• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: ಒಎಂಆರ್ ಶೀಟ್ ತಿದ್ದುಪಡಿ ಶಂಕೆ

|
Google Oneindia Kannada News

ಬೆಂಗಳೂರು, ಮೇ. 20: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿಯಿದ್ದ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಸಹ ಉತ್ತರ ಪತ್ರಿಕೆ ಒಎಂಆರ್ ಶೀಟ್ ತಿದ್ದುಪಡಿ ಮಾಡಿ ಅಕ್ರಮ ಎಸಗಿರುವ ಸಂಗತಿ ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಇಲಾಖೆಯ ಸ್ಟ್ರಾಂಗ್ ರೂಮ್ ನಲ್ಲಿ ಒಎಂಆರ್ ಶೀಟ್ ತಿದ್ದುಪಡಿ ಮಾಡಿದ್ದ ಸಂಗತಿ ಬೆಳಕಿಗೆ ಬಂದಿತ್ತು. ಇದೀಗ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಸಿಬಿ ಪೊಲೀಸರ ತನಿಖೆಗೆ ಒಳಪಡಿಸಲಾಗಿತ್ತು. ಇದೀಗ ತನಿಖೆ ಆರಂಭಿಸಿರುವ ಸಿಸಿಬಿ ಪೊಲೀಸರು, ಸಂಶಾಯಸ್ಪದ ವಿದ್ಯಾರ್ಥಿಗಳ ಒಎಂಆರ್ ಶೀಟ್ ಪ್ರತಿಗಳನ್ನು ನೀಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಿಸಿಬಿ ಪೊಲೀಸರು ಪತ್ರ ಬರೆದಿದ್ದಾರೆ.

 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಬರೆದಿದ್ದ ಇಬ್ಬರು ಅಭ್ಯರ್ಥಿಗಳ ಒಎಂಆರ್ ಪ್ರತಿ ಹಾಗೂ ಕಾರ್ಬನ್ ಪ್ರತಿಯಲ್ಲಿ ವ್ಯತ್ಯಾಸ ಇರುವುದು ಕಂಡು ಬಂದಿದೆ. ಮೊದಲ ಹಂತದಲ್ಲಿ ಇಬ್ಬರು ಸಂಶಯಾಸ್ಪದ ಅಭ್ಯರ್ಥಿಗಳ ಒಎಂಆರ್ ಶೀಟ್ ನೀಡುವಂತೆ ಸಿಸಿಬಿ ಅಧಿಕಾರಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ

ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ

ಸಂಶಯಾಸ್ಪದ ಅಭ್ಯರ್ಥಿಗಳ ಕಾರ್ಬನ್ ಪ್ರತಿ ಈಗಾಗಲೇ ಸಂಗ್ರಹಿಸಲಾಗಿದೆ. ಕೆಇಎ ಕಡೆಯಿಂದ ಅಸಲಿ ಒಎಂಆರ್ ಪ್ರತಿಗಳನ್ನು ಪಡೆದ ಬಳಿಕ ಪರಸ್ಪರ ಹೋಲಿಕೆ ಮಾಡಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ವರದಿ ಆಧರಿಸಿ ಮುಂದಿನ ದಿನಗಳಲ್ಲಿ ಸಂಶಯಾಸ್ಪದ ಅಭ್ಯರ್ಥಿಗಳನ್ನು ವಿಚಾರಣೆಗೆ ಒಳಪಡಿಸಿ ಕಾನೂನು ಕ್ರಮ ಜರುಗಿಸಲು ಸಿಸಿಬಿ ಪೊಲೀಸರು ನಿರ್ಧರಿಸಿದ್ದಾರೆ.

 ಪಿಎಸ್ಐ ಅಕ್ರಮದಲ್ಲಿ ಒಎಂಆರ್ ತಿದ್ದುಪಡಿ:

ಪಿಎಸ್ಐ ಅಕ್ರಮದಲ್ಲಿ ಒಎಂಆರ್ ತಿದ್ದುಪಡಿ:

545 ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಒಎಂಆರ್ ಶೀಟ್ ತಿದ್ದುಪಡಿ ಮಾಡಿರುವ ಸಂಗತಿಯನ್ನು ಸಿಐಡಿ ಪೊಲೀಸರು ಪತ್ತೆ ಮಾಡಿದ್ದರು. ಪೊಲೀಸ್ ಇಲಾಖೆಯ ಸ್ಟ್ರಾಂಗ್ ರೂಮ್‌ನಲ್ಲಿಯೇ ಅಕ್ರಮ ನಡೆದಿರುವುದಕ್ಕೆ ಸಿಐಡಿ ಅಧಿಕಾರಿಗಳು ಸಾಕ್ಷಿಗಳನ್ನು ಸಂಗ್ರಹಿಸಿದ್ದರು. ಅದೇ ಮಾದರಿಯಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಲ್ಲಿ ಇದೇ ರೀತಿ ಅಕ್ರಮ ನಡೆದಿರುವ ಅನುಮಾನ ವ್ಯಕ್ತವಾಗಿದೆ.

 ಖಾಲಿ ಬಿಟ್ಟಿರುವ ಪ್ರಶ್ನೆಗಳಿಗೆ ಸರಿಯಾದ ಉತ್ತರ

ಖಾಲಿ ಬಿಟ್ಟಿರುವ ಪ್ರಶ್ನೆಗಳಿಗೆ ಸರಿಯಾದ ಉತ್ತರ

ಪರೀಕ್ಷೆ ಕೊಠಡಿಗಳಲ್ಲಿ ಗೊತ್ತಿರುವ ಪ್ರಶ್ನೆಗಳಿಗೆ ಮಾತ್ರ ಉತ್ತರ ಬರೆದು ಉಳಿದ ಪ್ರಶ್ನೆಗಳನ್ನು ಖಾಲಿ ಬಿಡುವುದು. ಆ ಬಳಿಕ ಡೀಲ್ ಕುದುರಿಸಿ ಖಾಲಿ ಬಿಟ್ಟಿರುವ ಪ್ರಶ್ನೆಗಳಿಗೆ ಸರಿಯಾದ ಉತ್ತರ ತುಂಬಿ ಅಕ್ರಮ ಎಸಗಿದ್ದಾರೆ. ಈಗಾಗಲೇ ಬಂಧಿತ ಆರೋಪಿಗಳಿಬ್ಬರು ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮಾಹಿತಿ ನೀಡಿದ್ದಾರೆ. ಒಎಂಆರ್ ಶೀಟ್ ತಿದ್ದುಪಡಿ ಅಕ್ರಮ ನಡೆದಿರುವ ಬಗ್ಗೆ ಸಂಶಯವಿದ್ದು, ದಾಖಲೆಗಳನ್ನು ಕಲೆ ಹಾಕುವ ಕಾರ್ಯದಲ್ಲಿ ನಿರತವಾಗಿದೆ.

   Kohli ಈ ಬಾರಿ ಮೊದಲ ಬಾರಿ ಪಂದ್ಯ ಶ್ರೇಷ್ಠರಾಗಿ ಹೇಳಿದ್ದೇನು? | Oneindia Kannada
   English summary
   Assistant professor Recruitment scam: The CCB police start investigation and collecting the OMR sheets of suspected candidates know more.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X