ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಓವೈಸಿ 'ಯೂ ಟರ್ನ್', ಚುನಾವಣೆ ಸ್ಪರ್ಧೆಯಿಂದ ದೂರ ಸರಿದ ಎಐಎಂಐಎಂ

By Sachhidananda Acharya
|
Google Oneindia Kannada News

ಬೆಂಗಳೂರು, ಏಪ್ರಿಲ್ 15: ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದ ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಓವೈಸಿ ಕರ್ನಾಟಕ ಎಂಟ್ರಿ ಸಮಾಚಾರ ಮತ್ತು ಗೌಡ್ರ ಲೆಕ್ಕಾಚಾರ ಓವೈಸಿ ಕರ್ನಾಟಕ ಎಂಟ್ರಿ ಸಮಾಚಾರ ಮತ್ತು ಗೌಡ್ರ ಲೆಕ್ಕಾಚಾರ

ನಾವು ಕರ್ನಾಟಕದಲ್ಲಿ ಸ್ಪರ್ಧೆ ಮಾಡುವುದಿಲ್ಲ. ಜಾತ್ಯಾತೀತ ಮತಗಳನ್ನು ಒಡೆಯುವುದು ನಮಗಿಷ್ಟವಿಲ್ಲ ಎಂದು ಸ್ಪರ್ಧೆಯಿಂದ ಹಿಂದೆ ಸರಿದಿರುವ ತಮ್ಮ ನಿರ್ಧಾರಕ್ಕೆ ಅವರು ಕಾರಣ ನೀಡಿದ್ದಾರೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಈ ಹಿಂದೆ ಅಸಾದುದ್ದೀನ್ ಓವೈಸಿ ಸ್ಪರ್ಧೆಯಿಂದ ಹಿಂದೆ ಸರಿಯುವ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಬಯಸಿತ್ತು. ಈ ಸಂಬಂಧ ಮಾತುಕತೆಗೆ ಕಾಂಗ್ರೆಸ್ ಕಡೆಯಿಂದ ಜಮೀರ್ ಅಹಮದ್ ಖಾನ್ ರನ್ನು ಕಳುಹಿಸಲಾಗಿತ್ತು. ಆದರೆ ಈ ನಿರ್ಧಾರಕ್ಕೆ ಸಹಮತ ತೋರದ ಓವೈಸಿ ಕರ್ನಾಟಕದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು. ಮತ್ತು ಸಿದ್ದರಾಮಯ್ಯ ವಿರುದ್ಧ ಆಕ್ರೋಶವನ್ನೂ ಹೊರ ಹಾಕಿದ್ದರು.

Asaduddin Owaisi U Turn, AIIMM left the Karnataka election contest

ಇದಾದ ಬಳಿಕ ಓವೈಸಿಯನ್ನು ಸಂಪರ್ಕಿಸಿದ್ದು ಜೆಡಿಎಸ್. ಇನ್ನೇನು ಓವೈಸಿ ದೇವೇಗೌಡರ ಜತೆ ಕೈ ಜೋಡಿಸಿದರು ಎಂಬ ಮಾತುಗಳು ಕೇಳಿ ಬಂದಿದ್ದವು.

ಆದರೆ ಈ ಎಲ್ಲಾ ಮಾತುಕತೆ, ಚರ್ಚೆ, ಬೆಳವಣಿಗೆಗಳಿಗೆ ಅವರು ಅಂತ್ಯ ಹಾಡಿದ್ದಾರೆ. ಕರ್ನಾಟಕದಲ್ಲಿ ನಮ್ಮ ಪಕ್ಷ ಸ್ಪರ್ಧೆ ಮಾಡುವುದಿಲ್ಲ ಎಂದು ಅಸಾಸುದ್ದೀನ್ ಓವೈಸಿ ಬಹಿರಂಗವಾಗಿ ಘೋಷಿಸಿದ್ದಾರೆ,

English summary
AIMIM Party president and Hyderabad MP Asaduddin Owaisi, who had announced that he would contest independently for the Karnataka Assembly elections, had withdrawn his decision.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X