7th Pay Commission: 7ನೇ ವೇತನ ಆಯೋಗದ ಶಿಫಾರಸು ಜಾರಿ ಕುರಿತು ಮಾಜಿ ಡಿಸಿಎಂ ಹೇಳಿದ್ದೇನು?
ಬೆಂಗಳೂರು, ಮೇ 29: 7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡದ ಈ ಕಾಂಗ್ರೆಸ್ ಸರಕಾರವು ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದೆ. ಒಪಿಎಸ್ ಕುರಿತು ಸುಳ್ಳು ಭರವಸೆ ಕೊಟ್ಟಿದ್ದಾರೆ. ಇದೇ ಯುಪಿಎ ಸರಕಾರ ಎನ್‍ಪಿಎಸ್ ಜಾರಿಗೊಳಿಸಿತ್ತು ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದರು.
ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರವನ್ನು ಸದಾ ಹಾಳು ಮಾಡುವ ಕೆಲಸದಲ್ಲಿ ಕಾಂಗ್ರೆಸ್ಸಿನವರು ತೊಡಗಿದ್ದಾರೆ. ಸಿಇಟಿ ಪರೀಕ್ಷೆ ವಿಚಾರ, ಹೊಸದಾಗಿ ಜಾರಿ ಮಾಡಿದ ಪಬ್ಲಿಕ್ ಎಕ್ಸಾಮ್ ವಿಚಾರದಲ್ಲಿ ಗೊಂದಲ, ಸಮಸ್ಯೆಗಳು ಕಾಡುವಂತಾಗಿದೆ. ಶಿಕ್ಷಣ ವಾತಾವರಣವನ್ನು ಹದಗೆಡಿಸಿದ್ದಾರೆ. ಯುವ ನೀತಿಯಲ್ಲೂ ಡೋಂಗಿ ನೀತಿ ಜಾರಿ ಮಾಡಿದ್ದಾರೆ ಎಂದು ತಿಳಿಸಿದರು.

ನಮ್ಮ ಸರಕಾರ ಪಾಲಿಟೆಕ್ನಿಕ್, ಐಟಿಐ ಗುಣಮಟ್ಟ ಹೆಚ್ಚಿಸಿ ಅಡ್ಮಿಶನ್ ಶೇ 100ಕ್ಕೆ ಹೆಚ್ಚಳವಾಗಿದೆ. ಇಲ್ಲಿ ಕಲಿತ ಎಲ್ಲರಿಗೂ ಉದ್ಯೋಗ ಸಿಗುತ್ತಿದೆ. ಎಲ್ಲ ಸರಕಾರಿ ಕಾಲೇಜುಗಳಲ್ಲಿ ಶೇ 87ರಷ್ಟು ಅಕ್ರೆಡಿಷನ್ ಕೊಡಿಸಿದ್ದೇವೆ. ಇದೊಂದು ದೊಡ್ಡ ಸಾಧನೆ. ಶಿಕ್ಷಕರ ನೇಮಕಾತಿ ವೇಳೆ ಪಾರದರ್ಶಕ ಕೌನ್ಸೆಲಿಂಗ್ ನಡೆಸಿದ್ದೇವೆ ಎಂದು ವಿವರ ನೀಡಿದರು.
ಯುಕವರು, ಪದವೀಧದರು ಮತ್ತು ಶಿಕ್ಷಕರ ಪರವಾಗಿ ಬಿಜೆಪಿ ಸದಾ ನಿಂತಿದೆ. ಹಲವಾರು ಸುಧಾರಣೆಗಳನ್ನು ತಂದಿದೆ. ಈ ಬಾರಿ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟವನ್ನು ಬೆಂಬಲಿಸಬೇಕು ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಮನವಿ ಮಾಡಿದರು.
ಬಿಜೆಪಿ- ಜೆಡಿಎಸ್ ಮೈತ್ರಿ ಪಕ್ಷಗಳು ಪದವೀಧರರ ವಿಚಾರ, ಶಿಕ್ಷಕರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿವೆ. ಹಲವು ಸುಧಾರಣೆ, ಪ್ರಗತಿ, ನೂತನ ಕಾಯ್ದೆ ಕಾನೂನು ಜಾರಿಗೆ ತಂದಿವೆ. ಇವೆರಡು ಪಕ್ಷಗಳು ಶಿಕ್ಷಕರು, ಪದವೀಧರರ ಪರವಾಗಿ ನಿರಂತರವಾಗಿ ಶ್ರಮಿಸುತ್ತಿವೆ ಎಂದು ತಿಳಿಸಿದರು.
ಗುಣಮಟ್ಟದ ಶಿಕ್ಷಣದಲ್ಲಿ ಶಿಕ್ಷಕರ ಪಾತ್ರ ಮತ್ತು ಆಡಳಿತ ನೀತಿ ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಕರ ಕುರಿತು ಕಾಳಜಿ, ಗೌರವ ನೀಡದೆ ಕಾಂಗ್ರೆಸ್ ಆಡಳಿತ ನಡೆಸಿದೆ. ಕಾಂಗ್ರೆಸ್ ಪಕ್ಷವು ಶಿಕ್ಷಕರ, ಪದವೀಧರರ ವಿರುದ್ಧವಾಗಿ ನೀತಿಗಳನ್ನು ಹೊಂದಿದೆ. ಆದರೆ, ಬಿಜೆಪಿ ಶಿಕ್ಷಕರ ಪರವಾಗಿ ಹಲವಾರು ಸುಧಾರಣೆಗಳನ್ನು, ಅನುದಾನಿತ ಸಂಸ್ಥೆಗಳಲ್ಲಿ ಹುದ್ದೆ ಭರ್ತಿ ಮಾಡುವ ಕಾರ್ಯ ಮಾಡಿದೆ. ಕಾಂಗ್ರೆಸ್ ಪಕ್ಷದ ಆಡಳಿತ ನೇಮಕಾತಿಯನ್ನು ಸಂಪೂರ್ಣವಾಗಿ ನಿಷೇಧಿಸಿತ್ತು ಎಂದರು.
ಯಡಿಯೂರಪ್ಪ ಅವರ ಅವಧಿಯಲ್ಲಿ ಹುದ್ದೆ ಭರ್ತಿಗೆ ಅವಕಾಶ ಮಾಡಿಕೊಡಲಾಯಿತು. ಅನುದಾನ ಕೊಡುವ ವಿಚಾರದಲ್ಲೂ ಅವಕಾಶ, ಆಜ್ಞೆ ಮಾಡಲಾಗಿದೆ. ಜ್ಞಾನ ಆಯೋಗ ಆರಂಭ, ಮೂರನೇ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ) ತರುವ ಮೂಲಕ ದೊಡ್ಡ ಸುಧಾರಣೆ ಮಾಡಲಾಗಿದೆ ಎಂದು ವಿವರಿಸಿದರು.
ಕೌಶಲ್ಯಯುಕ್ತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಅವರು ಮಹತ್ವದ ಕ್ರಮ ತೆಗೆದುಕೊಂಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜಕೀಯ ಪ್ರೇರಿತವಾಗಿ ಕಾಂಗ್ರೆಸ್ ಪಕ್ಷವು ವಿರೋಧಿಸಿದೆ. ವೈಜ್ಞಾನಿಕವಾಗಿ ಯೋಚಿಸದೆ, ಚರ್ಚೆ- ವಿಮರ್ಶೆ ಇಲ್ಲದೆ ಏಕಾಏಕಿಯಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತೆಗೆದುಹಾಕುತ್ತೇವೆ ಹಾಗೂ ರಾಜ್ಯ ಶಿಕ್ಷಣ ನೀತಿ ತರುವುದಾಗಿ ಮನಬಂದಂತೆ ನಿಲುವು ತೆಗೆದುಕೊಂಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications