ಪಂಚರಾಜ್ಯ ಫಲಿತಾಂಶ: ರಾಜ್ಯ ಬಿಜೆಪಿಯಲ್ಲಿ ಸಂಭ್ರಮಾಚರಣೆ

ಬೆಂಗಳೂರು, ಮಾ.10: ಐದು ರಾಜ್ಯ ಚುನಾವಣೆಗಳಲ್ಲಿ ಉತ್ತರಪ್ರದೇಶ ಸಹಿತ ನಾಲ್ಕ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಖಚಿತವಾಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ಹಲವರು ಸಂತಸ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಂಪುಟ ಸದಸ್ಯರು ಸಿಹಿ ತಿನ್ನಿಸಿ ಶುಭ ಕೋರಿದರು. ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಬಹುತೇಕ ಜಯಭೇರಿ ಭಾರಿಸಿದ್ದಕ್ಕೆ ಶುಭ ಕೋರಿದರು.

ಇನ್ನು ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿಯೂ ಸಹ ಸಂಭ್ರಮ ಮುಗಿಲು ಮುಟ್ಟಿತ್ತು. ಕಾರ್ಯಕರ್ತರು ಬಿಜೆಪಿ ಪರವಾದ ಘೋಷಣೆಗಳನ್ನು ಕೂಗುತ್ತಿದ್ದರು. ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಕಾರ್ಯಕರ್ತರನ್ನು ಅಭಿನಂದಿಸಿದರು. ಸಹಿ ಹಂಚಿ ಸಂಭ್ರಮಿಸಿಲಾಯಿತು. ಕಚೇರಿ ಮುಂಭಾಗ ಕಾರ್ಯಕರ್ತರು ನೃತ್ಯ ಮಾಡಿ ಸಂತಸ ಹಂಚಿಕೊಂಡರು.

Assembly Election Results 2022; Karnataka BJP Leaders Celebrated Victory

ಐದೂ ರಾಜ್ಯಗಳ ಮತದಾರರಿಗೆ ಅಭಿನಂದನೆ:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ,'ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಅಭೂತಪೂರ್ವ ಜಯಗಳಿಸಿ ಸರ್ಕಾರ ರಚನೆ ಮಾಡಲಿದೆ. ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಅತ್ಯಂತ ಹೆಚ್ಚು ಸ್ಥಾನ ಪಡೆದಿದೆ. ಐದೂ ರಾಜ್ಯದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ, ಅಮಿತ್ ಷಾ, ಜೆ.ಪಿ. ನಡ್ಡಾ ಹಾಗೂ ಆಯಾ ರಾಜ್ಯದ ಮುಖ್ಯಮಂತ್ರಿಗಳಿಗೂ ಅಭಿನಂದನೆ ಸಲ್ಲಿಸುತ್ತೇನೆ' ಎಂದು ಹೇಳಿದರು.

ರೈತರು, ಬಡವರ ಪರ ಕಾರ್ಯಕ್ರಮಗಳು, ಕೋವಿಡ್ ನಿರ್ವಹಣೆ, ಅರ್ಥಿಕ ಸಬಲೀಕರವನ್ನು ಜನ ಒಪ್ಪಿದ್ದಾರೆ. ವಿರೋಧ ಪಕ್ಷಗಳನ್ನು ಧೂಳೀಪಟ ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ನವ ಭಾರತ ನಿರ್ಮಾಣದ ಕನಸು ಅಕ್ಷರಶಃ ನನಸಾಗುತ್ತದೆ. ಭಾರತದ ಉದ್ದಗಲಕ್ಕೂ ಏಕಮೇವಾಧಿ ನಾಯಕ ಯಾರು ಎಂದರೆ ಅದು ನರೇಂದ್ರ ಮೋದಿ ಎಂಬುದು ಸಾಬೀತಾಗಿದೆ ಎಂದು ಕೊಂಡಾಡಿದರು.

Assembly Election Results 2022; Karnataka BJP Leaders Celebrated Victory

ಏಪ್ರಿಲ್‌ನಲ್ಲಿ ಮೋದಿ ಕರ್ನಾಟಕಕ್ಕೆ

ಏಪ್ರಿಲ್‌ನಲ್ಲಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬರುತ್ತಾರೆ. ಮುಂದಿನ ಒಂದು ವರ್ಷದ ಎಲ್ಲ ಅಭಿವೃದ್ಧಿ ಕಾರ್ಯಕ್ರಮದ ಅನಾವರಣವನ್ನು ಅವರ ಮೂಲಕ ಉದ್ಘಾಟಿಸುತ್ತೇವೆ. ಈ ಚುನಾವಣೆ ಕರ್ನಾಟಕದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಬಿಜೆಪಿ ಕಾರ್ಯಕರ್ತರಲ್ಲಿ ವಿಶ್ವಾಸ ಹೆಚ್ಚಿಸಿದೆ, ಸಕಾರಾತ್ಮಕ ಪರಿಣಾಮ ಉಂಟುಮಾಡುತ್ತದೆ. ಸುಭದ್ರ ಕರ್ನಾಟಕ ನಿರ್ಮಾಣ ಮಾಡುವ ಮೂಲಕ ಇಂದಿನ ಫಲಿತಾಂಶದಂತೆಯೇ 2023ರಲ್ಲಿ ಕರ್ನಾಟಕದಲ್ಲಿಯೂ ಅಧಿಕಾರಕ್ಕೆ ಬರುತ್ತದೆ ಎಂದರು.

ಚುನಾವಣಾ ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ? ಎಲ್ಲಿ?

Recommended Video

      ಪಂಜಾಬ್ ನಲ್ಲಿ ಕಾಂಗ್ರೆಸ್ಸ್ ಧೂಳಿಪಟ ! | Oneindia Kannada

      ಒನ್ ಇಂಡಿಯಾ ಕನ್ನಡದ ಲೈವ್ ಲಿಂಕ್ ಮೂಲಕ ನೀವು ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ನೀವು ನೋಡಬಹುದು. ಇದನ್ನು ಹೊರತುಪಡಿಸಿ ಚುನಾವಣಾ ಫಲಿತಾಂಶಗಳನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ವೆಬ್‌ಸೈಟ್ ಅಂದರೆ eciresults.nic.in ನಲ್ಲಿ ಪರಿಶೀಲಿಸಬಹುದು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+