ಮಳೆ ಹಾನಿ: ಪ್ರಧಾನಿ ಮೋದಿ ಎದುರು 5 ಬೇಡಿಕೆಗಳನ್ನು ಇಟ್ಟ ಕರ್ನಾಟಕ
ಬೆಂಗಳೂರು, ಆಗಸ್ಟ್.10: ದೇಶದಲ್ಲಿ ಪ್ರವಾಹ ಪರಿಸ್ಥಿತಿಯ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋ ಸಂವಾದ ನಡೆಸಿದರು. ಈ ವೇಳೆ ರಾಜ್ಯದ ವತಿಯಿಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಭಾಗವಹಿಸಿ ರಾಜ್ಯದ ಪ್ರವಾಹ ಸ್ಥಿತಿ ಬಗ್ಗೆ ಮಾಹಿತಿ ನೀಡಿದರು.
Recommended Video
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜೊತೆಗಿನ ವಿಡಿಯೋ ಸಂವಾದದ ಬಳಿಕ ವಿಧಾನಸೌಧದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್.ಅಶೋಕ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಕರ್ನಾಟಕದಲ್ಲಿ ಸೃಷ್ಟಿಯಾಗಿರುವ ಪ್ರವಾಹ ಪರಿಸ್ಥಿತಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ಒದಗಿಸುವಂತೆ ಉಭಯ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕೃಷ್ಣಾ ಜಲಾಯನ ಭಾಗ ಹಾಗೂ ಕರಾವಳಿ ಭಾಗದ ಅಧ್ಯಯನಕ್ಕಾಗಿ ಶೀಘ್ರವೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡವನ್ನು ಕಳುಹಿಸಿಕೊಡಬೇಕು. ಬೆಳೆನಾಶ, ಭೂಕುಸಿತ, ಮನೆ ಹಾನಿ, ಪ್ರಾಣ ಹಾನಿ ಬಗ್ಗೆ ಅಧ್ಯಯನ ನಡೆಸಿ ಸೂಕ್ತ ವರದಿ ಸಿದ್ಧಗೊಳ್ಳಬೇಕಾದಲ್ಲಿ ಅಧ್ಯಯನ ತಂಡವನ್ನು ಕಳುಹಿಸಿಕೊಡಬೇಕಾದ ಅಗತ್ಯವಿದೆ ಎಂದು ಸಚಿವರು ಮನವಿ ಮಾಡಿಕೊಂಡಿದ್ದಾರೆ. ಮಲೆನಾಡು, ಕರಾವಳಿ, ಕೃಷ್ಣ ಮತ್ತು ಕಾವೇರಿ ಕೊಳ್ಳಗಳ ಪ್ರದೇಶಗಳ ನೆರೆ ಅಧ್ಯಯನಕ್ಕೆ ಕೇಂದ್ರದ ಅಧಿಕಾರಿಗಳ ಎರಡು ತಂಡ ಬರಲಿವೆ.
ಕರ್ನಾಟಕ ಮಾತ್ರವಲ್ಲದೇ ಅಸ್ಸಾಂ, ಕೇರಳ ರಾಜ್ಯಗಳ ಜೊತೆಗೂ ಪ್ರಧಾನಮಂತ್ರಿಯವರು ಚರ್ಚೆ ನಡೆಸಿದ್ದಾರೆ. ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಾದ ಮಳೆಯಿಂದ ಜುಲೈ ತಿಂಗಳಾಂತ್ಯದವರೆಗೂ ವಾಡಿಕೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ಈಗಾಗಲೇ ವಾಡಿಕೆಗಿಂತ 18ರಷ್ಟು ಹೆಚ್ಚಿನ ಮಳೆಯಾಗಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಪರಿಹಾರದ ಬಗ್ಗೆ ಆಲೋಚಿಸುವಂತೆ ಸಚಿವರು ಪ್ರಧಾನಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕೇಂದ್ರದ ತಂಡವನ್ನು ರಾಜ್ಯಕ್ಕೆ ಕಳುಹಿಸಲು ಮನವಿ
ಕೃಷ್ಣಾ ಜಲಾಯನ ಭಾಗ ಹಾಗೂ ಕರಾವಳಿ ಭಾಗದ ಅಧ್ಯಯನಕ್ಕಾಗಿ ಶೀಘ್ರವೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡವನ್ನು ಕಳುಹಿಸಿಕೊಡಬೇಕು. ಬೆಳೆನಾಶ, ಭೂಕುಸಿತ, ಮನೆ ಹಾನಿ, ಪ್ರಾಣ ಹಾನಿ ಬಗ್ಗೆ ಅಧ್ಯಯನ ನಡೆಸಿ ಸೂಕ್ತ ವರದಿ ಸಿದ್ಧಗೊಳ್ಳಬೇಕಾದಲ್ಲಿ ಅಧ್ಯಯನ ತಂಡವನ್ನು ಕಳುಹಿಸಿಕೊಡಬೇಕಾದ ಅಗತ್ಯವಿದೆ ಎಂದು ಸಚಿವರು ಮನವಿ ಮಾಡಿಕೊಂಡಿದ್ದಾರೆ. ಮಲೆನಾಡು, ಕರಾವಳಿ, ಕೃಷ್ಣ ಮತ್ತು ಕಾವೇರಿ ಕೊಳ್ಳಗಳ ಪ್ರದೇಶಗಳ ನೆರೆ ಅಧ್ಯಯನಕ್ಕೆ ಕೇಂದ್ರದ ಅಧಿಕಾರಿಗಳ ಎರಡು ತಂಡ ಬರಲಿವೆ.

ಎರಡು ತಿಂಗಳಿನಲ್ಲಿ ವಾಡಿಕೆಗಿಂತಲೂ ಹೆಚ್ಚು ಮಳೆ
ಕರ್ನಾಟಕ ಮಾತ್ರವಲ್ಲದೇ ಅಸ್ಸಾಂ, ಕೇರಳ ರಾಜ್ಯಗಳ ಜೊತೆಗೂ ಪ್ರಧಾನಮಂತ್ರಿಯವರು ಚರ್ಚೆ ನಡೆಸಿದ್ದಾರೆ. ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಾದ ಮಳೆಯಿಂದ ಜುಲೈ ತಿಂಗಳಾಂತ್ಯದವರೆಗೂ ವಾಡಿಕೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ಕೆಲವೇ ಪ್ರದೇಶಗಳಲ್ಲಿ ಮಳೆ, ನದಿಗಳು ಕೆಲವು ಕಡೆ ತುಂಬಿ ಹರಿದಿವೆ. ಪುನರ್ವಸತಿ, ರಕ್ಷಣಾ ಕಾರ್ಯದ ಬಗ್ಗೆ ಚರ್ಚಿಸಲಾಯಿತು. ನಾವು ರಾಜ್ಯದ ಸ್ಥಿತಿಯನ್ನು ಗಮನಕ್ಕೆ ತಂದಿದ್ದೇವೆ. ವಿಪರೀತ ಗಾಳಿ, ಪ್ರವಾಹ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗಾಗಲೇ ವಾಡಿಕೆಗಿಂತ 18ರಷ್ಟು ಹೆಚ್ಚಿನ ಮಳೆಯಾಗಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಪರಿಹಾರದ ಬಗ್ಗೆ ಆಲೋಚಿಸುವಂತೆ ಸಚಿವರು ಪ್ರಧಾನಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದರು.

ರಾಜ್ಯದಲ್ಲಿ ಪ್ರವಾಹಕ್ಕೆ ಹಾನಿಯಾಗಿರುವ ಬಗ್ಗೆ ಮಾಹಿತಿ
ಕರ್ನಾಟಕದಲ್ಲಿ ಎರಡು ಥರದ ಗಾಳಿ ಬೀಸಿದ್ದು, ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಿಂದ ನದಿಗಳು ತುಂಬಿವೆ. 56 ತಾಲೂಕುಗಳಲ್ಲಿ ಹಾನಿಯಾಗಿದ್ದು, 885 ಗ್ರಾಮಗಳು ಪ್ರವಾಹ ಪೀಡಿತವವಾಗಿವೆ. 3,500 ಕಿ.ಮೀ ರಸ್ತೆ ಹಾಳಾಗಿದ್ದು, 85 ಸಾವಿರ ಎಕರೆ ಬೆಳೆ ಹಾನಿಯಾಗಿದೆ. 3 ಸಾವಿರ ಮನೆಗಳು, 250 ಸೇತುವೆಗಳು ಹಾನಿಯಾಗಿದೆ. 392 ಕಟ್ಟಡಗಳು ಮಳೆಗೆ ಹಾನಿಯಾಗಿದ್ದು, ಕೇಂದ್ರದ 4 ರಕ್ಷಣಾ ಹೆಲಿಕಾಪ್ಟರ್ ಮೀಸಲಿರಿಸಿದೆ. ರಾಜ್ಯದಲ್ಲಿ ಈಗಾಗಲೆ 4 NDRF ತಂಡಗಳಿವೆ. 4 ಸಾವಿರ ಕೋಟಿ ನಷ್ಟದ ಅಂದಾಜು ಮಾಡಲಾಗಿದೆ. ರಾಜ್ಯ ಕೈಗೊಂಡ ಕ್ರಮಗಳ ಬಗ್ಗೆಯೂ ಪ್ರಧಾನಿ ಗಮನಕ್ಕೆ ತಂದಿದ್ದೇವೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೃಷ್ಣಾ ಮತ್ತು ಕಾವೇರಿ ಕೊಳ್ಳದಲ್ಲಿ ಭಾರಿ ಪ್ರವಾಹದ ಆತಕಂ
ರಾಜ್ಯದಲ್ಲಿ ಕೃಷ್ಣಾ, ಕಾವೇರಿ ಕೊಳ್ಳಗಳಲ್ಲಿ ಭಾರೀ ಪ್ರವಾಹ ಭೀತಿ ಎದುರಾಗಿದ್ದು, ಮಹಾರಾಷ್ಟ್ರದ ಜೊತೆ ಒಂದು ಸುತ್ತಿನ ಸಭೆ ನಡೆಸಲಾಗಿದೆ. ಸಚಿವ ರಮೇಶ್ ಜಾರಕಿಹೊಳಿ ಸಭೆ ಮಾಡಿದ್ದಾರೆ. ಎಲ್ಲ ಡ್ಯಾಂಗಳ ಎಂಜಿನಿಯರ್ ಗಳ ಸಂಪರ್ಕದಲ್ಲಿದ್ದೇವೆ. ನದಿ ಅಂಚಿನ ಗ್ರಾಮಗಳಲ್ಲಿ ನಷ್ಟ ಕಮ್ಮಿ ಮಾಡುವುದನ್ನೆ ಹೆಚ್ಚಿನ ಆಧ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಪ್ರವಾಹ ಕಡಿಮೆ ಮಾಡಲು ಅಹ್ಮದಾಬಾದ್ ಸಂಸ್ಥೆ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಮೊದಲೇ ಪ್ರವಾಹ ಮಾಹಿತಿ ಪಡೆದು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯತ್ ವಿಪತ್ತು ನಿರ್ವಹಣಾ ಘಟಕಗಳ ಸ್ಥಾಪಿಸಲು ಉದ್ದೇಶಿಸಲಾಗಿದೆ. ಅಂತರ್ ರಾಜ್ಯ ನದಿಗಳ ಜಲಾನಯನ ಪ್ರದೇಶಗಳಲ್ಲಿ ಸಂಯೋಜಿತ ಪ್ರವಾಹ ಮುನ್ಸೂಚನೆ ವ್ಯವಸ್ಥೆ ರೂಪಿಸಲು ಮನವಿ ಮಾಡಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications