ದಲಿತರ ಮೇಲೆ ಹಲ್ಲೆ : ಭಜರಂಗಿಗಳು ಸೇರಿದಂತೆ 7 ಜನರ ಬಂಧನ

Posted By:
Subscribe to Oneindia Kannada

ಚಿಕ್ಕಮಗಳೂರು, ಜು.26: ಗುಜರಾತ್‌ನ ಉನಾದಲ್ಲಿ ಹಸುಗಳ ಚರ್ಮ ಸುಲಿಯುತ್ತಿದ್ದ ಆರೋಪದಲ್ಲಿ ದಲಿತರ ಮೇಲೆ ಗೋರಕ್ಷಕರು ಹಲ್ಲೆ ಹಲ್ಲೆ ನಡೆಸಿದ ಘಟನೆ- ಬೆನ್ನಲ್ಲೇ ಚಿಕ್ಕಮಗಳೂರಿನ ಜಯಪುರದಲ್ಲಿ ದಲಿತರ ಮೇಲೆ ಹಲ್ಲೆ ನಡೆದ ಘಟನೆ ಇತ್ತೀಚೆಗೆ ನಡೆದಿತ್ತು. ಈ ಸಂಬಂಧ ಭಜರಂಗ ದಳದ ಕಾರ್ಯಕರ್ತರು ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ.

ದಲಿತ ಕುಟುಂಬವೊಂದು ಹಸುವನ್ನು ಕೊಂದು, ಮನೆಯಲ್ಲಿ ಗೋಮಾಂಸ ಇಟ್ಟುಕೊಂಡಿದ್ದಾರೆ ಎಂಬ ಆರೋಪದಲ್ಲಿ ಅವರ ಮೇಲೆ ಹಲ್ಲೆ ನಡೆಸಿದ ಸಂಬಂಧ ಬಜರಂಗದಳದ ಇಬ್ಬರು ಕಾರ್ಯಕರ್ತರು ಸೇರಿದಂತೆ ಏಳು ಮಂದಿಯನ್ನು ಜಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Attack on Dalits: Seven held including two Bhajarangis in Chikkamagaluru

ಮೂವರು ದಲಿತರು ನೀಡಿದ ಪ್ರತಿದೂರಿನ ಮೇಲೆ ಪೊಲೀಸರು ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಜಯಪುರ ಪೊಲೀಸ ಠಾಣೆ ವ್ಯಾಪ್ತಿಯ ತಮ್ಮ ಮನೆಯನ್ನು ಹಸುವನ್ನು ಕಡಿದಿದ್ದಾರೆ ಎಂಬ ಆರೋಪದ ಮೇಲೆ ದಲಿತ ಕುಟುಂಬದ ವಿರುದ್ಧ ಜುಲೈ 10ರಂದು ಪ್ರಕರಣ ದಾಖಲಿಸಲಾಗಿತ್ತು. ಈ ವಿಷಯವನ್ನು ಕೋಮು ಸೌಹಾರ್ದ ವೇದಿಕೆ ಎತ್ತಿದ ಹಿನ್ನೆಲೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ.

ದಲಿತರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇಬ್ಬರು ಬಜರಂಗಿಗಳು ಸೇರಿದಂತೆ ಏಳು ಮಂದಿ ಸ್ಥಳೀಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಯಪುರ ಪಿಎಸ್‌ಐ ಚಂದ್ರಶೇಖರ ವಿವರಿಸಿದ್ದಾರೆ. ಆರೋಪಿಗಳು ದಲಿತರ ಮನೆಗಳಿಗೆ ಹೋಗಿ, ಅನುಮತಿ ಇಲ್ಲದೇ ಅಲ್ಲಿ ದನ ಕಡಿದಿರುವುದು ನಿಜವೇ ಎಂದು ಪರಿಶೀಲಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲಿ ಹೋಗಿ ನೋಡಿದಾಗ ಮಾಂಸ ಕಡಿಯುತ್ತಿದ್ದುದು ಪತ್ತೆಯಾದ ಹಿನ್ನೆಲೆಯಲ್ಲಿ ಮೂವರು ದಲಿತರನ್ನು ಠಾಣೆಗೆ ಕರೆದೊಯ್ದು ಬಳಿಕ ಬಿಡುಗಡೆ ಮಾಡಲಾಗಿತ್ತು.

ಆ ಬಳಿಕ ದೊಂಬಿ ಎಬ್ಬಿಸಿದ ಮತ್ತು ದಲಿತರ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಏಳೂ ಮಂದಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಎರಡೂ ದೂರುಗಳ ತನಿಖೆ ನಡೆಯುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Attack on Dalits: Seven held including two Bhajarang dal activistwho allegedly attacked a dalit family who had beef at their home in Jayapura police station limits in Chikkamagaluru
Please Wait while comments are loading...