ವೀರಪ್ಪ ಮೊಯ್ಲಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ರಚನೆ
ಬೆಂಗಳೂರು, ಅಕ್ಟೋಬರ್ 19 : 2018ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿ ರಚನೆ ಮಾಡಿದೆ. ಸಂದದ ಡಾ.ಎಂ.ವೀರಪ್ಪ ಮೊಯ್ಲಿ ಅವರ ಅಧ್ಯಕ್ಷತೆಯಲ್ಲಿ ಪ್ರಣಾಳಿಕೆ ಸಮಿತಿ ರಚನೆ ಮಾಡಲಾಗಿದೆ.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಣಾಳಿಕೆ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ. ಡಾ.ಎಂ.ವೀರಪ್ಪ ಮೊಯ್ಲಿ ಸಮಿತಿ ಅಧ್ಯಕ್ಷರಾಗಿದ್ದು, ಡಾ.ಬಿ.ಎಲ್.ಶಂಕರ್ ಸಮಿತಿಯ ಉಪಾಧ್ಯಕ್ಷರಾಗಿದ್ದಾರೆ. ಹಲವು ಸಚಿವರು, ವಿವಿಧ ನಾಯಕರು ಸೇರಿ 33 ಸದಸ್ಯರ ಸಮಿತಿ ರಚನೆ ಮಾಡಲಾಗಿದೆ.

ಕೆಪಿಸಿಸಿ ಕಾರ್ಯಧ್ಯಕ್ಷರಾದ ದಿನೇಶ್ ಗುಂಡೂರಾವ್, ಎಸ್.ಆರ್.ಪಾಟೀಲ್ ಸಮಿತಿಯಲ್ಲಿದ್ದಾರೆ. ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ವಿನಯ್ ಕುಮಾರ್ ಸೊರಕೆ ಸಮಿತಿಯ ಸದಸ್ಯರು. ವಿವಿಧ ನಾಯಕರು, ವಿಧಾನ ಪರಿಷತ್ ಸದಸ್ಯರಿಗೂ ಸಮಿತಯಲ್ಲಿ ಅವಕಾಶ ನೀಡಲಾಗಿದೆ.
ಸಚಿವರು : ಪ್ರಣಾಳಿಕೆ ಸಮಿತಿಯಲ್ಲಿ ಕಾಗೋಡು ತಿಮ್ಮಪ್ಪ, ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಡಾ.ಎಚ್.ಸಿ.ಮಹದೇವಪ್ಪ, ಕೃಷ್ಣಬೈರೇಗೌಡ, ಎಚ್.ಎಂ.ರೇವಣ್ಣ, ಪ್ರಿಯಾಂಕ ಖರ್ಗೆ, ಯು.ಟಿ.ಖಾದರ್, ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ಉಮಾಶ್ರೀ ಸದಸ್ಯರಾಗಿದ್ದಾರೆ.
ಈಗಾಗಲೇ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ 'ಮನೆ-ಮನೆಗೆ ಕಾಂಗ್ರೆಸ್' ಎಂಬ ಅಭಿಯಾನವನ್ನು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಆರಂಭಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡಿಸೆಂಬರ್ 15ರಿಂದ ಒಂದು ತಿಂಗಳ ಕಾಲ ರಾಜ್ಯ ಪ್ರವಾಸವನ್ನು ಕೈಗೊಂಡಿದ್ದಾರೆ.












Click it and Unblock the Notifications