬೆಂಗಳೂರು, ಜುಲೈ 30 : ಪವಿತ್ರ ಕುರಾನ್‌ನ ಪ್ರಕಾರ ಪತ್ನಿ, ಮಕ್ಕಳನ್ನು ನೋಡಿಕೊಳ್ಳುವುದು ಪತಿಯ ಜವಾಬ್ದಾರಿ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಮಾಸಿಕ 25 ಸಾವಿರ ರೂ. ಜೀವನಾಂಶ ಪಾವತಿಸುವಂತೆ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಪತಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.

ಇದರಿಂದಾಗಿ ಆ ಪತಿರಾಯ ಜೀವನಾಂಶ ನೀಡಲೇಬೇಕಾಗಿದೆ. ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಪೀಠ ಈ ಆದೇಶವನ್ನು ನೀಡಿದೆ. ಪತ್ನಿಗೆ ಘೋಷಿಸಿರುವ ಮಾಸಿಕ 25 ಸಾವಿರ ರೂ. ಜೀವನಾಂಶ ಅತ್ಯಂತ ಹೆಚ್ಚಾಗಿದೆ ಎಂಬ ಅರ್ಜಿದಾರರ ವಾದವನ್ನು ರಕ್ತಕ್ಕಿಂತ ರೊಟ್ಟಿ ದುಬಾರಿಯಾಗಿರುವ ಈ ದಿನಗಳಲ್ಲಿ ಒಪ್ಪಲಾಗದು ಎಂದು ಹೇಳಿ ಅರ್ಜಿ ವಜಾಗೊಳಿಸಿದೆ.

court-news

ಹೈಕೋರ್ಟ್‌ ಏನು ಹೇಳಿದೆ?; ಪತಿಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಮಾಸಿಕ 25 ಸಾವಿರ ರೂ. ಜೀವನಾಂಶ ಪಾವತಿಸುವಷ್ಟು ಆದಾಯವಿಲ್ಲ ಎನ್ನುವುದು ಅರ್ಜಿದಾರರ ವಾದವಾಗಿದೆ. ಪತ್ನಿ ಹಾಗೂ ಮಕ್ಕಳ ಅದರಲ್ಲೂ ಮುಖ್ಯವಾಗಿ ಅವರು ಅಸಮರ್ಥರಾಗಿದ್ದ ಸಂದರ್ಭದಲ್ಲಿ ಅವರನ್ನು ನೋಡಿಕೊಳ್ಳುವುದು ಪತಿಯ ಕರ್ತವ್ಯವಾಗಿರುತ್ತದೆ ಎಂದು ಪವಿತ್ರ ಕುರಾನ್‌ ಹಾಗೂ ಹದೀತ್‌ನಲ್ಲಿ ಹೇಳಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಜತೆಗೆ ಪತ್ನಿ ಉದ್ಯೋಗದಲ್ಲಿದ್ದಾಳೆ ಅಥವಾ ಆದಾಯದ ಮೂಲ ಹೊಂದಿದ್ದಾಳೆಂಬುದನ್ನು ಸಾಬೀತುಪಡಿಸುವ ದಾಖಲೆಗಳನ್ನು ಪತಿ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಹೀಗಿದ್ದರೂ, ಪತಿ ತನ್ನ ಹೆಗಲ ಮೇಲಿನ ಜವಾಬ್ದಾರಿ ನಿಬಾಯಿಸಬೇಕಾಗುತ್ತದೆ.

ಮದುವೆ ವೈಫಲ್ಯದಿಂದ ಪತ್ನಿ ನಿರ್ಗತಿಕಳಾಗಬಾರದು ಅಥವಾ ನೆಲೆ ಇಲ್ಲದಂತಾಗಬಾರದು ಎಂಬ ಉದ್ದೇಶದಿಂದ ಮಧ್ಯಂತರ ಅಥವಾ ಶಾಶ್ವತ ಜೀವನಾಂಶ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಕೋರಿ ಪತಿ ಸಲ್ಲಿಸಿರುವ ಅರ್ಜಿ ತಿರಸ್ಕರಿಸಲು ಅರ್ಹವಾಗಿದೆ ಎಂದಿರುವ ಹೈಕೋರ್ಟ್‌, ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ಇಬ್ಬರು ಗಂಡು ಮಕ್ಕಳಿರುವ ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಮೊದಲ ಮಗ ಅಂಗವಿಕಲನಾಗಿದ್ದು, 2ನೇ ಮಗ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದಾನೆ. ಮಕ್ಕಳಿಬ್ಬರೂ ತಾಯಿಯೊಂದಿಗೆ ವಾಸಿಸುತ್ತಿದ್ದಾರೆ. ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಪತ್ನಿ, ಜೀವನ ನಿರ್ವಹಣೆಗಾಗಿ ಮಾಸಿಕ 27 ಸಾವಿರ ರೂ. ಜೀವನಾಂಶ ಪಾವತಿಸಲು ಪತಿಗೆ ನಿರ್ದೇಶಿಸುವಂತೆ ಕೋರಿದ್ದರು.

ಕೌಟುಂಬಿಕ ನ್ಯಾಯಾಲಯ 2019ರ ಡಿ.16ರಂದು ಪತ್ನಿಗೆ ಮಾಸಿಕ 25 ಸಾವಿರ ರೂ. ಜೀವನಾಂಶ ಪಾವತಿಸುವಂತೆ ಪತಿಗೆ ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿ ಪತಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+