ಪಂಚ ರಾಜ್ಯಗಳ ಚುನಾವಣೆ ಬಗ್ಗೆ ಕರ್ನಾಟಕ ಬಿಜೆಪಿ ನಾಯಕರು ಹೇಳಿದ್ದು ಹೀಗೆ..
ಬೆಂಗಳೂರು, ಮಾರ್ಚ್ 10: ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಪಂಜಾಬ್ ಮತ್ತು ಗೋವಾ ಎಲ್ಲಾ ಐದು ರಾಜ್ಯಗಳಿಗೆ 2022 ರ ವಿಧಾನಸಭಾ ಚುನಾವಣೆಯ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಪಂಚ ರಾಜ್ಯಗಳಲ್ಲಿ ಮುಂದಿನ ಸರ್ಕಾರ ಯಾವುದು ಎಂಬ ಬಗ್ಗೆ ಸ್ಪಷ್ಟ ಚಿತ್ರಣ ಕಂಡು ಬರುತ್ತಿದೆ. ಈ ನಡುವೆ ಕರ್ನಾಟಕದ ಬಿಜೆಪಿ ನಾಯಕರು ಈ ಚುನಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರದಲ್ಲಿ ಬಿಜೆಪಿ ಅಧಿಕಾರವನ್ನು ಪಡೆಯುವುದು ಬಹುತೇಕ ಖಚಿತವಾಗಿದೆ. ಆದರೆ ಪಂಜಾಬ್‌ನಲ್ಲಿ ಎಎಪಿ ಭರ್ಜರಿ ಜಯ ಸಾಧಿಸಲಿದೆ. ಗೋವಾದಲ್ಲಿ ಅಂತಂತ್ರ ಸ್ಥಿತಿ ನಿರ್ಮಾಣವಾಗಿದೆ. ಮೂರು ರಾಜ್ಯದಲ್ಲಿ ತಮ್ಮ ಪಕ್ಷದ ಗೆಲುವಿನ ಬಗ್ಗೆ ಕರ್ನಾಟಕದ ಬಿಜೆಪಿ ನಾಯಕರುಗಳು ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಬಿಜೆಪಿ ನಾಯಕ ಸಿಟಿ ರವಿ, "ಭಾರತವು ತನ್ನ 'ನೆಚ್ಚಿನ ಮಗ' ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮೇಲೆ ನಂಬಿಕೆ ಇಡುತ್ತಿರುವುದರಿಂದಾಗಿ ನಾವು ಇತಿಹಾಸವನ್ನು ನಿರ್ಮಿಸುತ್ತಿರುವುದನ್ನು ನೋಡುತ್ತಿದ್ದೇವೆ. ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಸರ್ಕಾರ ರಚಿಸಲು ಸಜ್ಜಾಗಿದೆ," ಎಂದು ತಿಳಿಸಿದ್ದಾರೆ.

ಇನ್ನು, "ಕಾಂಗ್ರೆಸ್ ಸುಳ್ಳು ಭರವಸೆ ನೀಡುತ್ತದೆ. ಬಿಜೆಪಿ ಅಭಿವೃದ್ಧಿ ಮಾಡಿದೆ. ನಮ್ಮ ಪಕ್ಷ ರಚನಾತ್ಮಕ ಪಕ್ಷ, ಫಲಿತಾಂಶ ಹೊರಬಿದ್ದ ನಂತರ ಮತ್ತು ನಮ್ಮ ಶಾಸಕಾಂಗ ಪಕ್ಷದ ಸಭೆಯ ನಂತರ ಸಿಎಂ ಆಯ್ಕೆಯನ್ನು ನಿರ್ಧರಿಸುತ್ತೇವೆ. ಸಂಸದೀಯ ಮಂಡಳಿ ನಿರ್ಧರಿಸಲಿದೆ," ಎಂದು ಗೋವಾದ ಬಿಜೆಪಿ ಉಸ್ತುವಾರಿ ಸಿ ಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.
"ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದಾದ್ಯಂತ ಡಬಲ್ ಇಂಜಿನ್ ಸರ್ಕಾರಗಳು ಗೆಲ್ಲುತ್ತಿವೆ. ಮತದಾರರು ಪ್ರತಿಪಕ್ಷಗಳ ತುಷ್ಟೀಕರಣ ರಾಜಕಾರಣಕ್ಕಿಂತ ಬಿಜೆಪಿಯ ಅಭಿವೃದ್ಧಿ ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಇಟ್ಟಿರುವುದು ಸ್ಪಷ್ಟವಾಗಿದೆ," ಎಂದು ಕೂಡಾ ಬಿಜೆಪಿ ರಾಷ್ಟ್ರೀಯ ನಾಯಕ ಸಿಟಿ ರವಿ ತಿಳಿಸಿದ್ದಾರೆ.

ಬಿಜೆಪಿ ನಾಯಕ, ಸಚಿವ ಮುರುಗೇಶ್ ನಿರಾಣಿ ಕೂ ಮಾಡಿದ್ದು, "ಇಂದು ಮಹತ್ವದ ದಿನವನ್ನು ಗುರುತಿಸುತ್ತದೆ. ವಿವಿಧ ರಾಜ್ಯಗಳ ಜನರು ಬೆಳವಣಿಗೆ, ಅಭಿವೃದ್ಧಿ, ಜಾತ್ಯತೀತತೆ, ಶಾಂತಿ ಮತ್ತು ಒಳಗೊಳ್ಳುವಿಕೆಯನ್ನು ಆಯ್ಕೆ ಮಾಡುವ ದಿನ ಇದಾಗಿದೆ. ರಾಜವಂಶ ಮತ್ತು ಸಮಾಧಾನಗೊಳಿಸುವ ರಾಜಕೀಯವನ್ನು ಜನರು ಆಯ್ಕೆ ಮಾಡಿಕೊಂಡಿಲ್ಲ," ಎಂದು ಹೇಳಿದ್ದಾರೆ.

"ಭಾರತಕ್ಕಾಗಿ ಬಿಜೆಪಿಯನ್ನು ಐತಿಹಾಸಿಕ ವಿಜಯದೊಂದಿಗೆ ಆಶೀರ್ವದಿಸಿದ್ದಕ್ಕಾಗಿ ಮತ್ತು ಮೋದಿ-ಯೋಗಿ ಸರ್ಕಾರದ ಮೇಲಿನ ನಂಬಿಕೆಯನ್ನು ಪುನರುಚ್ಚರಿಸಿದ್ದಕ್ಕಾಗಿ ನಾನು ಉತ್ತರ ಪ್ರದೇಶದ ಜನರಿಗೆ ನಮಸ್ಕರಿಸುತ್ತೇನೆ," ಎಂದು ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. (ಒನ್‌ಇಂಡಿಯಾ ಸುದ್ದಿ)
ಚುನಾವಣಾ ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ? ಎಲ್ಲಿ?
ಒನ್ ಇಂಡಿಯಾ ಕನ್ನಡದ ಲೈವ್ ಲಿಂಕ್ ಮೂಲಕ ನೀವು ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ನೀವು ನೋಡಬಹುದು. ಇದನ್ನು ಹೊರತುಪಡಿಸಿ ಚುನಾವಣಾ ಫಲಿತಾಂಶಗಳನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ವೆಬ್‌ಸೈಟ್ ಅಂದರೆ eciresults.nic.in ನಲ್ಲಿ ಪರಿಶೀಲಿಸಬಹುದು.












Click it and Unblock the Notifications