ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಸೇರಿದ ನೈಸ್ ಮುಖ್ಯಸ್ಥ ಅಶೋಕ್ ಖೇಣಿ

|
Google Oneindia Kannada News

Recommended Video

ಅಶೋಕ್ ಖೇಣಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ | Oneindia Kannada

ಬೆಂಗಳೂರು, ಮಾರ್ಚ್ 05 : ಬೀದರ್ ದಕ್ಷಿಣ ಕ್ಷೇತ್ರದ ಶಾಸಕ, ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್ ಖೇಣಿ ಕಾಂಗ್ರೆಸ್ ಪಕ್ಷ ಸೇರಿದರು. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಭಾರೀ ಕುತೂಹಲ ಹುಟ್ಟು ಹಾಕಿದೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಸಮ್ಮುಖದಲ್ಲಿ ಅಶೋಕ್ ಖೇಣಿ ಕಾಂಗ್ರೆಸ್ ಪಕ್ಷ ಸೇರಿದರು. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕ್ಷೇತ್ರ ಪರಿಚಯ : 'ನೈಸ್' ಮುಖ್ಯಸ್ಥರನ್ನು ಗೆಲ್ಲಿಸಿದ ಕ್ಷೇತ್ರವಿದು!ಕ್ಷೇತ್ರ ಪರಿಚಯ : 'ನೈಸ್' ಮುಖ್ಯಸ್ಥರನ್ನು ಗೆಲ್ಲಿಸಿದ ಕ್ಷೇತ್ರವಿದು!

ಅಶೋಕ್ ಖೇಣಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದ ಪರಮೇಶ್ವರ ಅವರು, 'ಯಾವುದೇ ಷರತ್ತುಗಳು ಇಲ್ಲದೆ, ಪ್ರಸ್ತುತ ಕಾಂಗ್ರೆಸ್‌ ಪಕ್ಷದ ರಾಹುಲ್ ಗಾಂಧಿ ಅವರ ನಾಯಕತ್ವವನ್ನು ಒಪ್ಪಿಕೊಂಡು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕರ್ನಾಟಕ ಮಕ್ಕಳ ಮಕ್ಕವನ್ನು ಕಾಂಗ್ರೆಸ್‌ನಲ್ಲಿ ವಿಲೀನ ಮಾಡಿದ್ದಾರೆ' ಎಂದರು.

keny

ಕರ್ನಾಟಕ ಮಕ್ಕಳ ಪಕ್ಷದಿಂದ ಬೀದರ್ ದಕ್ಷಿಣ ಕ್ಷೇತ್ರದಿಂದ 2013ರ ಚುನಾವಣೆಗೆ ಸ್ಪರ್ಧಿಸಿದ್ದ ಅಶೋಕ್ ಖೇಣಿ ಜಯಗಳಿಸಿದ್ದರು. 47,763 ಮತಗಳನ್ನು ಪಡೆದು ಜೆಡಿಎಸ್‌ನ ಬಂಡೆಪ್ಪ ಕಾಶೆಂಪುರ ಅವರನ್ನು ಸೋಲಿಸಿದ್ದರು.

ಶಾಸಕರ ವಿರೋಧ : ಅಶೋಕ್ ಖೇಣಿ ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಹಲವು ಶಾಸಕರು ವಿರೋಧ ವ್ಯಕ್ತಪಡಿಸಿದ್ದರು. ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್, ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಖೇಣಿ ಅವರನ್ನು ಸೇರಿಸಿಕೊಳ್ಳುವುದು ಬೇಡ ಎಂದು ಪರಮೇಶ್ವರ ಅವರಿಗೆ ದೂರು ನೀಡಿದ್ದರು.

ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಪುತ್ರ ಅಜಯ್ ಸಿಂಗ್ ಸಹ ಖೇಣಿ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದರು. ಧರಂ ಸಿಂಗ್ ಅವರ ಅಳಿಯ ಚಂದ್ರಸಿಂಗ್ ಈ ಬಾರಿಯ ಚುನಾವಣೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಸಿದ್ದರಾಮಯ್ಯ ಭೇಟಿ : ಭಾನುವಾರ ಅಶೋಕ್ ಖೇಣಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದರು. ಇಂದು ಪಕ್ಷ ಸೇರಿದ್ದಾರೆ.

English summary
Bidar South MLA and Managing Director of Nandi Infrastructure Corridor Enterprises (NICE) Ashok Kheny joined Congress on March 5, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X