ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ: ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ನಡೆಸುವ ಸ್ಪಷ್ಟನೆ
ಬೆಂಗಳೂರು, ಮಾ.15: ಹಿಜಾಬ್ ತೀರ್ಪು ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಶಾಲಾ- ಕಾಲೆಜುಗಳಿಗೆ ರಜೆ ನೀಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದರೂ ಸಹ ಸಹಾಯಕ ಪ್ರಾಧ್ಯಪಕರ ನೇಮಕಾತಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟಪಡಿಸಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಉಪನ್ಯಾಸಕರ ನೇಮಕಕ್ಕೆ ನಡೆಯುತ್ತಿರುವ ಲಿಖಿತ ಪರೀಕ್ಷೆ ನಿಗದಿಯಂತೆ ಮಂಗಳವಾರವೂ (ಮಾ.15) ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯ ಅವರು ತಿಳಿಸಿದ್ದಾರೆ.
ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಹೈಕೋರ್ಟ್ ಮಂಗಳವಾರ ತೀರ್ಪು ನೀಡುತ್ತಿರುವ ಕಾರಣ ಕೆಲವು ಜಿಲ್ಲೆಗಳಲ್ಲಿ ನಿಷೇಧಾಜ್ಣೆ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿಲ್ಲ. ನಿಗದಿಯಂತೆ ಪರೀಕ್ಷೆ ನಡೆಯಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದೇ 16ಕ್ಕೆ ಪರೀಕ್ಷೆಗಳು ಮುಗಿಯಲಿವೆ ಎಂದು ಅವರು ತಿಳಿಸಿದ್ದಾರೆ.












Click it and Unblock the Notifications