ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

9 ದಿನಗಳ ಕಾಲ ಅಶ್ವಿನ್‌ ರಾವ್‌ ಎಸ್‌ಐಟಿ ವಶಕ್ಕೆ

|
Google Oneindia Kannada News

ಬೆಂಗಳೂರು, ಜುಲೈ 28 : ಕರ್ನಾಟಕ ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಲೋಕಾಯುಕ್ತ ನ್ಯಾ.ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದೆ. ಲೋಕಾಯುಕ್ತ ವಿಶೇಷ ಕೋರ್ಟ್ ಅಶ್ವಿನ್ ರಾವ್ ಅವರನ್ನು 9 ದಿನಗಳ ಕಾಲ ಎಸ್‌ಐಟಿ ವಶಕ್ಕೆ ಒಪ್ಪಿಸಿದೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಅಶ್ವಿನ್ ರಾವ್ ಅವರು ಮೊದಲ ಆರೋಪಿಯಾಗಿದ್ದಾರೆ. ಸೋಮವಾರ ಬೆಳಗ್ಗೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿರುವ ನಿವಾಸದಲ್ಲಿ ಅಶ್ವಿನ್ ರಾವ್ ಅವರನ್ನು ಎಸ್‌ಐಟಿ ತಂಡ ಬಂಧಿಸಿತ್ತು. ರಾತ್ರಿ 10.45ರ ಸುಮಾರಿಗೆ ಅವರನ್ನು ಬೆಂಗಳೂರಿಗೆ ಕರೆತರಲಾಯಿತು. [ತೆಲಂಗಾಣದಲ್ಲಿ ಅಶ್ವಿನ್ ರಾವ್ ಬಂಧನ]

ashwin rao

'ಸೋಮವಾರ ಬೆಳಗ್ಗೆ 8 ಗಂಟೆಗೆ ಪೊಲೀಸರು ಮನಗೆ ಬಂದು ನನ್ನನ್ನು ವಶಕ್ಕೆ ಪಡೆದರು. ನಂತರ ಮಧ್ಯಾಹ್ನ 1.30ಕ್ಕೆ ನೋಟಿಸ್ ನೀಡಿ ವಿಚಾರಣೆಗಾಗಿ ಬೆಂಗಳೂರಿಗೆ ಕರೆತಂದರು. ಇನ್ನೋವಾ ಕಾರಿನಲ್ಲಿ ರಾತ್ರಿ ಬೆಂಗಳೂರಿಗೆ ಆಗಮಿಸಿದೆವು' ಎಂದು ಅಶ್ವಿನ್ ರಾವ್ ಕೋರ್ಟ್‌ನಲ್ಲಿ ಹೇಳಿಕೆ ನೀಡಿದ್ದಾರೆ.

ಲೋಕಾಯುಕ್ತ ನ್ಯಾಯಾಲಯಕ್ಕೆ ನ್ಯಾ.ಭಾಸ್ಕರ್ ರಾವ್ ಪುತ್ರ ಅಶ್ವಿನ್ ರಾವ್ ಹಾಜರು http://publictv.in/?p=46400 #lokayukta #AshwinRao #Bengaluru

Posted by Public TV onTuesday, July 28, 2015

ಜನಾರ್ದನ್ ಎಸ್‌ಪಿಸಿ : ಲೋಕಾಯುಕ್ತ ಹಗರಣದ ಪ್ರಕರಣದಲ್ಲಿ ಎಸ್‌ಐಟಿ ಪರವಾಗಿ ವಾದ ಮಾಡಲು ಜನಾರ್ದನ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೇಮಕದ ಆದೇಶದ ಪ್ರತಿಯನ್ನು ಲೋಕಾಯುಕ್ತ ಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದೆ.

ಅಶ್ವಿನ್ ರಾವ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ಎಸ್‌ಐಟಿ ವಶಕ್ಕೆ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದರು. ಆದರೆ, ಕೋರ್ಟ್ ಆಗಸ್ಟ್‌ 6ರವರೆಗೆ (9 ದಿನ)ಗಳ ಕಾಲ ಎಸ್‌ಐಟಿ ವಶಕ್ಕೆ ನೀಡಿತು.

English summary
Karnataka Lokayukta Justice Y.Bhaskar Rao son Ashwin Rao produced before Lokayukta court on Tuesday, July 28. The Special Investigation Team (SIT) arrested Ashwin Rao on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X