ಉಪ ಲೋಕಾಯುಕ್ತ ಪದಚ್ಯುತಿ, ಸದನದಲ್ಲಿ ಕೋಲಾಹಲ
ಬೆಂಗಳೂರು, ನವೆಂಬರ್ 27 : ಚಳಿಗಾಲದ ಅಧಿವೇಶನ ಕೊನೆಯ ದಿನವಾದ ಶುಕ್ರವಾರ ಸದನದಲ್ಲಿ ಕೋಲಾಹಲ ಉಂಟಾಗಿದೆ. ಉಪ ಲೋಕಾಯುಕ್ತ ಸುಭಾಷ್ ಬಿ ಅಡಿ ಅವರ ಪದಚ್ಯುತಿ ನಿರ್ಣಯ ಮಂಡಿಸಿರುವುದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಉಪ ಲೋಕಾಯುಕ್ತ ಸುಭಾಷ್ ಬಿ ಅಡಿ ಅವರ ಪದಚ್ಯುತಿ ಬಗ್ಗೆ ಕಾಂಗ್ರೆಸ್ ಶಾಸಕರು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ ಸಲ್ಲಿಸಿದ್ದರು. ಇಂದು ನಿರ್ಣಯವನ್ನು ಸದನದಲ್ಲಿ ಮಂಡನೆ ಮಾಡಲು ಸ್ಪೀಕರ್ ಒಪ್ಪಿಗೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು. [ಉಪ ಲೋಕಾಯುಕ್ತ ಪದಚ್ಯುತಿ]

ಕಲಾಪದಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, 'ಮತ ವಿಭಜನೆ ಮೂಲಕ ನಿರ್ಣಯವನ್ನು ಮಂಡನೆ ಮಾಡಲು ಅವಕಾಶ ನೀಡಬೇಕು' ಎಂದು ಆಗ್ರಹಿಸಿದರು. ಆದರೆ, ನಿರ್ಣಯಕ್ಕೆ 78ಕ್ಕೂ ಅಧಿಕ ಕಾಂಗ್ರೆಸ್ ಶಾಸಕರ ಸಹಿ ಇರುವುದರಿಂದ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಅವಕಾಶ ನೀಡಲಿಲ್ಲ. [ಲೋಕಾಯುಕ್ತ ಪದಚ್ಯುತಿ ಹೇಗೆ?]
ನಿರ್ಣಯವನ್ನು ಮಂಡನೆ ಮಾಡುತ್ತಿದ್ದಂತೆ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಗದ್ದಲ ಆರಂಭಿಸಿದರು. ಗದ್ದಲದ ನಡುವೆಯೇ ಪ್ರಶ್ನೋತ್ತರ ಕಲಾಪ ಮುಗಿಸಿದ ಕಾಗೋಡು ತಿಮ್ಮಪ್ಪ ಅವರು, ಕಲಾಪವನ್ನು ಅರ್ಧಗಂಟೆಗಳ ಕಾಲ ಮುಂದೂಡಿದರು.












Click it and Unblock the Notifications