'ಸಿದ್ದರಾಮಯ್ಯ ರಾಜೀನಾಮೆ ಶೀಘ್ರ, ಆ ಮಹಿಳೆಗೆ ಸಿಎಂ ಪಟ್ಟ': ಖ್ಯಾತ ಜ್ಯೋತಿಷಿಯಿಂದ ಸ್ಫೋಟಕ ಭವಿಷ್ಯ
ಬೆಂಗಳೂರು, ಫೆಬ್ರವರಿ 20: 2023 ರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗು ಜೋರಾಗಿ ಕೇಳಿ ಬರುತ್ತಿದೆ. ಸಿಎಂ ಬದಲಾವಣೆ ಮಾತ್ರವಲ್ಲದೇ ಕೆಪಿಸಿಸಿ ಬದಲಾವಣೆಗೂ ಕೂಗು ಕೇಳಿ ಬರುತ್ತಿದೆ. ಈ ನಡುವೆ 50-50 ಅಧಿಕಾರ ಹಂಚಿಕೆ ಸೂತ್ರದಂತೆ ಸಿದ್ದರಾಮಯ್ಯ ರಾಜೀನಾಮೆ ಚರ್ಚೆ ನಡೆಯುತ್ತಿದ್ದು, ಕೆಲ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರೇ 5 ವರ್ಷ ಅಧಿಕಾರದಲ್ಲಿರುತ್ತಾರೆ ಎಂದು ಹೇಳಿದ್ರೆ, ಇನ್ನು ಕೆಲ ಶಾಸಕರು ಸಿದ್ದರಾಮಯ್ಯ ರಾಜೀನಾಮೆ ನೀಡಿ, ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಪರೋಕ್ಷವಾಗಿ ಆಗ್ರಹಿಸುತ್ತಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7 ರಂದು ನಡೆಯುವ ಬಜೆಟ್ ಕುರಿತು ಇಲಾಖೆವಾರು ಸಭೆಗಳನ್ನ ನಡೆಸುತ್ತಿದ್ರೆ, ಇದರ ನಡುವೆಯೇ ಲೋಕಾಯುಕ್ತ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುಡಾ ಹಗರಣದಲ್ಲಿ ಕ್ಲೀನ್ ಚಿಟ್ ನೀಡಿದ್ದು, ಸದ್ಯಕ್ಕೆ ಸಿದ್ದರಾಮಯ್ಯ ನಿರಾಳರಾಗಿದ್ದಾರೆ. ಆದರೆ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಕುರಿತಂತೆ ಖ್ಯಾತ ಜ್ಯೋತಿಷಿಯೊಬ್ಬರು ಸ್ಫೋಟಕ ಭವಿಷ್ಯ ನುಡಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರದಲ್ಲೇ ರಾಜೀನಾಮೆ ನೀಡಲಿದ್ದಾರೆ ಎಂದು ಖ್ಯಾತ ಜ್ಯೋತಿಷಿಯೊಬ್ಬರು ಸ್ಫೋಟಕ ಭವಿಷ್ಯ ನೀಡಿದ್ದು, ಈ ಭವಿಷ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತ್ರವಲ್ಲದೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶಾಕ್ ಎದುರಾಗಲಿದೆ.
ಖ್ಯಾತ ಜ್ಯೋತಿಷಿಯೊಬ್ಬರು ಶೀಘ್ರವೇ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಾರೆ. ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಿದ್ದಂತೆ ಮತ್ತೊಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂದು ಈ ಜ್ಯೋತಿಷಿ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಸ್ಥಾನದ ರೇಸ್ ನಲ್ಲಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆಗಲಿ ಅಥವಾ ದಲಿತ ಕಾಂಗ್ರೆಸ್ ನಾಯಕರಾದ ಸತೀಶ್ ಜಾರಕಿಹೊಳಿ, ಪರಮೇಶ್ವರ್ ಆಗಲಿ ಅಲ್ಲ ಎಂದು ಹೇಳಲಾಗಿದೆ.
ರಾಜ್ಯ ರಾಜಕೀಯದ ಕುರಿತು ಮಾತ್ರವಲ್ಲದೇ ರಾಷ್ಟ್ರ ರಾಜಕೀಯ ಕುರಿತು ಭವಿಷ್ಯ ನುಡಿಯುವ ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಎಂಬುವರು ಈ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಶೀಘ್ರವೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕೆ ಇಳಿಯುತ್ತಾರೆ ಅಂತ ಪ್ರಶಾಂತ್ ಕಿಣಿ ಹೇಳಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಶಾಂತ್ ಕಿಣಿ ಟ್ವೀಟ್ ಮಾಡಿ, ಈ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ.
ಇನ್ನು ಸಿದ್ದರಾಮಯ್ಯ ರಾಜೀನಾಮೆ ನಂತರ ಮುಂದಿನ ಕರ್ನಾಟಕದ ಸಿಎಂ ಯಾರಾಗುತ್ತಾರೆ ಎಂಬ ಬಗ್ಗೆಯೂ ಪ್ರಶಾಂತ್ ಕಿಣಿ ಭವಿಷ್ಯ ನುಡಿದಿದ್ದಾರೆ. ಜ್ಯೋತಿಷಿ ಪ್ರಶಾಂತ್ ಕಿಣಿ ಹೇಳುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗುವ ಅದೃಷ್ಟ ಇದೆಯಂತೆ. ಹಾಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆಯಾಗಿರೋ ಲಕ್ಷ್ಮಿ ಹೆಬ್ಬಾಳ್ಕರ್, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಿದ್ದಂತೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರಂತೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.












Click it and Unblock the Notifications