ಮೈಸೂರಿನ ಲಲಿತ್ ಮಹಲ್ ಪ್ಯಾಲೇಸ್ ಸರ್ಕಾರದ ವಶಕ್ಕೆ

ಬೆಂಗಳೂರು, ಜುಲೈ 15 : ಜೆಡಿಎಸ್ ಮಂಡಿಸಿರುವ ಅವಿಶ್ವಾಸ ನಿರ್ಣಯದ ಕುರಿತು ಚರ್ಚೆ ನಡೆಸಲು ಗುರುವಾರ ಅವಕಾಶ ನೀಡುವುದಾಗಿ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಭರವಸೆ ನೀಡಿದ್ದಾರೆ.

ಬುಧವಾರದ ಕಲಾಪ ಆರಂಭವಾಗುತ್ತಿದ್ದಂತೆ ಜೆಡಿಎಸ್‌ ವೈ.ಎಸ್.ವಿ.ದತ್ತ ಅವರು, ನಮ್ಮ ಪಕ್ಷದ ವತಿಯಿಂದ ಮಂಡಿಸಲಾಗಿರುವ ಅವಿಶ್ವಾಸ ನಿರ್ಣಯದ ಚರ್ಚೆಗೆ ಅವಕಾಶ ನೀಡಿ ಎಂದು ಸ್ಪೀಕರ್‌ಗೆ ಮನವಿ ಮಾಡಿದರು. ಆಗ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಗುರುವಾರ ಅವಕಾಶ ನೀಡುವುದಾಗಿ ತಿಳಿಸಿದರು.

ಲಲಿತ್ ಮಹಲ್ ಪ್ಯಾಲೇಸ್ ಸರ್ಕಾರದ ವಶಕ್ಕೆ : ವಿಧಾನಸೌಧದಲ್ಲಿ ಮುಂಗಾರು ಅಧಿವೇಶನದ ಮೂರನೇ ದಿನದ ಕಲಾಪ ಆರಂಭವಾಗಿದೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ಚರ್ಚೆ ನಡೆದಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ನೀಡಲಿದ್ದಾರೆ. ವಸತಿ ಸಚಿವ ಅಂಬರೀಶ್ ಇಂದು ಸದನಕ್ಕೆ ಹಾಜರಾಗಿದ್ದಾರೆ.

ಮೈಸೂರಿನ ಲಲಿತ್ ಮಹಲ್ ಅರಮನೆಯನ್ನು ಭಾರತೀಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಕ್ಕೆ 50 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆ ಅವಧಿ ಮುಗಿದ ಬಳಿಕ ಸರ್ಕಾರದ ವಶಕ್ಕೆ ಪಡೆಯಲು ಚಿಂತನೆ ನಡೆದಿದೆ ಎಂದು ಪ್ರವಾಸೋದ್ಯಮ ಸಚಿವ ಆರ್‌.ವಿ.ದೇಶಪಾಂಡೆ ವಿಧಾನಸಭೆಯಲ್ಲಿ ಹೇಳಿದ್ದಾರೆ.

cm siddaramaiah

ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ವಾಸು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಸರ್ಕಾರ ಹಾಕಿದ್ದ ಷರತ್ತುಗಳನ್ನು ಉಲ್ಲಂಘನೆ ಮಾಡಿದೆ. 2023ರ ತನಕ ಗುತ್ತಿಗೆ ಅವಧಿ ಇದ್ದು ನಂತರ ಸರ್ಕಾರದ ವಶಕ್ಕೆ ಪಡೆಯಲು ಚಿಂತಿಸಲಾಗುತ್ತಿದೆ ಎಂದರು.

ಗುತ್ತಿಗೆ ಅವಧಿ ಮುಗಿಯುವ ತನಕ ಕಟ್ಟಡದ ಪಾರಂಪರಿಕ ಮೌಲ್ಯಕ್ಕೆ ಧಕ್ಕೆ ಬಾರದಂತೆ ಕಾಪಾಡುವುದು ನಿಗಮದ ಜವಾಬ್ದಾರಿಯಾಗಿದೆ. ಕಟ್ಟಡದ ಪರಿಪೂರ್ಣ ನಿರ್ವಹಣೆ ನಿಗಮಕ್ಕೆ ವಹಿಸಲಾಗಿದೆ. ಗುತ್ತಿಗೆ ಅವಧಿ ಪೂರ್ಣಗೊಂಡ ಬಳಿಕ ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಸಚಿವರು ವಿವರಣೆ ನೀಡಿದರು.

ಮಂಗಳವಾರದ ಕಲಾಪದ ಮುಖ್ಯಾಂಶಗಳು

* ವಸತಿ ಇಲಾಖೆ ಸಾಧನೆ ಶೂನ್ಯ ಅಂದ್ರು ಸಿಎಂ, ಸಿಟ್ಟಾದ್ರು ಅಂಬರೀಶ್
* ರಾಜ್ಯದಲ್ಲಿ 2 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ
* ಗಣಿಗಾರಿಕೆ ಆರಂಭಕ್ಕೆ ಸಿದ್ದರಾಮಯ್ಯ ಸರ್ಕಾರ ಚಿಂತನೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+