• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸರ್ಕಾರಿ ವ್ಯವಸ್ಥೆಯಡಿ ಲಸಿಕೆ ವಿತರಣೆಗೆ ಸಿದ್ಧ: ಡಾ ಸುಧಾಕರ್

|

ಬೆಂಗಳೂರು, ಜನವರಿ 4: ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಸವಾಲೊಡ್ಡಿ ನಮ್ಮ ದೇಶದಲ್ಲೇ ಶೀಘ್ರವಾಗಿ ಕೊರೊನಾ ಲಸಿಕೆ ಆವಿಷ್ಕಾರ ಮಾಡಿದ್ದು, ಇದು ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಲಸಿಕೆ ಆವಿಷ್ಕಾರಕ್ಕಾಗಿ ಶ್ರಮವಹಿಸಿದ ವಿಜ್ಞಾನಿಗಳು ಮತ್ತು ಪ್ರೋತ್ಸಾಹಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದಿಸುತ್ತೇನೆ. ಅಭಿವೃದ್ಧಿ ರಾಷ್ಟ್ರಗಳಿಗೆ ಸವಾಲೊಡ್ಡಿ ನಮ್ಮದೇ ಆದ ಕೊರೊನಾ ಲಸಿಕೆ ಕಂಡುಹಿಡಿಯಲಾಗಿದೆ. ಈ ಲಸಿಕೆಯನ್ನು ಮೊದಲಿಗೆ ಕೊರೊನಾ ಯೋಧರಿಗೆ ನೀಡಬಹುದು ಎಂಬ ಅಭಿಪ್ರಾಯ ಇದೆ.

ಯಾವ ವಯಸ್ಸಿನವರಿಗೆ ಯಾವ ಕೊರೊನಾ ಲಸಿಕೆ ನೀಡಲಾಗುತ್ತಿದೆ?

3 ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆದ ಬಳಿಕ ಅಂತಿಮವಾಗಿ ಪರವಾನಗಿ ದೊರೆಯಬಹುದು. ನಾನು ಕೂಡ ಸಂಬಂಧಪಟ್ಟ ವಿಜ್ಞಾನಿಗಳೊಂದಿಗೆ ಮಾತನಾಡಿದ್ದು, ಇದು ಯಶಸ್ವಿಯಾದ ಲಸಿಕೆ ಹಾಗೂ ಯಾವುದೇ ಅಡ್ಡ ಪರಿಣಾಮ ಇಲ್ಲ ಎಂದು ತಿಳಿದುಬಂದಿದೆ. ಇದು ವಿಶ್ವಕ್ಕೆ ಭಾರತೀಯರ ಕೊಡುಗೆ ಎಂದರು.

ಲಸಿಕೆ ವಿತರಣೆ ಸಿದ್ಧತೆ ಪೂರ್ಣ:

ಸರ್ಕಾರಿ ವ್ಯವಸ್ಥೆಯಡಿ ಲಸಿಕೆ ವಿತರಣೆ ಮಾಡಲು ಸಿದ್ಧತೆ ಪೂರ್ಣಗೊಂಡಿದೆ. ಖಾಸಗಿ ಆಸ್ಪತ್ರೆಗಳ ಸಹಕಾರ ಬೇಕಿದ್ದರೆ ಅದನ್ನೂ ಪಡೆಯುವ ಬಗ್ಗೆ ಚಿಂತಿಸಲಾಗುವುದು ಎಂದರು.

ಭಾರತೀಯ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಇದೆ ಎಂದ ನರೇಂದ್ರ ಮೋದಿ

ಯುನೈಟೆಡ್ ಕಿಂಗ್ ಡಮ್ ನಿಂದ ಬಂದವರು ಮತ್ತು ಅವರ ಸಂಪರ್ಕಿತರಲ್ಲಿ ಒಟ್ಟು 48 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಪೈಕಿ 34 ಮಂದಿ ಯು.ಕೆ.ಯಿಂದ ಹಿಂದಿರುಗಿದವರಾಗಿದ್ದಾರೆ. ಇವರೆಲ್ಲರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, 10 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್ ಪತ್ತೆಯಾಗಿದೆ. ಇವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಯಾರಿಗೂ ರೋಗ ತೀವ್ರವಾಗಿ ಕಾಡಿಲ್ಲ ಎಂದರು.

ಯು.ಕೆ.ಯಿಂದ ಹಿಂದಿರುಗಿದವರಲ್ಲಿ 75 ಮಂದಿಯ ಸಂಪರ್ಕ ಪತ್ತೆಯಾಗಿಲ್ಲ. ಇದನ್ನು ಬೇಗನೆ ಪತ್ತೆ ಮಾಡಿ ಎಂದು ಬಿಬಿಎಂಪಿ ಹಾಗೂ ಗೃಹ ಇಲಾಖೆಗೆ ಕೋರಲಾಗಿದೆ. 75 ರಲ್ಲಿ ಮೂವರು ಮಾತ್ರ ವಿದೇಶಿ ವಿಳಾಸ ಹೊಂದಿದ್ದಾರೆ. ಕೆಲ ವಿದೇಶಿ ಪ್ರಜೆಗಳ ಪಾಸ್ ಪೋರ್ಟ್ ನಲ್ಲಿ ಮಾಹಿತಿ ಕೊರತೆ, ಸಿಮ್ ಸಮಸ್ಯೆಯಿಂದಾಗಿ ಸಂಪರ್ಕ ಪತ್ತೆಯಾಗದೇ ಇರಬಹುದು ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಎಲ್ಲ ವಿಚಾರಗಳನ್ನು ಪರಿಶೀಲಿಸಿ ಸರಿಯಾದ ನಿರ್ಣಯ ಕೈಗೊಂಡಿದೆ. ವಿಮಾನ ಹಾರಾಟಕ್ಕೆ ಸಂಬಂಧಿಸಿದಂತೆಯೂ ಮಾರ್ಗಸೂಚಿ ಇದೆ ಎಂದು ತಿಳಿಸಿದರು.

English summary
Preparations in place for vaccine distribution It’s a matter of pride for us that India has developed vaccine in a record time ahead of many developed nations, said Health & Medical Education Minister Dr.K.Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X