ಕೇಂದ್ರ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ನಯಾಪೈಸೆ ಹೆಚ್ಚಳವಾಗಿಲ್ಲ; ಎನ್‌ಡಿಎ ನಾಯಕರ ವಿರುದ್ಧ ಡಿಕೆಶಿ ವಾಗ್ದಾಳಿ!

ಬೆಂಗಳೂರು: ಆಶಾ ಕಾರ್ಯಕರ್ತೆಯರ ಬಗ್ಗೆ ಮಾತನಾಡುವ ನೈತಿಕತೆ ಎನ್ ಡಿಎ ನಾಯಕರಿಗೆ ಇಲ್ಲ. ಅವರಿಗೆ ಆಶಾ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರ ನೀಡಬೇಕಿರುವ ಹಣದ ಬಗ್ಗೆ ಧ್ವನಿ ಎತ್ತಲಿ. ಇದುವರೆಗೂ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ಈ ವಿಚಾರವಾಗಿ ಮಾತನಾಡಿಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ಕಿಡಿಕಾರಿದರು.

ಕೆಂಗೇರಿಯ ಬಿಜಿಎಸ್ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದ್ದು, ನಿಮ್ಮ ಮೇಲೆ ನಮಗೆ ನಂಬಿಕೆ ಇದೆ. ನಮಗೆ ಅವಕಾಶ ಕೊಟ್ಟರೆ ನಾವು ಹೋಗಿ ನಮ್ಮ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಅನೇಕ ಆಶಾ ಕಾರ್ಯಕರ್ತೆಯರು ಕರೆ ಹಾಗೂ ಸಂದೇಶದ ಮೂಲಕ ನನಗೆ ಹೇಳುತ್ತಿದ್ದಾರೆ. ಆಶಾ ಕಾರ್ಯಕರ್ತೆಯರಲ್ಲೇ ಬಿರುಕು ತರಬಾರದು ಎಂಬ ಉದ್ದೇಶಕ್ಕೆ ನಾನು ಕೂಡ ಮೌನವಾಗಿದ್ದೇನೆ.

ASHA Workers Protest Karnataka Chief Minister DK Shivakumar Says Signing Under Pressure Is Not Possible

ನಾನು ಖಂಡಿತವಾಗಿ ಸಹಾಯ ಮಾಡುವೆ

ನಿಮ್ಮ ಕಷ್ಟಗಳ ಬಗ್ಗೆ ನಮಗೆ ಅರಿವಿದೆ. ನೀವು ನಿಮ್ಮ ಕೆಲಸದಲ್ಲಿ ನಿರತರಾಗಿ. ನೀವು ಸೇವೆಯ ಉದ್ದೇಶದಿಂದ ಬಂದಿದ್ದು, ಹೋರಾಟಕ್ಕಲ್ಲ. ಹೋರಾಟ ಎಲ್ಲರ ಹಕ್ಕು ಇದೆ. ನಾವು ನಿಮ್ಮ ಜತೆ ಚರ್ಚೆ ಮಾಡುತ್ತೇನೆ. ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಅವರು ನಿಮ್ಮ ಜತೆ ಏನು ಮಾತನಾಡಿದ್ದಾರೆ ಎಂಬ ಅರಿವು ನನಗಿದೆ. ಆದರೆ ಸಹಿ ಹಾಕಲೇಬೇಕು ಎಂದು ಪಟ್ಟು ಹಿಡಿದರೆ ಅದು ಸಾಧ್ಯವಿಲ್ಲ. ನನ್ನ ಮೇಲೆ ವಿಶ್ವಾಸ ಇಟ್ಟರೆ ನಾನು ಖಂಡಿತವಾಗಿ ಸಹಾಯ ಮಾಡುವೆ ಎಂದು ಭರವಸೆ ನೀಡಿದರು.

ಆಶಾ ಕಾರ್ಯಕರ್ತೆಯರಿಗೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ್ದ ಭರವಸೆ ಏನು ?
ಆಶಾ ಕಾರ್ಯಕರ್ತೆಯರಿಗೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ್ದ ಭರವಸೆ ಏನು ?

ಆಶಾ ಕಾರ್ಯಕರ್ತೆಯರ ಹೋರಾಟದ ಬಗ್ಗೆ ಎನ್ ಡಿಎ ನಾಯಕರ ಹೇಳಿಕೆಗಳ ಕುರಿತು ಮಾತನಾಡಿ, ನಾನು ಎನ್ ಡಿಎನ ಯಾವುದೇ ನಾಯಕರ ಹೇಳಿಕೆಗೆ ಉತ್ತರ ನೀಡುವುದಿಲ್ಲ. ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಈವರೆಗೂ 1 ರೂ. ಹೆಚ್ಚಳ ಮಾಡಿಲ್ಲ. ಅವರ ವೇತನ ಹೆಚ್ಚಳ ಮಾಡಿರುವುದು ನಾವು. ಆಶಾ ಕಾರ್ಯಕರ್ತೆಯರ ವಿಚಾರದಲ್ಲಿ ನಾವು ರಾಜಕೀಯ ಮಾಡಲ್ಲ. ಆಶಾ ಕಾರ್ಯಕರ್ತೆಯರ ಯೋಜನೆ ತಂದಿದ್ದು ಮನಮೋಹನ್ ಸಿಂಗ್ ಅವರು. ಆಶಾ ಕಾರ್ಯಕರ್ತೆಯರ ಪರವಾಗಿ ಕಾಂಗ್ರೆಸ್ ಸರ್ಕಾರ ಇದೆ ಎಂದು ಬಿಜೆಪಿಗೆ ಅವರ ಬಗ್ಗೆ ದ್ವೇಷ ಇದೆ. ಹೀಗಾಗಿ ನಾನು ಹೆಚ್ಚು ಮಾತನಾಡುತ್ತಿಲ್ಲ ಎಂದರು.

ಆಶಾ ಕಾರ್ಯಕರ್ತೆಯರು ನಮ್ಮ ಸಹೋದರಿಯರು

ಕೆಲವರು ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಳಿದಾಗ, "ರಾಜಕಾರಣ ಮಾಡುವವರು ರಾಜಕಾರಣ ಮಾಡಲಿ. ನನ್ನ ಅಭ್ಯಂತರವಿಲ್ಲ. ನನಗೆ ಈ ವಿಚಾರದಲ್ಲಿ ರಾಜಕಾರಣದ ಅವಶ್ಯಕತೆ ಇಲ್ಲ. ಆಶಾ ಕಾರ್ಯಕರ್ತೆಯರು ನಮ್ಮ ಸಹೋದರಿಯರು. ಅವರ ಹಿತದ ಬಗ್ಗೆ ನಮಗೆ ಕಾಳಜಿ ಇದೆ. ನೀವು ಪ್ರತಿಭಟನೆ ಕೈಬಿಡಿ ಎಂದು ನಾನು ಮತ್ತೊಮ್ಮೆ ವಿನಯದಿಂದ ಮನವಿ ಮಾಡುವೆ. ನಾನು ಎಲ್ಲರನ್ನು ಕರೆದು ತೀರ್ಮಾನ ಮಾಡುವೆ" ಎಂದರು.

'ಆಶಾ' ಕಾರ್ಯಕರ್ತೆಯರು ಇಲ್ಲದಿದ್ರೂ ಕೆಲಸ ನಡೆಯುತ್ತೆ ಎಂದ ಯುಟಿ ಖಾದರ್! ಲಾಜಿಕ್ ತಿಳಿಸಿದ ಆರ್.ಅಶೋಕ್ ಕಿಡಿ
'ಆಶಾ' ಕಾರ್ಯಕರ್ತೆಯರು ಇಲ್ಲದಿದ್ರೂ ಕೆಲಸ ನಡೆಯುತ್ತೆ ಎಂದ ಯುಟಿ ಖಾದರ್! ಲಾಜಿಕ್ ತಿಳಿಸಿದ ಆರ್.ಅಶೋಕ್ ಕಿಡಿ

ನಾವು ನುಡಿದಂತೆ ನಡೆಯುತ್ತೇವೆ

ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಬಗ್ಗೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಿರಿ ಎಂಬ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದು, ಹೌದು, ನಾವು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದು, ನಾವು ನುಡಿದಂತೆ ನಡೆಯುತ್ತೇವೆ. ಕೇಂದ್ರ ಸರ್ಕಾರ ತನ್ನ ಪಾಲಿನ ಮೊತ್ತವನ್ನು ಹೆಚ್ಚಳ ಮಾಡಲು ಅವರು ಒತ್ತಡ ಹಾಕಲಿ ಎಂದು ಸವಾಲೆಸೆದರು.

ಜಾತಿ, ಧರ್ಮದ ಭೇದವಿಲ್ಲದೆ ಎಲ್ಲ ವರ್ಗದ ಜನರಿಗೂ ಸೇವೆ

ನಮ್ಮ ಗುರುಗಳಾದ ಅಜ್ಜಯ್ಯನವರು 'ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ' ಎಂಬ ಸಂದೇಶದೊಂದಿಗೆ ಮಾರ್ಗದರ್ಶನ ನೀಡಿದ್ದರು. ಅದೇ ಆಶಯವನ್ನು ಬಾಲಗಂಗಾಧರನಾಥ ಸ್ವಾಮೀಜಿಯವರು 'ಮಾನವ ಸೇವೆಯಿಂದಲೇ ವಿಶ್ವಕ್ಕೆ ಶಾಂತಿ' ಎಂಬ ಚಿಂತನೆಯ ಮೂಲಕ ಮುಂದುವರಿಸಿದರು. ಗುರುವೇ ಅರಿವಿನ ಜ್ಯೋತಿ, ಗುರುವೇ ಅಂತರಂಗ ಮತ್ತು ಬಹಿರಂಗ. ಗುರುವೇ ಒಂದು ದೊಡ್ಡ ತತ್ವ, ತಪಸ್ಸು ಹಾಗೂ ಮಾರ್ಗದರ್ಶನ ಎಂದು ಬಣ್ಣಿಸಿದರು.

ಬಾಲಗಂಗಾಧರನಾಥ ಸ್ವಾಮೀಜಿಯವರ 50ನೇ ವರ್ಷದ ಜನ್ಮದಿನದ ಸಂದರ್ಭದಲ್ಲಿ ಕುಂಬಳಗೂಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ, ಅಂದು ಸಾಯಿಬಾಬಾ ಅವರು ಹಣ ಮತ್ತು ರಕ್ತ ಎರಡೂ ಒಂದೇ ಕಡೆ ನಿಲ್ಲಬಾರದು, ನಿರಂತರವಾಗಿ ಚಲಾವಣೆಯಲ್ಲಿರಬೇಕು ಎಂದಿದ್ದರು. ಹಣ ಸಮಾಜದ ವಿವಿಧ ವರ್ಗಗಳ ನಡುವೆ ಹರಿದಾಡಬೇಕು. ಅದೇ ರೀತಿ ದೇಹದಲ್ಲಿ ರಕ್ತ ನಿರಂತರವಾಗಿ ಸಂಚರಿಸಬೇಕು. ಆಗ ರೋಗಗಳು ಬರೋದಿಲ್ಲ ಎಂದರು.

ಬಾಲಗಂಗಾಧರನಾಥ ಸ್ವಾಮೀಜಿಯವರ ದೂರದೃಷ್ಟಿಯಿಂದ ಆರಂಭವಾದ ಶಿಕ್ಷಣ ಸೇವೆ ಇಂದು ದೊಡ್ಡ ಮಟ್ಟದಲ್ಲಿ ಬೆಳೆದಿದೆ. ಮಠದ ಶಿಕ್ಷಣ ಸಂಸ್ಥೆಗಳಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+