Breaking; ಈಶ್ವರಪ್ಪ ವಿವಾದ, ಕಲಾಪ ಫೆ. 21ಕ್ಕೆ ಮುಂದೂಡಿಕೆ
ಬೆಂಗಳೂರು, ಫೆಬ್ರವರಿ 18; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಸದಸ್ಯರ ಧರಣಿ ಮುಂದುವರೆದಿದೆ. ವಿಧಾನಸಭೆಯ ಇಡೀ ದಿನದ ಕಲಾಪ ಇದಕ್ಕೆ ಬಲಿಯಾಗಿದೆ.
ಶುಕ್ರವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಗದ್ದಲ ಮುಂದುವರೆದ ಕಾರಣ ಕಲಾಪವನ್ನು ಫೆಬ್ರವರಿ 21ಕ್ಕೆ ಮುಂದೂಡಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದರು.
"ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ" ಎಂಬ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸದಸ್ಯರು ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಸಚಿವರ ವಿರುದ್ಧ ಅಹೋರಾತ್ರಿ ಧರಣಿ ನಡೆಸಿದರು.

ಗುರುವಾರವೂ ಕಾಂಗ್ರೆಸ್ ಸದಸ್ಯರು ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಭೋಜನ ವಿರಾಮದ ಬಳಿಕ ಗದ್ದಲ ಹೆಚ್ಚಾದ ಕಾರಣ ವಿಧಾನಸಭೆ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಲಾಗಿತ್ತು. ಕಲಾಪ ಮುಂದೂಡಿದರು. ಕಾಂಗ್ರೆಸ್ ಸದ್ಯಸ್ಯರು ಸಭಾಂಗಣದಲ್ಲಿಯೇ ಧರಣಿ ನಡೆಸುತ್ತಿದ್ದರು.
ಬಳಿಕ ಅಹೋರಾತ್ರಿ ಧರಣಿ ನಡೆಸುವುದಾಗಿ ಘೋಷಣೆ ಮಾಡಿದರು. ಧರಣಿ ಕೈ ಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಾಡಿದ ಮನವಿಗೆ ಕಾಂಗ್ರೆಸ್ ನಾಯಕರು ಒಪ್ಪಿಗೆ ಕೊಡಲಿಲ್ಲ.
v=Koo Appಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ದೇಶದ ಹಿತಾಸಕ್ತಿ ಹಾಗೂ ಪ್ರಜಾಪ್ರಭುತ್ವ ಉಳಿಸಲು ಹೋರಾಟ ಮಾಡುತ್ತಿದ್ದೇವೆ. ಭಾರತದ ಧ್ವಜ ಹಾಗೂ ರಾಷ್ಟ್ರಗೀತೆಯನ್ನು ಗೌರವಿಸುವುದು ಮೂಲಭೂತ ಹಕ್ಕು ಎಂದು ಸಂವಿಧಾನದ ವಿಧಿ 51ಎ ಹೇಳುತ್ತದೆ. ಜನಪ್ರತಿನಿಧಿಗಳಾಗಿ, ಭಾರತೀಯರಾಗಿ ನಾವು ರಾಷ್ಟ್ರಧ್ವಜಕ್ಕೆ ಅಪಮಾನ ಎಸಗುವ ಯಾವ ತಪ್ಪನ್ನೂ ಮಾಡಿಲ್ಲ. 1/5 - D K Shivakumar (@dkshivakumar_official) 18 Feb 2022
ಬಳಿಕ ರಾತ್ರಿ 8.30ರ ಸುಮಾರಿಗೆ ಸರ್ಕಾರದ ವತಿಯಿಂದಲೇ ಧರಣಿ ನಡೆಸುತ್ತಿರುವ ಸದಸ್ಯರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸಭೆಯಲ್ಲಿ ಧರಣಿ ನಡೆಸಿದರು. ವಿಧಾನ ಪರಿಷತ್‌ನಲ್ಲಿಯೂ ಧರಣಿ ಮುಂದುವರೆಯಿತು.
ಶುಕ್ರವಾರದ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಕೆ. ಎಸ್. ಈಶ್ವರಪ್ಪ ವಿರುದ್ಧ ಘೋಷಣೆಗಳನ್ನು ಕೂಗಲು ಆರಂಭಿಸಿದರು. ವಿಧಾನ ಪರಿಷತ್ತಿನಲ್ಲಿಯೂ ಗದ್ದಲ ನಡೆಯಿತು. ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಕೆಲ ಸಮಯ ಮುಂದೂಡಿದರು. ಬಳಿಕ ಕಲಾಪ ಆರಂಭವಾದರೂ ಗದ್ದಲ ಮುಂದುವರೆಯಿತು. ಇದರಿಂದಾಗಿ ವಿಧಾನ ಪರಿಷತ್ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು.
ಕಲಾಪ ಮುಂದೂಡಿದರು ಕಾಂಗ್ರೆಸ್ ಸದಸ್ಯರ ಧರಣಿ ಮುಂದುವರೆದಿದೆ. ಸೋಮವಾರದ ತನಕ ಧರಣಿ ಮುಂದುವರೆಸುತ್ತೇವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ. ಕೆ. ಹರಿಪ್ರಸಾದ್ ಹೇಳಿದ್ದಾರೆ.












Click it and Unblock the Notifications