Get Updates
Get notified of breaking news, exclusive insights, and must-see stories!

Karnataka Police: ಆಸ್ತಿ ಖರೀದಿ, ಮಾರಾಟ ಮಾಡುವ ಪೊಲೀಸರ ಗಮನಕ್ಕೆ

ಬೆಂಗಳೂರು, ಫೆಬ್ರವರಿ 22; ಕರ್ನಾಟಕದ ಪೊಲೀಸ್ ಇಲಾಖೆ ಇಲಾಖೆಯ ನೌಕರರು ಮತ್ತು ಸಿಬ್ಬಂದಿಗಳು ಸ್ಥಿರ/ ಚರಾಸ್ತಿಯನ್ನು ಖರೀದಿ/ ಮಾರಾಟ ಮಾಡುವ ಕುರಿತು ಸುತ್ತೋಲೆಯೊಂದನ್ನು ಹೊರಡಿಸಿದೆ. ಅನುಮತಿಗಾಗಿ ಬರುತ್ತಿದ್ದ ಮನವಿಗಳನ್ನು ಪರಿಶೀಲಿಸಿದ ಬಳಿಕ ಈ ಕುರಿತು ಮಾಹಿತಿ ನೀಡಲಾಗಿದೆ.

ಸೌಮೇಂದು ಮುಖರ್ಜಿ, ಎಡಿಜಿಪಿ ಆಡಳಿತ ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಪರವಾಗಿ ಈ ಸುತ್ತೋಲೆಯನ್ನು ಹೊರಡಿಸಲಾಗಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021, ದಿನಾಂಕ 7/1/2021 ಮತ್ತು ಸುತ್ತೋಲೆ ದಿನಾಂಕ 22/2/2016 ಉಲ್ಲೇಖ ಮಾಡಲಾಗಿದೆ.

Asset Purchase Karnataka Police Department Circular

ಸುತ್ತೋಲೆಯ ವಿವರಗಳು: ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 'ಎ' ಮತ್ತು 'ಬಿ' ದರ್ಜೆ ಅಧಿಕಾರಿಗಳು (ಐ.ಪಿ.ಎಸ್ ಅಧಿಕಾರಿಗಳನ್ನು ಹೊರತುಪಡಿಸಿ) ಸ್ಥಿರಾಸ್ತಿ ಮತ್ತು ಚರಾಸ್ತಿಗಳನ್ನು ಖರೀದಿಸಲು/ ಮಾರಾಟ ಮಾಡಲು/ ಉಡುಗೊರೆ ಪಡೆಯಲು/ ಗೃಹ ನಿರ್ಮಾಣ ಮಾಡಲು ಅನುಮತಿ ಕೋರಿ ಮನವಿಗಳನ್ನು ಪೊಲೀಸ್ ಪ್ರಧಾನ ಕಛೇರಿಗೆ ಸಲ್ಲಿಸುತ್ತಿದ್ದು, ಸದರಿಯವರುಗಳು ಸಲ್ಲಿಸುತ್ತಿರುವ ಮನವಿ/ ಪ್ರಸ್ತಾವನೆಗಳನ್ನು ಪರಿಶೀಲಿಸಲಾಗಿ, ಸಲ್ಲಿಸುತ್ತಿರುವ ಮನವಿಗಳು ಅಪೂರ್ಣವಾಗಿದ್ದು, ಸಂಬಂಧಪಟ್ಟ ದಾಖಲೆಗಳನ್ನು ಮನವಿಯೊಂದಿಗೆ ಸಲ್ಲಿಸದಿರುವುದು ಕಂಡುಬಂದಿರುತ್ತದೆ ಎಂದು ಸುತ್ತೋಲೆ ಹೇಳಿದೆ. ಇದರಿಂದ ಅನಗತ್ಯ ವಿಳಂಬಕ್ಕೆ ಕಾರಣವಾಗಿರುತ್ತದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021, ದಿನಾಂಕ 07/01/2021ರ ನಿಯಮ 24 ರಂತೆ ಚರ, ಸ್ಥಿರ ಮತ್ತು ಬೆಲೆಬಾಳುವ ಸ್ವತ್ತು ಎಂಬುದರಡಿಯಲ್ಲಿ ಉಪ ನಿಯಮ (3) ರನ್ವಯ ಯಾರೇ ಸರ್ಕಾರಿ ನೌಕರನು ಅಥವಾ ಅವನ ಕುಟುಂಬದ ಯಾರೇ ಸದಸ್ಯನು ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಿದ ಹೊರತು, ತನ್ನ ಸ್ವಂತ ಹೆಸರಿನಲ್ಲಾಗಲೀ ಅಥವಾ ತನ್ನ ಕುಟುಂಬದ ಯಾರೇ ಸದಸ್ಯನ ಹೆಸರಿನಲ್ಲಾಗಲೀ ಗುತ್ತಿಗೆಯ, ಅಡಮಾನದ, ಖರೀದಿಯ, ಮಾರಾಟದ ಉಡುಗೊರೆಯ ಮೂಲಕ ಅಥವಾ ಅನ್ಯಥಾ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸತಕ್ಕದ್ದಲ್ಲ ಅಥವಾ ವಿಲೇ ಮಾಡತಕ್ಕದ್ದಲ್ಲ.

ಒಬ್ಬ ಸರ್ಕಾರಿ ನೌಕರನು ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೇ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸಿದ್ದಲ್ಲಿ ಅಥವಾ ವಿಲೇ ಮಾಡಿದಲ್ಲಿ ಆತ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳ ಒಳಗಾಗಿ ವಿವರಗಳು ಹಾಗೂ ಪೂರಕ ದಾಖಲೆಗಳನ್ನು ಹಾಗೂ ಸಮರ್ಥನೀಯ ಕಾರಣಗಳೊಂದಿಗೆ ನಿಯಮಿತ ಪ್ರಾಧಿಕಾರಿಗೆ ವರದಿ ಮಾಡತಕ್ಕದ್ದು, ನಿಯಮಿತ ಪ್ರಾಧಿಕಾರಿಯು ಸರ್ಕಾರಿ ನೌಕರನು ನೀಡಿದ ಕಾರಣಗಳು ಅಂಗೀಕಾರ್ಹವೆಂದು ತೃಪ್ತಿಪಟ್ಟಲ್ಲಿ ಸರ್ಕಾರಿ ನೌಕರನು ಸಲ್ಲಿಸಿದ ದಾಖಲೆಗಳು ಹಾಗೂ ವಿವರಗಳನ್ನು ಪರಿಶೀಲಿಸಿ ಅಂತಹ ವ್ಯವಹರಣೆಯನ್ನು ಘಟನೋತ್ತರವಾಗಿ ಟಿಪ್ಪಣಿ ಮಾಡಿಕೊಳ್ಳಬಹುದು ಎಂದು ನಮೂದಿಸಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021 ರಲ್ಲಿ ವಿವರಿಸಿರುವಂತೆ ಸರ್ಕಾರಿ ನೌಕರನು ಅಥವಾ ಅವನ ಕುಟುಂಬದ ಯಾರೇ ಸದಸ್ಯನು ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಿದ ಹೊರತು ಅಥವಾ ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೇ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸಿದ್ದಲ್ಲಿ ಅಥವಾ ವಿಲೇ ಮಾಡಿದಲ್ಲಿ ಆತ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳ ಒಳಗಾಗಿ ವಿವರಗಳು ಹಾಗೂ ಪೂರಕ ದಾಖಲೆಗಳನ್ನು ಹಾಗೂ ಸಮರ್ಥನೀಯ ಕಾರಣಗಳೊಂದಿಗೆ ನಿಯಮಿಸಿದ ಪ್ರಾಧಿಕಾರಿಗೆ ವರದಿ ಮಾಡದೇ ಆನಂತರದಲ್ಲಿ ಸಲ್ಲಿಸುವ ಅಧಿಕಾರಿಗಳ ವಿರುದ್ಧ ಕೆ.ಎಸ್.ಸಿ (ನಡತೆ) ನಿಯಮಗಳನ್ನು ಉಲ್ಲಂಗಿಸಿದ ಆರೋಪದಡಿ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಈ ಮೂಲಕ ತಿಳಿಸಲಾಗಿದೆ.

ಆದ್ದರಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 'ಎ' 'ಬಿ' ಮತ್ತು 'ಸಿ' ದರ್ಜೆ ಅಧಿಕಾರಿಗಳು ಸ್ಥಿರಾಸ್ತಿ ಮತ್ತು ಚರಾಸ್ತಿಗಳನ್ನು ಖರೀದಿಸಲು/ ಮಾರಾಟ ಮಾಡಲು ಪಡೆಯಲು ನಿರ್ಮಾಣ ಮಾಡಲು ಸಲ್ಲಿಸುವ ಮನವಿಗಳನ್ನು ಪರಿಶೀಲಿಸಿ ಟಿಪ್ಪಣೀಕರಿಸಿಕೊಳ್ಳಬೇಕಾಗಿರುವುದರಿಂದ ಈ ಕಛೇರಿಗೆ/ ನಿಯಮಿಸಿದ ಪ್ರಾಧಿಕಾರಿಗಳಿಗೆ ಸಲ್ಲಿಸುವ ಮನವಿಯೊಂದಿಗೆ ವಿಷಯ/ ಅಂಶಗಳನ್ವಯ ಪರಿಶೀಲಿಸಿ, ಭರ್ತಿಮಾಡಿ ಸಂಬಂಧಪಟ್ಟ ಎಲ್ಲಾ ಪೂರಕ ದಾಖಲೆಗಳೊಂದಿಗೆ ನಿಯಮಿಸಿದ ಪ್ರಾಧಿಕಾರಿಗಳಿಗೆ ಸಲ್ಲಿಸುವಂತೆ ತಮ್ಮ ಅಧೀನ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+