ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾ.12ರಿಂದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ: ಜಿಲ್ಲಾಧಿಕಾರಿ, ಎಸ್ಪಿಗಳ ಜತೆ ಸಚಿವರ ವಿಡಿಯೋ ಸಂವಾದ

|
Google Oneindia Kannada News

ಬೆಂಗಳೂರು, ಮಾ.09: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಇದೇ 12ರಿಂದ 16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಪರೀಕ್ಷಾ ಕೇಂದ್ರಗಳಿರುವ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠರು, ಕಮಿಷನರ್ ಮತ್ತಿತರ ಅಧಿಕಾರಿಗಳೊಂದಿಗೆ ಬುಧವಾರ ವಿಡಿಯೋ ಸಂವಾದ ನಡೆಸಿದರು.

ಸಹಾಯಕ ಪ್ರಾಧ್ಯಾಪಕರ ನೇಮಕ: ಅಕ್ರಮಕ್ಕೆ ಕಡಿವಾಣ ಹಾಕಲು ಸಹಾಯವಾಣಿ ಆರಂಭಸಹಾಯಕ ಪ್ರಾಧ್ಯಾಪಕರ ನೇಮಕ: ಅಕ್ರಮಕ್ಕೆ ಕಡಿವಾಣ ಹಾಕಲು ಸಹಾಯವಾಣಿ ಆರಂಭ

ಈ ಸಭೆಯಲ್ಲಿ ಅವರು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಕಲು ಹೊಡೆಯುವುದು ಸೇರಿದಂತೆ ಯಾವುದೇ ಅಕ್ರಮಕ್ಕೆ ಕಿಂಚಿತ್ತೂ ಅವಕಾಶ ಮಾಡಿಕೊಡಬಾರದು. ಏನಾದರೂ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಮತ್ತು ಪಾರದರ್ಶಕವಾಗಿ ನಡೆಸಬೇಕು ಎಂದು ಸಚಿವರು ಸೂಚನೆ ನೀಡಿದರು.

Assistant Professor Examination from 12th: Minister Ashwatha Narayana video interaction with DC, SP

ವಿಚ್ಛಿದ್ರಕಾರಿ ಶಕ್ತಿಗಳು ಪರೀಕ್ಷಾ ವ್ಯವಸ್ಥೆಯನ್ನು ಹಾಳುಗೆಡವಲು ಅಥವಾ ಈ ನೇಮಕಾತಿ ಪ್ರಕ್ರಿಯೆಗೆ ಕಳಂಕ ತರಲು ಆಸ್ಪದ ಕೊಡಬಾರದು. ಹಾಗೇನಾದರೂ ಆದರೆ, ಪರೀಕ್ಷಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠರನ್ನೇ ಹೊಣೆಗಾರರಾಗಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

33 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆಗಳು ಬೆಂಗಳೂರು ನಗರ, ಮೈಸೂರು, ಮಂಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಮತ್ತು ಕಲಬುರಗಿಗಳಲ್ಲಿ ನಡೆಯಲಿವೆ. ಇದಕ್ಕಾಗಿ 1,409 ಕೊಠಡಿ ಮೇಲ್ವಿಚಾರಕರು, 82 ವೀಕ್ಷಕರು, 82 ಕಸ್ಟೋಡಿಯನ್ಸ್ ಮತ್ತು 164 ಮಂದಿಯ ವಿಶೇಷ ಜಾಗೃತ ದಳವನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು.

Assistant Professor Examination from 12th: Minister Ashwatha Narayana video interaction with DC, SP

12 ಮತ್ತು 13ರಂದು 82 ಪರೀಕ್ಷಾ ಕೇಂದ್ರಗಳಲ್ಲಿ, 14ರಂದು 22, 15ರಂದು 24 ಮತ್ತು 16ರಂದು 8 ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಇದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಅಭ್ಯರ್ಥಿಗಳು ಸೂಚಿತ ವಸ್ತ್ರಸಂಹಿತೆಯನ್ನು ಪಾಲಿಸಬೇಕು. ಜತೆಗೆ, ಅಕ್ರಮಗಳ ತಡೆಗೆ ಸಹಾಯವಾಣಿಯನ್ನೂ (ಮೊಬೈಲ್ 99015-81708) ರಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ‌ ನಿಷೇಧಾಜ್ಞೆ ಜಾರಿಗೊಳಿಸಲು ಸೂಚಿಸಲಾಗಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ವಿಡಿಯೋ ಸಂವಾದದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು.

Recommended Video

ಬಿಜೆಪಿ ಮತ್ತೆ ಕುದುರೆ ವ್ಯಾಪಾರ ಶುರು ಮಾಡಿದ್ರಾ ! | Oneindia Kannada

English summary
Examination for the post of Assistant Professor from 12th: Minister Dr.C.N.Ashwatha Narayana video interaction with District Collector, SP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X