ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಆತ್ಮ ನಿರ್ಭರ ಗೋಶಾಲೆ ಅಭಿವೃದ್ಧಿ; ಸಚಿವರ ಘೋಷಣೆ

|
Google Oneindia Kannada News

ಬೆಂಗಳೂರು, ಜೂನ್ 26; "ಸರ್ಕಾರಿ ಗೋಶಾಲೆಗಳನ್ನು ಸ್ವಾವಲಂಬಿಯನ್ನಾಗಿಸಿ, ಆತ್ಮ ನಿರ್ಭರ ಗೋಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು" ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ. ಚೌವ್ಹಾಣ್ ಹೇಳಿದರು.

ಭಾನುವಾರ ನೆಲಮಂಗಲ ತಾಲ್ಲೂಕಿನ ಕೋಡಿಗೆಹಳ್ಳಿಯಲ್ಲಿ ಸರ್ಕಾರಿ ಗೋಶಾಲೆಗೆ ಶಂಕುಸ್ಥಾಪನೆ ನೆರವೇರಿಸಿ ಸಚಿವರು ಮಾತನಾಡಿದರು. "ಗೋವುಗಳು ಕಸಾಯಿಖಾನೆಗಳನ್ನು ಹೋಗುವುದನ್ನು ತಡೆಗಟ್ಟಲು ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ" ಎಂದರು.

ಗೋ ಉತ್ಪನ್ನಗಳ ಮಾರುಕಟ್ಟೆಗೆ ಗೋ ಮಾತಾ ಸಹಕಾರ ಸಂಘ ಸ್ಥಾಪಿಸಲು ಸಿಎಂ ಸೂಚನೆಗೋ ಉತ್ಪನ್ನಗಳ ಮಾರುಕಟ್ಟೆಗೆ ಗೋ ಮಾತಾ ಸಹಕಾರ ಸಂಘ ಸ್ಥಾಪಿಸಲು ಸಿಎಂ ಸೂಚನೆ

"ಮುಂದಿನ ದಿನಗಳಲ್ಲಿ ಸರ್ಕಾರಿ ಗೋಶಾಲೆಗಳಲ್ಲಿ ಗೋವುಗಳಿಂದ ಉತ್ಪತ್ತಿಯಾಗುವ ಸಗಣಿ, ಗಂಜಲದಿಂದ ಗವ್ಯ ಉಪ ಉತ್ಪನ್ನಗಳನ್ನು ತಯಾರಿಕೆ ಮಾಡಲು ಯೋಜನೆ ರೂಪಿಸಲಾಗಿದೆ. ಈ ಕುರಿತು ಅಧ್ಯಯನಕ್ಕಾಗಿ ವಿವಿಧ ಗೋಶಾಲೆಗಳಿಗೆ ಭೇಟಿ ನೀಡಲಾಗುತ್ತಿದೆ" ಎಂದು ಸಚಿವ ಪ್ರಭು ಚೌವ್ಹಾಣ್ ತಿಳಿಸಿದರು.

 ಉ.ಪ್ರ.ದಲ್ಲಿ ಬೀಡಾಡಿ ದನಗಳ ಸಮಸ್ಯೆಗೆ ಇತಿಶ್ರೀ ಹಾಡಲು ಗೋ ಧಾಮ ಸ್ಥಾಪನೆ ಉ.ಪ್ರ.ದಲ್ಲಿ ಬೀಡಾಡಿ ದನಗಳ ಸಮಸ್ಯೆಗೆ ಇತಿಶ್ರೀ ಹಾಡಲು ಗೋ ಧಾಮ ಸ್ಥಾಪನೆ

"ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿ ಪೂಜಿಸಲ್ಪಡುವ ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿರುವುದನ್ನು ತಡೆಗಟ್ಟಿ ಅವುಗಳ ಪಾಲನೆ ಹಾಗೂ ಆರೈಕೆ ಮಾಡುವ ಉದ್ದೇಶದಿಂದ ಸರ್ಕಾರ ಗೋಶಾಲೆಗಳನ್ನು ತೆರೆದಿದೆ. ಬಿ. ಎಸ್. ಯಡಿಯೂರಪ್ಪ ಅವಧಿಯಲ್ಲಿ ಜಿಲ್ಲೆಗೊಂದರಂತೆ 30 ಗೋಶಾಲೆಗಳನ್ನು ಮಂಜೂರು ಮಾಡಿದ್ದರು. ಇದರ ಹೆಚ್ಚಿನ ಅಗತ್ಯತೆಯನ್ನು ಮನಗಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೋಶಾಲೆಗಳ ಸಂಖ್ಯೆಯನ್ನು 100ಕ್ಕೆ ಏರಿಕೆ ಮಾಡಿದರು" ಎಂದರು.

ಯುಪಿ: ಬಿಡಾಡಿ ದನ ದತ್ತು ಪಡೆದರೆ 900-1000 ರೂ. ನೆರವು ಯುಪಿ: ಬಿಡಾಡಿ ದನ ದತ್ತು ಪಡೆದರೆ 900-1000 ರೂ. ನೆರವು

ಜಾನುವಾರು ರಕ್ಷಣೆಯೇ ನಮ್ಮ ಗುರಿ

ಜಾನುವಾರು ರಕ್ಷಣೆಯೇ ನಮ್ಮ ಗುರಿ

"ಗೋಹತ್ಯೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತಂದು, ಗೋವುಗಳನ್ನು ಸಂರಕ್ಷಣೆ ಮಾಡಲು ಜಿಲ್ಲೆಗೊಂದು ಗೋಶಾಲೆ ಸ್ಥಾಪನೆಗೆ ಕ್ರಮ ವಹಿಸಲಾಯಿತು" ಎಂದು ಸಚಿವ ಪ್ರಭು ಚೌವ್ಹಾಣ್ ವಿವರಿಸಿದರು.

"ಕೃಷಿ ಪ್ರಧಾನ ದೇಶವಾದ ಭಾರತದಲ್ಲಿ ಜಾನುವಾರು ಸಂಕುಲ ರಕ್ಷಣೆಯೇ ನಮ್ಮ ಸರ್ಕಾರದ ಗುರಿಯಾಗಿದೆ. ಪಶುವೈದ್ಯಕೀಯ ವೈದ್ಯರು, ಸಿಬ್ಬಂದಿಗಳು ಸದಾ ಜಾನುವಾರುಗಳ ಸೇವೆಗೆ ಸಿದ್ಧರಾಗಿರಬೇಕು. ರೈತರಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು" ಎಂದು ಸಚಿವರು ಎಚ್ಚರಿಕೆ ನೀಡಿದರು.

100 ಗೋಶಾಲೆಗಳ ನಿರ್ಮಾಣ

100 ಗೋಶಾಲೆಗಳ ನಿರ್ಮಾಣ

"ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. ಈಗಾಗಲೇ ಹಾವೇರಿ ಜಿಲ್ಲೆಯಲ್ಲಿ ಮೆಗಾ ಡೈರಿ ಕಾಮಗಾರಿ ಪ್ರಗತಿಯಲ್ಲಿದೆ" ಎಂದು ಸಚಿವರು ವಿವರಣೆ ನೀಡಿದರು.

"ಗೋಶಾಲೆಗಳನ್ನು ಸ್ವಾವಲಂಬಿಗಳಾಗಿಸಲು ಗೋವುಗಳಿಂದ ಉತ್ಪತ್ತಿಯಾಗುವ ಸಗಣಿ, ಗಂಜಲದಿಂದ ಗವ್ಯ ಉತ್ಪನ್ನಗಳನ್ನು ತಯಾರಿಕೆ ಮಾಡುವ ಉದ್ದೇಶವಿದೆ. ರಾಜ್ಯದಲ್ಲಿ 100 ಗೋಶಾಲೆಗಳನ್ನು ನಿರ್ಮಾಣ ಮಾಡಿ ಗೋ ಸಂಕುಲವನ್ನು ರಕ್ಷಣೆ ಮಾಡಲಾಗುತ್ತದೆ" ಎಂದು ಸಚಿವರು ತಿಳಿಸಿದರು.

ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ

ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ

"12 ವರ್ಷಗಳಿಂದ ಪಶು ಸಂಗೋಪನಾ ಇಲಾಖೆಯಲ್ಲಿ ಬಾಕಿ‌ ಉಳಿದಿದ್ದ ನೇಮಕಾತಿಗೆ ಚಾಲನೆ ಹಾಗೂ ಪದೋನ್ನತಿ ನೀಡಿ ಇಲಾಖೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. 400 ಪಶು ವೈದ್ಯರ ನೇಮಕ, 250 ಪಶು ವೈದ್ಯಕೀಯ ಸಿಬ್ಬಂದಿಗಳ ನೇಮಕ ಪಶು ಸಂಗೋಪನೆ ಇಲಾಖೆಯ ಇತಿಹಾಸದಲ್ಲೇ ಇದೇ ಮೊದಲು" ಎಂದು ಸಚಿವ ಪ್ರಭು ಚೌವ್ಹಾಣ್ ಹೇಳಿದರು.

"ಜಾನುವಾರುಗಳ ಆರೈಕೆಗೆ ಬೆನ್ನೆಲುಬಾಗಿ ನಿಲ್ಲುವ ಸಲುವಾಗಿ ಪಶು ಸಂಜೀವಿನಿ ಆಂಬ್ಯುಲೆನ್ಸ್, ಸಂಚಾರಿ ಚಿಕಿತ್ಸಾಲಯಗಳು, ಪಶು ಚಿಕಿತ್ಸಾಲಯಗಳು ಕಾರ್ಯನಿರ್ವಹಿಸುತ್ತಿವೆ. ಇಂತಹ ಯೋಜನೆ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು" ಎಂದು ಸಚಿವ ಪ್ರಭು ಚವ್ಹಾಣ್ ಕರೆ ನೀಡಿದರು.

ಗೋ ಶಾಲೆಗೆ ಸಚಿವರ ಭೇಟಿ

ಗೋ ಶಾಲೆಗೆ ಸಚಿವರ ಭೇಟಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿರುವ ಮಾಧವ ಸೃಷ್ಠಿ ರಾಷ್ಟ್ರೋತ್ಥಾನ ಗೋಶಾಲೆಗೆ ಸಚಿವ ಪ್ರಭು ಚೌವ್ಹಾಣ್ ಭೇಟಿ ನೀಡಿ, ಗೋಮಾತೆಗೆ ಪೂಜೆ ಸಲ್ಲಿಸಿದರು.

ಗೋಶಾಲೆಯನ್ನು ಪರಿಶೀಲಿಸಿದ ಸಚಿವರು, ಗೋಶಾಲೆ ನಿರ್ವಹಣೆ, ಮೇವು ಉತ್ಪಾದನೆ ಕುರಿತು ಮಾಹಿತಿ ಪಡೆದು, ಮಹಾರಾಷ್ಟ್ರದ ಕೇಶವಸೃಷ್ಠಿಯಂತೆ ಇಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಗೋಶಾಲೆಯ ವ್ಯಾಪ್ತಿಯಲ್ಲಿ 14 ಸಾವಿರಕ್ಕೂ ಹೆಚ್ಚು ವಿವಿಧ ರೀತಿಯ ಸಸ್ಯಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.

Recommended Video

ದುರ್ಗಾ ದೇವಿಯ ಹರಕೆಯ ಕೋಣ ಕೊಡ್ತಿರೋ ಕಾಟದಿಂದ ಇವ್ರಿಬ್ಬರಿಗೆ ಯಾವಾಗ ಮುಕ್ತಿ.. | *Viral | OneIndia Kannada

English summary
Government gaushala will be developed as Atma Nirbhar gaushala said Prabhu Chauhan Karnataka minister for animal husbandry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X