ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿಕ್ಷಕರ ವರ್ಗಾವಣೆ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

|
Google Oneindia Kannada News

ಬೆಂಗಳೂರು, ಮಾರ್ಚ್ 17: ಶಿಕ್ಷಕರ ವರ್ಗಾವಣೆ ನಿಯಂತ್ರಣ ವಿಧೇಯಕಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು.

ಈ ವೇಳೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಇದೊಂದು ಶಿಕ್ಷಕ ಸ್ನೇಹಿ, ಶಿಕ್ಷಣಕ್ಕೆ ಪೂರಕ ಹಾಗೂ ವಿದ್ಯಾರ್ಥಿಗಳ ಹಿತಚಿಂತಕ ವಿಧೇಯಕವಾಗಿದೆ. ವರ್ಗಾವಣೆ ಸರಳೀಕರಣಗೊಳಿಸಲು ಈ ವಿಧೇಯಕ ತರಲಾಗಿದೆ‌‌ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು. ಕಳೆದ‌ ವಾರ ಮಂಡಿಸಲಾಗಿದ್ದ ವಿಧೇಯಕವನ್ನು ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.

teacher

ಪತಿ ಮತ್ತು ಪತ್ನಿ ಪ್ರಕರಣದ ಸಂದರ್ಭದಲ್ಲಿ ಒಂದೇ ಸ್ಥಳದಲ್ಲಿ ಸ್ಥಳ ನಿಯುಕ್ತಿಗಾಗಿ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡಲಾಗುತ್ತದೆ.

ಕಡ್ಡಾಯ ವರ್ಗಾವಣೆಯ ಶಾಕ್; ಕೋಮಾಕ್ಕೆ ಜಾರಿದ್ದ ಶಿಕ್ಷಕ ಸಾವುಕಡ್ಡಾಯ ವರ್ಗಾವಣೆಯ ಶಾಕ್; ಕೋಮಾಕ್ಕೆ ಜಾರಿದ್ದ ಶಿಕ್ಷಕ ಸಾವು

ಈ ವಿಧೇಯಕದ ಪ್ರಕಾರ ಶಿಕ್ಷಕ ಅಥವಾ ಆ ಶಿಕ್ಷಕರ ಪತಿ ಅಥವಾ ಪತ್ನಿ ಅಥವಾ ಮಕ್ಕಳು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಲ್ಲಿ ಮತ್ತು ಅದಕ್ಕೆ ವೈದ್ಯಕೀಯ ಚಿಕಿತ್ಸೆ ಎಲ್ಲೂ ದೊರೆಯದಿದ್ದಲ್ಲಿ ಅಂತಹವರಿಗೆ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡಲಾಗುತ್ತದೆ.

ಕಳೆದ ಒಂದು ವರ್ಷದಿಂದ ಶಿಕ್ಷಕರ ಕಡ್ಡಾಯ ವರ್ಗಾವಣೆಗೆ ದಿನಾಂಕಗಳು ನಿಗದಿಯಾದರೂ ಕೂಡ ಹಲವು ಬಾರಿ ಮುಂದೂಡಲ್ಪಟ್ಟಿತ್ತು.

English summary
The Legislative Assembly on Monday passed a Bill that promises to simplify and streamline the process of transferring government school teachers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X