Get Updates
Get notified of breaking news, exclusive insights, and must-see stories!

ಲೈಂಗಿಕ ಕಿರುಕುಳ: ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು ಇಂದು?

ಬೆಂಗಳೂರು, ಮೇ 03: ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಚಿವ, ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್. ಡಿ. ರೇವಣ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ವಿಶೇಷ ನ್ಯಾಯಾಲಯ ಶುಕ್ರವಾರ ತೀರ್ಪು ನೀಡುವ ಸಾಧ್ಯತೆ ಇದೆ.

ಗುರುವಾರ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ವಿಶೇಷ ತನಿಖಾ ತಂಡ (ಎಸ್ಐಟಿ)ಗೆ ನೋಟೀಸ್ ಜಾರಿ ಮಾಡಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ. ಹಾಗಾಗಿ ಇಂದು ತೀರ್ಪು ನೀಡುವ ನಿರೀಕ್ಷೆ ಇದೆ. ಅತ್ತ ಪ್ರಜ್ವಲ್ ರೇವಣ್ಣ ದೇಶ ತೊರೆದಿರುವ ಹಿನ್ನೆಲೆಯಲ್ಲಿ ಇತ್ತ ಅಪ್ಪನಿಗೆ ಜಾಮೀನು ಸಿಗುತ್ತದೆಯೇ?, ಇಲ್ಲವೇ? ಎಂಬುದು ಕುತೂಹಲ ಮೂಡಿಸಿದೆ.

Assault Case HD Revanna Anticipatory Bail Petition Order May Announced On Friday

ಬಂಧನ ಭೀತಿಯಲ್ಲಿದ್ದ ಎಚ್. ಡಿ. ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಪ್ರಕರಣ ಸಂಬಂಧ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿತ್ತು.

ಏನಾಯ್ತು ಕೋರ್ಟ್‌ನಲ್ಲಿ?: ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಎಫ್ಐಆರ್‌ನಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಆರೋಪಗಳಿವೆ. ಹೀಗಾಗಿ, ನಿರೀಕ್ಷಣಾ ಜಾಮೀನು ಅರ್ಜಿ ಹೇಗೆ ಊರ್ಜಿತವಾಗುತ್ತದೆ?. ನೀವು ವಿಚಾರಣಾ ನ್ಯಾಯಾಲಯದಲ್ಲಿ ನೇರವಾಗಿ ಹಾಜರಾಗಬಹುದಿತ್ತಲ್ಲ? ಎಂದು ರೇವಣ್ಣ ಪರ ಹಿರಿಯ ವಕೀಲರಿಗೆ ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು, ಎಫ್ಐಆರ್‌ನಲ್ಲಿ ಜಾಮೀನು ನೀಡಬೇಕಾದ ಆರೋಪಗಳಿವೆ. ಆದರೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಅತ್ಯಾಚಾರ ಆರೋಪ ಸೇರಿಸಲು ಮನವಿ ನೀಡಲಾಗಿದೆ. ಇದಕ್ಕೆ ಪೂರಕವಾಗಿ ಎಚ್. ಡಿ. ರೇವಣ್ಣ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಎಸ್ಐಟಿ ಸಲ್ಲಿಸಿದ ಅರ್ಜಿಯ ವಿವರ ಇನ್ನೂ ಲಭ್ಯವಿಲ್ಲ. ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮನವಿ ಮಾಡಿದರು.

ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಾಲಯವು ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ. ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಎಸ್ಐಟಿಗೆ ಸೂಚನೆ ನೀಡಿ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಪ್ರಕರಣ ಹಿನ್ನೆಲೆ ಏನು?: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಹೊಳೆನರಸೀಪುರ ಶಾಸಕ ಎಚ್. ಡಿ. ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಇಬ್ಬರೂ ನಾಯಕರ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಹಿಂದೆ ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ದೂರು ನೀಡಿದ್ದು, ಅದರ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಎಫ್ಐಆರ್‌ನಲ್ಲಿ ಎಚ್. ಡಿ. ರೇವಣ್ಣ ಎ1 ಹಾಗೂ ಪ್ರಜ್ವಲ್ ರೇವಣ್ಣ ಅವರನ್ನು ಎ2 ಆರೋಪಿಯಾಗಿ ನಮೂದಿಸಲಾಗಿದೆ. ಐಪಿಸಿ ಸೆಕ್ಷನ್ 354A, 354D, 506, 509ರ ಅಡಿ ಪ್ರಕರಣ ದಾಖಲಾಗಿದೆ.

ಈ ನಡುವೆ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಗಂಭೀರತೆ ಪರಿಗಣಿಸಿದ್ದ ಸರ್ಕಾರಕ್ಕೆ ಕೆಲವು ಸಂಘಟನೆಗಳು ಮತ್ತು ನೊಂದ ಸಂತ್ರಸ್ತೆ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ದೂರಿನ ಬಳಿಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ವೈರಲ್ ಆಗುತ್ತಿರುವ ಅಶ್ಲೀಲ ವಿಡಿಯೋ ಹಾಗೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕುರಿತಂತೆ ತನಿಖೆ ನಡೆಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅದರ ಅನ್ವಯ ರಾಜ್ಯ ಸರ್ಕಾರವು ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಿ ಆದೇಶಿಸಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+