ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಲ್ಲ ಅಚ್ಚರಿ ಹೆಸರು

ಬೆಂಗಳೂರು, ಏಪ್ರಿಲ್ 26: ವಿಧಾನಸಭಾ ಚುನಾವಣೆ 2018ಗಾಗಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಜೆಡಿಎಸ್ ಪ್ರಕಟಿಸಿದೆ. ಯಾವುದೇ ಅಚ್ಚರಿಯ ಹೆಸರು ಕಂಡು ಬಂದಿಲ್ಲ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ 30 ಮಂದಿ ತಾರಾ ಪ್ರಚಾರಕರು ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗುವ ತಾರಾ ಪ್ರಚಾರಕ ಪಟ್ಟಿಯನ್ನು ಭಾರತದ ಚುನಾವಣಾ ಆಯೋಗಕ್ಕೆ ಕೊಟ್ಟು, ಅನುಮತಿ ಪಡೆಯಲಾಗಿದೆ ಎಂದು ಜೆಡಿಎಸ್ ಹೇಳಿದೆ. ಜೆಡಿಎಸ್ ಸ್ಟಾರ್ ಪ್ರಚಾರಕರಾಗಿ ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಬರುತ್ತಾರೆ ಎಂಬ ನಿರೀಕ್ಷೆಯಿತ್ತು.

Assembly Elections 2018 : JDS releases Star Campaigners list

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಭಾಗಗಳಲ್ಲಿ ಪವನ್ ಸ್ಟಾರ್ ಪವನ್ ಪ್ರಚಾರ ನಡೆಸುವ ಸಾಧ್ಯತೆಯಿದೆ ಎಂಬ ಸುದ್ದಿ ಹರಡಿತ್ತು. ಆದರೆ, ಸದ್ಯಕ್ಕೆ ಈ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಪವನ್ ಕಲ್ಯಾಣ್ ಅವರು ಈ ಬಗ್ಗೆ ತಮ್ಮ ನಿರ್ಧಾರ ಪ್ರಕಟಿಸಿಲ್ಲ.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಪಕ್ಷದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಆಲಿ, ಬಿ.ಎಂ.ಫಾರೂಕ್, ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ, ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಬಸವರಾಜ ಹೊರಟ್ಟಿ, ಬಿ.ಬಿ.ನಿಂಗಯ್ಯ, ಬಂಡೆಪ್ಪ ಕಾಶಂಪೂರ್, ಎಚ್.ವಿಶ್ವನಾಥ್ ಅವರು ತಾರಾ ಪ್ರಚಾರಕರಾಗಿದ್ದಾರೆ.

ನಟ ನಿಖಿಲ್ ಕುಮಾರಸ್ವಾಮಿ, ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ, ಪುತ್ರ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕಿ ಅನಿತಾಕುಮಾರಸ್ವಾಮಿ, ಗೀತಾ ಶಿವರಾಜ್‍ಕುಮಾರ್, ವಿಧಾನಪರಿಷತ್ ಸದಸ್ಯರಾದ ರಮೇಶ್‍ಬಾಬು, ಕೆ.ಟಿ.ಶ್ರೀಕಂಠೇಗೌಡ, ಕಾಂತರಾಜು, ಟಿ.ಎ.ಶರವಣ, ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಸೇರಿದಂತೆ ಪಕ್ಷದ ಹಲವು ಮುಖಂಡರು ತಾರಾ ಪ್ರಚಾರಕರಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+