ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಶೋಕ್ ಖೇಣಿ ಕಾಂಗ್ರೆಸ್‌ಗೆ : ಆರ್.ಅಶೋಕ್ ಹೇಳಿದ್ದೇನು?

|
Google Oneindia Kannada News

Recommended Video

ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಆರ್ ಅಶೋಕ ಹೇಳಿದ್ದೇನು? | Oneindia Kannada

ಬೆಂಗಳೂರು, ಮಾರ್ಚ್ 05 : 'ಕಾಂಗ್ರೆಸ್ ಲೂಟಿಕೋರರ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಬೆಂಗಳೂರನ್ನು ಕೊಳ್ಳೆ ಹೊಡೆದ ಅಶೋಕ್ ಖೇಣಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ' ಎಂದು ಆರ್.ಅಶೋಕ್ ಆರೋಪಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, '2018ರ ವಿಧಾನಸಭೆ ಚುನಾವಣಾ ಖರ್ಚಿಗೆ ಕಾಂಗ್ರೆಸ್ ಪಕ್ಷಕ್ಕೆ ಹಣ ಬೇಕಾಗಿದೆ. ಅದಕ್ಕಾಗಿ ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ' ಎಂದು ಆರೋಪಿಸಿದರು.

ಕಾಂಗ್ರೆಸ್ ಸೇರಿದ ನೈಸ್ ಮುಖ್ಯಸ್ಥ ಅಶೋಕ್ ಖೇಣಿಕಾಂಗ್ರೆಸ್ ಸೇರಿದ ನೈಸ್ ಮುಖ್ಯಸ್ಥ ಅಶೋಕ್ ಖೇಣಿ

'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈಸ್ ಹಗರಣದಲ್ಲಿ 2 ಸಾವಿರ ಕೋಟಿ ಅಕ್ರಮವಾಗಿದೆ ಎಂದು ಆರೋಪ ಮಾಡುತ್ತಿದ್ದರು. ಈಗ ಅಶೋಕ್ ಖೇಣಿ ಅವರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ' ಎಂದು ವಾಗ್ದಾಳಿ ನಡೆಸಿದರು.

R Ashok

'ಬೆಂಗಳೂರನ್ನು ಕೊಳ್ಳೆ ಹೊಡೆದ ಹಣವನ್ನು ಈಗ ಕಾಂಗ್ರೆಸ್ ಪಕ್ಷ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಅದಕ್ಕಾಗಿ ಅಶೋಕ್ ಖೇಣಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ' ಎಂದು ಆರ್.ಅಶೋಕ್ ಆರೋಪಿಸಿದರು.

ಕ್ಷೇತ್ರ ಪರಿಚಯ : 'ನೈಸ್' ಮುಖ್ಯಸ್ಥರನ್ನು ಗೆಲ್ಲಿಸಿದ ಕ್ಷೇತ್ರವಿದು!ಕ್ಷೇತ್ರ ಪರಿಚಯ : 'ನೈಸ್' ಮುಖ್ಯಸ್ಥರನ್ನು ಗೆಲ್ಲಿಸಿದ ಕ್ಷೇತ್ರವಿದು!

ಖೇಣಿ ಹೇಳಿದ್ದೇನು? : ಕೆಪಿಸಿಸಿ ಕಚೇರಿಯಲ್ಲಿ ಆರ್.ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅಶೋಕ್ ಖೇಣಿ ಅವರು, 'ಅಶೋಕ್ ಅವರ ಸೈಂಟಿಸ್ಟ್ ಬುದ್ದಿ ಬಗ್ಗೆ ಏನೂ ಹೇಳುವುದಿಲ್ಲ' ಎಂದರು.

English summary
BJP leader and former Deputy Chief Minister R. Ashok alleged that Bidar South MLA and Managing Director of Nandi Infrastructure Corridor Enterprises (NICE) Ashok Kheny joined Congress to fund party in 2018 Karnataka assembly elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X