ಬಿಬಿಎಂಪಿ ವಿಭಜನೆ ವಿಧೇಯಕ, ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು, ಜುಲೈ 21 : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡುವ ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ 2015 ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ. ಸೋಮವಾರ ಪರಿಷತ್ತಿನಲ್ಲಿ ವಿಧೇಯಕಕ್ಕೆ ಒಪ್ಪಿಗೆ ಸಿಕ್ಕಿರಲಿಲ್ಲ, ಆದ್ದರಿಂದ ವಿಧಾನಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗಿದೆ.

ಮಂಗಳವಾರದ ಕಲಾಪ ಆರಂಭವಾಗುತ್ತಿದ್ದಂತೆ ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ 2015ದನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ತೀವ್ರ ವಿರೋಧದ ನಡುವೆಯೇ, ಸದನದಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಸರ್ಕಾರ ವಿಧೇಯಕಕ್ಕೆ ಅಂಗೀಕಾರ ಪಡೆದುಕೊಂಡಿತು. [ಬಿಬಿಎಂಪಿ ವಿಭಜನೆ ಹೇಗೆ?, ಸಂಕ್ಷಿಪ್ತ ಮಾಹಿತಿ]

assembly session

ವಿಧಾನಸಭೆಯಲ್ಲಿ ಅಂಗೀಕಾರವಾದ ವಿಧೇಯಕಕ್ಕೆ ಪರಿಷತ್ತಿನಲ್ಲಿ ಸೋಲು ಉಂಟಾದರೆ, ಅದನ್ನು ಪುನಃ ವಿಧಾನಸಭೆಯಲ್ಲಿ ಮಂಡನೆ ಮಾಡಿ ಅಂಗೀಕಾರ ಪಡೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಇದೇ ತಂತ್ರವನ್ನು ಬಳಸಿ ಸರ್ಕಾರ ವಿಧೇಯಕಕ್ಕೆ ಒಪ್ಪಿಗೆ ಪಡೆದುಕೊಂಡಿದೆ. ವಿಧಾನಸಭೆಯಲ್ಲಿ ಅನುಮೋದನೆ ಪಡೆದ ವಿಧೇಯಕವನ್ನು ಒಪ್ಪಿಗೆಗಾಗಿ ರಾಜ್ಯಪಾಲರಿಗೆ ಕಳುಹಿಸಲಾಗುತ್ತದೆ.

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಒಪ್ಪಿಗೆ ಪಡೆಯಲು ವಿಶೇಷ ವಿಧಾನಸಭೆ ಅಧಿಕವೇಶನ ನಡೆಸಲಾಗಿತ್ತು. ಆಗ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಒಪ್ಪಿಗೆ ಸಿಕ್ಕಿತ್ತು. ವಿಧಾನಪರಿಷತ್‌ನಲ್ಲಿ ಚರ್ಚೆ ನಡೆದ ನಂತರ ಸೆಲೆಕ್ಟ್ ಕಮಿಟಿಗೆ ಒಪ್ಪಿಸಲಾಗಿತ್ತು, ಸಚಿವ ಎಸ್.ಆರ್.ಪಾಟೀಲ್ ನೇತೃತ್ವದ 13 ಸದಸ್ಯರ ಸಮಿತಿ ಈ ಕುರಿತು ಇನ್ನೂ ವರದಿ ನೀಡಬೇಕಿದೆ.

ಸೋಮವಾರದ ಕಲಾಪದ ಸುದ್ದಿಗಳು

* ಬಿಬಿಎಂಪಿ ವಿಭಜನೆ, ಪರಿಷತ್ತಿನಲ್ಲಿ 2 ಮತದಿಂದ ಸರ್ಕಾರಕ್ಕೆ ಸೋಲು
* ಒಂದಂಕಿ ಲಾಟರಿ ಹಗರಣ : ಮತ್ತೆ ಸಿಐಡಿ ತನಿಖೆ?
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+