ಕೇಸರಿಶಾಲು ಹಾಕಿದರೆ ದೇಶಭಕ್ತಿ ಎನ್ನುವುದು ತಪ್ಪು ಕಲ್ಪನೆ : ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಫೆಬ್ರವರಿ 29: ಬಿಜೆಪಿಯವರು ಶ್ರೀಮಂತರ ಪರವಾಗಿರುವ ಪಕ್ಷ. ಬಿಜೆಪಿಯವರು ಕೇಸರಿ ಶಾಲು ಹಾಕಿಕೊಂಡರೆ ದೇಶ ಭಕ್ತಿ ಬರುತ್ತದೆ ಎಂದುಕೊಂಡಿರುವುದು ಅವರ ತಪ್ಪು ಕಲ್ಪನೆ. ಇವರಿಗೆ ದೇಶದ ಬಗ್ಗೆ ಮಾತಾನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಮ್ಮ ಸರ್ಕಾರ ಆರ್ಥಿಕವಾಗಿ, ಸಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ರಾಜ್ಯದ ಜನರಿಗೆ ಶಕ್ತಿ ತುಂಬುವ ಸಲುವಾಗಿ ಜನಪರ, ಬಡವರ ಪರ ಬಜೆಟ್ ಮಂಡಿಸಿದೆ. ದೇಶದ ಪ್ರಧಾನಿಯವರು ಐದು ಗ್ಯಾರಂಟಿಗಳನ್ನು ಕರ್ನಾಟಕದಲ್ಲಿ ಜಾರಿ ಮಾಡುವುದಕ್ಕೆ ಸಾಧ್ಯವಿಲ್ಲ. ಗ್ಯಾರಂಟಿ ಯೋಜನೆಗಳಿಂದ ಅಭಿವೃಧ್ಧಿ ಕೆಲಸ ಕುಂಟಿತವಾಗುತ್ತವೆ ಎಂದು ಮೂದಲಿಸಿದ್ದರು ಎಂದು ತಿಳಿಸಿದರು.

ಭಾರತಕ್ಕೆ ಸ್ವಾತಂತ್ರ್ಯ ತಂದಿರುವುದು ಕಾಂಗ್ರೆಸ್ ಪಕ್ಷದವರು. 1942ನೇ ಸಾಲಿನಲ್ಲಿ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಹೇಳುವಾಗ ಬಿಜೆಪಿಯವರು ಎಲ್ಲಿದ್ದರು. ಬಿಜೆಪಿಯವರು ಬ್ರಿಟಿಷ್ ರವರ ಜೊತೆಗೆ ಶಾಮೀಲು ಆಗಿದ್ದರು. ಇವರಿಗೆ ದೇಶದ ಬಗ್ಗೆ ಮಾತಾನಾಡುವ ಯಾವುದೇ ನೈತಿಕತೆ ಇಲ್ಲ. ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದ ಬಗ್ಗೆ ಕಾಳಜಿಲ್ಲ. ನಮ್ಮ ಹೋರಾಟವೇ ಬಿಜೆಪಿ ವಿರುದ್ಧ. ಕಾಂಗ್ರೆಸ್ ಪಕ್ಷ ಸಂವಿಧಾನ ತಂದುಕೊಟ್ಟ ಮೇಲೆ ಬಿಜೆಪಿಯವರು ಇಲ್ಲಿಗೆ ಬಂದಿದ್ದಾರೆ. ಬಿಜೆಪಿಯವರು ಬಡವರ, ದಿನದಲಿತರ, ಅಲ್ಪಸಂಖ್ಯಾಂತರ ಜನರ ದ್ವೇಷಿಗಳು ಎಂದರು.
ಧರ್ಮ ಮತ್ತು ಜಾತಿ ಹೆಸರನಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಸುಳ್ಳೇ ಬಿಜೆಪಿಯ ಮನೆ ದೇವರು. ಬಿಜೆಪಿಯವರ ನಾಟಕವನ್ನು ರಾಜ್ಯದ ಜನರು ನೋಡುತ್ತಿದ್ದಾರೆ. ಅಧಿಕಾರದಲ್ಲಿ ಇದ್ದಾಗ ಬಿಜೆಪಿಯವರಿಗೆ ಜನರ ಆರ್ಶೀವಾದ ಮಾಡಿಲ್ಲ. ಹಿಂಬಾಗಿಲು ದಿಂದ ಬಂದು ಅಧಿಕಾರ ಮಾಡುವುದಕ್ಕೆ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಹಸಿವು ಮುಕ್ತ ಭಾರತವನ್ನಾಗಿ ಮಾಡುತ್ತೇವೆ ಎಂದು ಹೇಳುವುದನ್ನು ಬಿಟ್ಟು, ಕಾಂಗ್ರೆಸ್ ಮುಕ್ತ ಭಾರತ ಎಂದು ಘೋಷಣೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಸಾಮಾಜಿಕ ಭದ್ರತಾ ಯೋಜನೆಯಡಿ ಕೇಂದ್ರ ಸರ್ಕಾರ 525 ಕೋಟಿ ರೂ. ನೀಡಿದರೆ, ರಾಜ್ಯ ಸರ್ಕಾರ 350 ಕೋಟಿ ನೀಡಿದೆ ಅದರ ಜೊತೆಗೆ 8569 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಕೊಟ್ಟಿದೆ. ಒಟ್ಟಾರೆಯಾಗಿ 13005 ಕೋಟಿ ರೂ.ಗಳು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬರುತ್ತದೆ ಅಷ್ಟೇ . ಪಿಎಂ ಕೃಷಿ ಸಿಂಚಯಿ ಯೋಜನೆಯಡಿ 57% ಕೇಂದ್ರ ಸರ್ಕಾರ ಹಾಗೂ 33% ರಾಜ್ಯ ಸರ್ಕಾರ ನೀಡುತ್ತದೆ ಅದರ ಜೊತೆ ಶೇ 35 ರಷ್ಟು ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರ ನೀಡುತ್ತದೆ .
ಪಿ ಎಂ ಆವಾಸ್ ಯೋಜನೆಯಡಿ 5-6 ಲಕ್ಷ ರೂ ರಾಜ್ಯ ಸರ್ಕಾರ ನೀಡಿದರೆ, ಕೇಂದ್ರ 1.50.ಲಕ್ಷ ರೂ. ನೀಡುತ್ತದೆ. ಅದರ ಜೊತೆಗೆ 1.38 ಲಕ್ಷ ಜಿಎಸ್ ಟಿ ಸೇರಿ ಒಂದು ಮನೆಗೆ ಕೇಂದ್ರ ಸರ್ಕಾರ ನೀಡುವುದು ಕೇವಲ 12 ಸಾವಿರ ರೂ ಮಾತ್ರ ಎಂದರು. ಇದರಲ್ಲಿ ನಮ್ಮ ಹೆಸರಿಲ್ಲ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದ ಸಿಎಂ ಮೋದಿ ಗ್ಯಾರಂಟಿ ಎಂದು ನಮ್ಮ ಗ್ಯಾರಂಟಿ ಕದ್ದಿದ್ದಾರೆ ಎಂದರು.
ಕೇಂದ್ರ ಸರ್ಕಾರದ ಬಜೆಟ್ ಗಾತ್ರ 45 ಲಕ್ಷ ಕೋಟಿ ರೂ.ಗಳಿದ್ದರೂ ನಮಗೆ 50257 ಕೋಟಿ ರೂ.ಗಳನ್ನು ಮಾತ್ರ ಕೊಟ್ಟಿದ್ದಾರೆ. ಅದರಲ್ಲಿ 13 ಸಾವಿರ ಕೋಟಿ ಕೇಂದ್ರ ಪುರಸ್ಕೃತ ಯೋಜನೆಗಳೂ ಸೇರಿವೆ. ಅದರಲ್ಲಿಯೂ ಕೇಂದ್ರದ ಪಾಲು ಕಡಿಮೆ ಇದ್ದು, ನಮ್ಮ ಪಾಲು ಹೆಚ್ಚಿದೆ. 2013 ಮಾರ್ಚ್ ವರೆಗೆ 2067 ಕಿಮೀ ರಸ್ತೆಗಳಾಗಿವೆ. ಬೇರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚಾಗಿದ್ದು, ಇಲ್ಲಿಯೂ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದರು.
ಸರ್ವಶಿಕ್ಷಣ ಅಭಿಯಾನದಡಿ 702 ಕೋಟಿ ರೂ. ಕೇಂದ್ರ ಸರ್ಕಾರ ಕೊಟ್ಟರೆ ನಮ್ಮ.ಪಾಲು 472 ಕೋಟಿ ರೂ. ಕರ್ನಾಟಕ ಸರ್ಕಾರ ಹೆಚ್ಚುವರಿಯಾಗಿ 1528 ಕೋಟಿ ರೂ.ಗಳನ್ನು ನೀಡಿದೆ. ಮಧ್ಯಾಹ್ನದ ಬಿಸಿಯೂಟದಡಿ 594 ಕೋಟಿ ಕೇಂದ್ರ ಕೊಟ್ಟರೆ ರಾಜ್ಯ ಸರ್ಕಾರ 346 ಕೋಟಿ ರೂ. ನೀಡಿ ಹೆಚ್ಚುವರಿಯಾಗಿ 967 ಕೋಟಿ ರೂ.ಗಳನ್ನು ನೀಡಿದೆ. ಆಯುಷ್ಮಾ ನ್ ಭಾರತ್ ಯೋಜನೆಯಡಿ 187 ಕೋಟಿ ರೂ.ಗಳನ್ನು ಕೇಂದ್ರ ನೀಡಿದ್ದರೆ 124 ಕೋಟಿ ರೂ ಜೊತೆಗೆ 624 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ನೀಡಿದೆ.












Click it and Unblock the Notifications