ಸದನದಲ್ಲಿ ಇಂದು : ರೈತ ಆತ್ಮಹತ್ಯೆ ಬಗ್ಗೆ ಮಾತನಾಡಿದ ಎಚ್ಡಿಕೆ
ಬೆಂಗಳೂರು, ನವೆಂಬರ್ 25 : 'ರೈತರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿಲ್ಲ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು. 'ಕರ್ನಾಟಕ ಸರ್ಕಾರ ರೈತರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಿಲ್ಲ' ಎಂದು ಅವರು ಆರೋಪಿಸಿದರು.
ಬುಧವಾರದ ವಿಧಾನಸಭೆಯಲ್ಲಿ ಕಲಾಪದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, 'ರಾಜ್ಯದ ರೈತರ ಆತ್ಮಹತ್ಯೆ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸುತ್ತಿಲ್ಲ, ರೈತರಿಗೆ ಧೈರ್ಯ ತುಂಬುವ ಕೆಲಸವನ್ನೂ ಮಾಡುತ್ತಿಲ್ಲ' ಎಂದು ಹೇಳಿದರು. [ಕುಮಾರಸ್ವಾಮಿ ರಾಜೀನಾಮೆ ಮಾತನಾಡಿದ್ದೇಕೆ?]

'ಪ್ರತಿಪಕ್ಷಗಳು ಬರಗಾಲ, ಬೆಳೆಹಾನಿ ಕುರಿತಂತೆ ಕೇಂದ್ರ ಸರ್ಕಾರದ ಗಮನ ಸೆಳೆದರೂ ಪ್ರಯೋಜನವಾಗುತ್ತಿಲ್ಲ. ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರೈತರನ್ನು ಕಡೆಗಣಿಸಿದ್ದಾರೆ' ಎಂದು ದೂರಿದರು.
2018ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣ : ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸುವ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯನ್ನು 2018ರೊಳಗೆ ಪೂರ್ಣಗೊಳಿಸಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ವಿಧಾನಪರಿಷತ್ತಿನಲ್ಲಿ ಹೇಳಿದರು. ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 2016ರೊಳಗೆ ನೀರೆತ್ತುವ ಕಾಮಗಾರಿ ಮುಗಿಸಿ 2018ರೊಳಗೆ ಎರಡು ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತದೆ ಎಂದರು.












Click it and Unblock the Notifications