ಗುರುವಾರದ ಕಲಾಪದ ಮುಖ್ಯಾಂಶಗಳು

ಬೆಳಗಾವಿ, ಜು.02 : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಂಗಾರು ಅಧಿವೇಶನದ 4ನೇ ದಿನದ ಕಲಾಪ ಆರಂಭವಾಗಿದೆ. ಬಿಜೆಪಿ ಸದಸ್ಯರು ಕೊಪ್ಪಳದ ಯಲ್ಲಾಲಿಂಗನ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಸಚಿವರು ಮತ್ತು ಶಾಸಕರು ಗೈರು ಹಾಜರಾಗಿರುವುದಕ್ಕೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರದ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ಬಗ್ಗೆ ವಿಷಯವನ್ನು ಪ್ರಸ್ತಾಪಿಸಿದರು. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು. ಇತರ ಸದಸ್ಯರು ಇದಕ್ಕೆ ಧ್ವನಿ ಗೂಡಿಸಿದರು. [ಪರಿಷತ್ ನಲ್ಲಿ ಯಲ್ಲಾಲಿಂಗನ ಕೊಲೆ ಬಗ್ಗೆ ಕಾವೇರಿದ ಚರ್ಚೆ]

assembly session

ಬುಧವಾರ ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಯಲ್ಲಾಲಿಂಗನ ಕೊಲೆ ಪ್ರಕರಣದ ಬಗ್ಗೆ ವಿಷಯ ಪ್ರಸ್ತಾಪಿಸಿದ್ದರು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ್ದರು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿ ತನಿಖೆ ನಡೆಯುತ್ತಿದೆ, ಸಿಬಿಐಗೆ ವಹಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. [ಬುಧವಾರದ ಕಲಾಪದಲ್ಲಿ ಏನಾಯ್ತು?]

ಪಿಡಿಒಗಳ ನೇಮಕ ಮಾಡಿ : ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ 1048 ಪಿಡಿಒ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಪಿಡಿಒಗಳ ನೇಮಕವಾಗದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಣೆ ಕಷ್ಟವಾಗಿದೆ ಎಂದು ಸರ್ಕಾರದ ಗಮನ ಸೆಳೆದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+