ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

BREAKING: ರಾಜಭವನಕ್ಕೆ ಆಗಮಿಸಿದ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್!

|
Google Oneindia Kannada News

ಬೆಂಗಳೂರು, ಜು. 10: ನಾಳೆ ಪ್ರಮಾಣವಚನ ಸ್ವೀಕರಿಸಲಿರುವ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿಗೆ ಆಗಮಿಸಿದರು. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಗೆಹ್ಲೋಟ್ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಕಂದಾಯ ಸಚಿವ ಆರ್. ಅಶೋಕ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಥಾವರ್ ಚಂದ್ ಗೆಹ್ಲೋಟ್ ಅವರು ನಾಳೆ ರಾಜ್ಯದ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ತಮ್ಮ ಕುಟುಂಬಸ್ಥರೊಂದಿಗೆ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಗೆಹ್ಲೋಟ್ ಅವರನ್ನು ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ರಾಜ್ಯ ಸರ್ಕಾರದ ‌ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌, ರಾಜ್ಯ ಪೋಲಿಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸ್ವಾಗತಿಸಿದರು. ಬಳಿಕ ಥಾವರ್ ಚಂದ್ ಗೆಹ್ಲೋಟ್ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ರಾಜಭವನಕ್ಕೆ ತೆರಳಿದರು. ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉನ್ನತ ಅಧಿಕಾರಗಳು ಹೂ ಗುಚ್ಛ ನೀಡಿ ಬರಮಾಡಿಕೊಂಡರು.

Assigned Governor of Karnataka Thawar Chand Gehlot arrived in Rajabhavan

ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯದ 19ನೇ ರಾಜ್ಯಪಾಲರಾಗಿ ನಾಳೆ (ಜು.11) ಬೆಳಗ್ಗೆ 10.30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.

Assigned Governor of Karnataka Thawar Chand Gehlot arrived in Rajabhavan

ರಾಜ್ಯಪಾಲ ವಜುಭಾಯಿ ವಾಲಾ ಅವರು ಸುಮಾರು 6 ವರ್ಷ 10 ತಿಂಗಳು ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಅವರ ಸ್ಥಾನಕ್ಕೆ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆದೇಶ ಮಾಡಿದ್ದರು. ರಾಜ್ಯಪಾಲ ವಜುಭಾಯಿ ವಾಲಾ ಅವರ ಅವಧಿ ಮುಗಿದು 2 ವರ್ಷಗಳಾಗಿದ್ದವು.

Recommended Video

ಸಿಪಿ ಯೋಗೀಶ್ವರ್ 420 ಕೆಲಸ ಮಾಡ್ತಿದ್ದಾರೆ ಅಂತ ಟಾಂಗ್ ಕೊಟ್ಟ ಡಿಕೆ ಸುರೇಶ್ | Oneindia Kannada

English summary
Assigned Governor of Karnataka Thawar Chand Gehlot arrived in Rajabhavan. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X