ಕರ್ನಾಟಕ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ಸದಸ್ಯರ ಪಟ್ಟಿ

Posted By: Gururaj
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 11 : 2018ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಮೂರು ಸಮಿತಿಗಳನ್ನು ರಚನೆ ಮಾಡಿದೆ. ಮೂರು ಸಮಿತಿಗಳಿಗೂ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಮುಖ್ಯಸ್ಥರು.

ಸಾಂಪ್ರದಾಯಿಕ ಪ್ರಚಾರ ತಂಡ, ಆಧುನಿಕ ಪ್ರಚಾರ ತಂಡ ಹಾಗೂ ಬೂತ್ ಮಟ್ಟದ ಸಮಿತಿಯನ್ನು ರಚನೆ ಮಾಡಲಾಗಿದೆ. ಸಮಿತಿಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಸಂಚಾಲಕರನ್ನು ನೇಮಿಸಲಾಗಿದೆ. ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿರುವ ನಾಯಕರಿಗೆ ಸಮಿತಿಯಲ್ಲಿ ಹೆಚ್ಚಿನ ಪ್ರಾಶಸ್ತ್ಯ ಸಿಕ್ಕಿದ್ದು, ವಿರೋಧಿ ಪಾಳಯದ ನಾಯಕರಿಗೂ ಸ್ಥಾನ ಸಿಕ್ಕಿದೆ.

ಕರ್ನಾಟಕ ಬಿಜೆಪಿ ಪ್ರಣಾಳಿಕೆ ಸಮಿತಿಗೆ ಸದಸ್ಯರ ನೇಮಕ

ಬೇರೆ ಪಕ್ಷಗಳಿಂದ ಬಿಜೆಪಿಗೆ ಬಂದಿರುವ ನಾಯಕರಿಗೂ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಮಾಜಿ ಸಚಿವ ಕುಮಾರ್ ಬಂಗಾರಪ್ಪ, ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ಕೆ.ಪಿ.ನಂಜುಡಿ ಸೇರಿದಂತೆ ವಿವಿಧ ನಾಯಕರು ಸಮಿತಿಯ ಸದಸ್ಯರಾಗಿದ್ದಾರೆ.

2018ರ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳ ಕಸರತ್ತು ಶುರು

ಹೈಕಮಾಂಡ್ ಅಂತಿಮಗೊಳಿಸಿರುವ ಪಟ್ಟಿಯನ್ನು ಕರ್ನಾಟಕ ಬಿಜೆಪಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಚುನಾವಣಾ ಪ್ರಚಾರ ಸಮಿತಿಯಿಂದ ಯಡಿಯೂರಪ್ಪ ದೂರ ಉಳಿದಿದ್ದಾರೆ ಎಂಬ ಗೊಂದಲಕ್ಕೆ ತೆರೆ ಎಳೆಯಲಾಗಿದ್ದು, ಎಲ್ಲಾ ಮೂರು ಸಮಿತಿಗಳಿಗೆ ಯಡಿಯೂರಪ್ಪ ಅವರೇ ಮುಖ್ಯಸ್ಥರಾಗಿದ್ದಾರೆ.

ಸಾಂಪ್ರದಾಯಿಕ ಸಮಿತಿ

ಸಾಂಪ್ರದಾಯಿಕ ಸಮಿತಿ

ಸಾಂಪ್ರದಾಯಿಕ ಪ್ರಚಾರ ಸಮಿತಿಗೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಸಂಚಾಲಕಿಯಾಗಿದ್ದಾರೆ. ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದ ಗೌಡ, ರಮೇಶ್ ಜಿಗಜಿಣಗಿ ಸಮಿತಿಯಲ್ಲಿದ್ದಾರೆ. ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ಸೇರಿದಂತೆ 34 ಸದಸ್ಯರು ಸಮಿತಿಯಲ್ಲಿದ್ದಾರೆ.

ಆಧುನಿಕ ಪ್ರಚಾರ ತಂಡದ ವಿವರ

ಆಧುನಿಕ ಪ್ರಚಾರ ತಂಡದ ವಿವರ

ಆಧುನಿಕ ಪ್ರಚಾರ ತಂಡಕ್ಕೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಸಂಚಾಲಕರು. ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ, ಸಂಸದ ಪ್ರಹ್ಲಾದ್ ಜೋಶಿ, ಮಾಜಿ ಸಚಿವ ಸುರೇಶ್ ಕುಮಾರ್, ಸಂಸದ ಪಿ.ಸಿ.ಮೋಹನ್ ಸೇರಿ 45 ಸದಸ್ಯರು ಈ ತಂಡದಲ್ಲಿದ್ದಾರೆ.

ಸಿ.ಟಿ.ರವಿ ಸಂಚಾಲಕರು

ಸಿ.ಟಿ.ರವಿ ಸಂಚಾಲಕರು

ಮಾಜಿ ಸಚಿವ ಸಿ.ಟಿ.ರವಿ ಅವರು ಬೂತ್ ಮಟ್ಟದ ಸಮಿತಿಯ ಸಂಚಾಲಕರು. ಸಂಸದ ನಳೀನ್ ಕುಮಾರ್ ಕಟೀಲ್, ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಪರಿಷತ್ ಸದಸ್ಯರಾದ ಭಾನು ಪ್ರಕಾಶ್ ಸೇರಿದಂತೆ 36 ಸದಸ್ಯರನ್ನು ಸಮಿತಿ ಒಳಗೊಂಡಿದೆ.

ವಲಸಿಗರಿಗೆ ಸಮಿತಿಯಲ್ಲಿ ಸ್ಥಾನ

ವಲಸಿಗರಿಗೆ ಸಮಿತಿಯಲ್ಲಿ ಸ್ಥಾನ

ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಬಂದಿರುವ ಎಸ್.ಎಂ.ಕೃಷ್ಣ, ಕುಮಾರ್ ಬಂಗಾರಪ್ಪ. ನೆ.ಲ.ನರೇಂದ್ರ ಬಾಬು, ಕೆ.ಪಿ.ನಂಜುಡಿ ಮುಂತಾದ ನಾಯಕರಿಗೂ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.

ಯಡಿಯೂರಪ್ಪ ಮೇಲುಗೈ

ಯಡಿಯೂರಪ್ಪ ಮೇಲುಗೈ

ಸಮಿತಿಗಳ ಸದಸ್ಯರ ನೇಮಕದಲ್ಲಿ ಯಡಿಯೂರಪ್ಪ ಅವರು ಮೇಲುಗೈ ಸಾಧಿಸಿದ್ದಾರೆ. ತಮ್ಮ ಆಪ್ತರಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಿದ್ದಾರೆ. ಕೆ.ಎಸ್.ಈಶ್ವರಪ್ಪ ಜೊತೆ ಗುರುತಿಸಿಕೊಂಡಿದ್ದ ಭಾನುಪ್ರಕಾಶ್ ಅವರಿಗೂ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ. ಸೊಗಡು ಶಿವಣ್ಣ, ನಂದೀಶ್, ಗಿರೀಶ್ ಪಟೇಲ್ ಮಂತಾದವರಿಗೆ ಸಮಿತಿಯಲ್ಲಿ ಸ್ಥಾನ ಸಿಕ್ಕಿಲ್ಲ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BJP constituted election campaign committees for Karnataka assembly elections 2018. The committee is headed by state BJP president B.S.Yeddyurappa.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ