2025ಕ್ಕೆ ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಜೊತೆ ಕಾಂಗ್ರೆಸ್ ಸರ್ಕಾರ!: ಏನಿದು ಖ್ಯಾತ ಜ್ಯೋತಿಷಿ ಭವಿಷ್ಯ!
ಬೆಂಗಳೂರು, ಜುಲೈ 10: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸುಗಮವಾಗಿ ಸರ್ಕಾರ ನಡೆಯುತ್ತಿದ್ದು, ಸರ್ಕಾರದಲ್ಲಿ ಪದೇ ಪದೇ ಮುಖ್ಯಮಂತ್ರಿ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತ ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಸೂತ್ರ ಇನ್ನೂ ಜೀವಂತವಾಗಿದೆ.
ಪದೇ ಪದೇ ಮುಖ್ಯಮಂತ್ರಿ ವಿಚಾರವಾಗಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಆಪ್ತ ಶಾಸಕರ ನಡುವೆ ವಾಕ್ಸಮರಕ್ಕೆ ಕಾರಣವಾಗಿದ್ದು, ಸದ್ಯ ಈ ಎಲ್ಲಾ ವಿಚಾರಗಳಿಗೂ ಹೈಕಮಾಂಡ್ ಬ್ರೇಕ್ ಹಾಕಿದೆ. ಆದರೆ, ಇದೀಗ ಖ್ಯಾತ ಜ್ಯೋತಿಷ್ಯಗಳ ಭವಿಷ್ಯ ರಾಜ್ಯ ರಾಜಕಾರಣದಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಹೌದು, 2023 ರ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತವನ್ನ ಪಡೆದಿರುವ ಕಾಂಗ್ರೆಸ್ ರಾಜ್ಯದಲ್ಲಿ ಸರ್ಕಾರ ರಚಿಸಿದೆ. ಆದರೆ, 2025 ರಲ್ಲಿ ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಲಿದೆ ಎಂದು ಖ್ಯಾತ ಜ್ಯೋತಿಷಿಯೊಬ್ಬರು ಭವಿಷ್ಯ ವಾಣಿ ನುಡಿದಿದ್ದಾರೆ.
ರಾಜ್ಯದಲ್ಲಿ ಸರ್ಕಾರ ರಚಿಸಿರು ಕಾಂಗ್ರೆಸ್ ಎರಡು ಬಳವಾಗಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಖ್ಯಾತ ಜ್ಯೋತಿಷಿ ಅನಿರುದ್ಧ ಕುಮಾರ್ ಮಿಶ್ರಾ ಹೇಳಿದ್ದಾರೆ. ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಸಂಭವಿಸಿದ ಕ್ಷಿಪ್ರ ಬೆಳವಣಿಗೆಯಂತೆ ಕರ್ನಾಟಕದಲ್ಲಿಯೂ ಎರಡು ವರ್ಷದ ಬಳಿಕ ರಾಜಕೀಯ ಬದಲಾವಣೆಗಳಿಗೆ ಸಾಕ್ಷಿಯಾಗಲಿದೆ ಎಂದು ಟ್ವೀಟರ್ ಮೂಲಕ ತಿಳಿಸಿದ್ದಾರೆ.
In Karnataka, Congress MLAs will be divided into two factions in 2025 and one of those factions will join hands with BJP and JDS to replace the existing state govt. headed by Congress. pic.twitter.com/5HH41bnZ4l
— Anirudh Kumar Mishra (Astrologer) (@Anirudh_Astro) July 8, 2023
ಈ ಬಗ್ಗೆ ಟ್ವೀಟ್ ಮಾಡಿರುವ ಖ್ಯಾತ ಜ್ಯೋತಿಷಿ ಅನಿರುದ್ಧ ಕುಮಾರ್ ಮಿಶ್ರಾ , 2025ರಲ್ಲಿ ಕರ್ನಾಟಕದ ಕಾಂಗ್ರೆಸ್ ಶಾಸಕರಲ್ಲಿ ಎರಡು ಬಣಗಳು ಸೃಷ್ಟಿಯಾಗಲಿವೆ. ಅದರಲ್ಲಿ ಒಂದು ಬಣ ಬಿಜೆಪಿ ಹಾಗೂ ಜೆಡಿಎಸ್ ಜೊತೆ ಸೇರಿ ಸರ್ಕಾರ ರಚಿಸಲಿದ್ದು, ಈಗಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದು, ಈ ಭವಿಷ್ಯ ಸದ್ಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.
ಖ್ಯಾತ ಜ್ಯೋತಿಷಿ ಅನಿರುದ್ಧ ಕುಮಾರ್ ಮಿಶ್ರಾ ಅವರು ನುಡಿದಿರುವ ಬಹುತೇಕ ಭವಿಷ್ಯಗಳು ನಿಜವಾಗಿದ್ದು, ಈ ಭವಿಷ್ಯ ಕೂಡ ನಿಜವಾಗುತ್ತಾ ಎಂಬ ಕುತೂಹಲ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದು, ಸದ್ಯ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಮಾತುಕತೆ ನಡೆಯುತ್ತಿದೆ. ಇತ್ತ ಕಾಂಗ್ರೆಸ್ ಸರ್ಕಾರ ರಚನೆಯಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಡುವೆ ಬಣ ರಾಜಕಾರಣ ಮಾತ್ರ ಕೊನೆಯಾಗಿಲ್ಲ.

ಈ ಇಬ್ಬರು ನಾಯಕರ ಆಪ್ತ ಶಾಸಕರಿಂದ ಪದೇ ಪದೇ ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಸೂತ್ರ ಚರ್ಚೆಯಾಗುತ್ತಿದ್ದು, ಅಧಿಕಾರ ಹಂಚಿಕೆ ಸೂತ್ರದಂತೆ ಎರಡೂವರೆ ವರ್ಷಗಳ ಬಳಿಕ ಅಧಿಕಾರ ಹಸ್ತಾಂತರ ಆಗದಿದ್ದರೆ ಅನಿರುದ್ಧ ಕುಮಾರ್ ಮಿಶ್ರಾ ಅವರ ಭವಿಷ್ಯದಂತೆ ಕರ್ನಾಟಕದಲ್ಲಿ ರಾಜಕೀಯ ಬೆಳವಣಿಗೆಗಳು ಸಂಭವಿಸಲಿದೆ ಎನ್ನಲಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಐತಿಹಾಸಿಕ ಗೆಲುವು ಸಾಧಿಸಿದ್ದ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆದಿತ್ತು. ಈ ಇಬ್ಬರು ನಾಯಕರ ಜೊತೆಗೆ ಹೈಕಮಾಂಡ್ ನಾಯಕರು ಚರ್ಚೆ ನಡೆಸಿದ್ದು, ಅಧಿಕಾರ ಹಂಚಿಕೆ ಸೂತ್ರ ಪ್ರಸ್ತಾಪಿಸಿತ್ತು. ಅಧಿಕಾರ ಹಂಚಿಕೆಯ ಸೂತ್ರದಂತೆ ಮೊದಲ ಎರಡೂವರೆ ವರ್ಷ ಸಿದ್ದರಾಮಯ್ಯ ಸಿಎಂ ಆಗಿ, ನಂತರದ ಎರಡೂವರೆ ವರ್ಷ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಲಾಗಿದೆ. ಆದರೆ, ಸಿದ್ದರಾಮಯ್ಯ ಅವರೇ ವರ್ಷಗಳ ಕಾಲ ಮುಖ್ಯಮತ್ರಿಯಾಗಲಿದ್ದಾರೆ ಎಂದು ಹೇಳಿದ್ದಾರೆ.
ಅಧಿಕಾರ ಹಂಚಿಕೆಯ ಸೂತ್ರದಂತೆ ಡಿ ಕೆ ಶಿವಕುಮಾರ್ ಗೆ ಸ್ಥಾನ ಬಿಟ್ಟು ಕೊಡದಿದ್ದರೆ ಡಿಕೆ ಶಿವಕುಮಾರ್ ಹಾಗೂ ಅವರ ಬೆಂಬಲಿಗರನ್ನು ಕೆರಳಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡದಿದ್ದರೆ ಡಿಕೆ ಶಿವಕುಮಾರ್ ಅವರ ಮುಂದಿನ ನಡೆ ಏನು ಎಂಬುದು ಸಾಕಷ್ಟು ಕುತೂಹಲ ಕೆರಳಿಸಿದೆ. ಸಿಎಂ ಸ್ಥಾನ ಬಿಟ್ಟು ಕೊಡದಿದ್ದರೇ ಖ್ಯಾತ ಜ್ಯೋತಿಷಿ ಅನಿರುದ್ಧ ಕುಮಾರ್ ಮಿಶ್ರಾ ಅವರು ನುಡಿದಂತೆ ಕರ್ನಾಟಕದಲ್ಲಿ ಕಾಂಗ್ರೆಸ್ ನ ಒಂದು ಬಳ ಬಿಜೆಪಿ ಹಾಗೂ ಜೆಡಿಎಸ್ ಗೆ ಸರ್ಕಾರ ರಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.












Click it and Unblock the Notifications