ಶ್ರೀಶೈಲದಲ್ಲಿ ಕನ್ನಡಿಗ ಭಕ್ತರ ಮೇಲೆ ಹಲ್ಲೆ: ರಕ್ಷಣೆ ಒದಗಿಸುವಂತೆ ಸಿಎಂ ಮನವಿ
ಬೆಂಗಳೂರು, ಮಾರ್ಚ್ 31: ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಕನ್ನಡಿಗ ಭಕ್ತರ ಮೇಲೆ ಹಲ್ಲೆ ನಡೆದಿದೆ.
ಶ್ರೀಶೈಲದಲ್ಲಿ ಕರ್ನಾಟಕದ ಯಾತ್ರಿಗಳು ಮತ್ತು ಸ್ಥಳೀಯ ವ್ಯಾಪಾರಸ್ಥರ ಮಧ್ಯದಲ್ಲಿ ಘರ್ಷಣೆ ಉಂಟಾಗಿ ಹಲವು ವಾಹನಗಳು ಜಖಂ ಆಗಿದ್ದು ಇಬ್ಬರಿಗೆ ಗಾಯವಾಗಿರುವ ಘಟನೆ ನಡೆದಿದೆ.
ಈ ಸಬಂಧ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶ್ರೀಶೈಲಕ್ಕೆ ಯುಗಾದಿ ಸಂದರ್ಭದಲ್ಲಿ ಕರ್ನಾಟಕ ಸಹಿತ ಬೇರೆ ಬೇರೆ ರಾಜ್ಯಗಳಿಂದ ಭೇಟಿ ನೀಡುತ್ತಾರೆ. ಅಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಹೊರಗಿನಿಂದ ಬರುವ ಭಕ್ತರಿಗೆ ರಕ್ಷಣೆ ನೀಡಬೇಕು ಎಂದು ಆಂಧ್ರಪ್ರದೇಶದ ಮುಖ್ಯ ಮಂತ್ರಿಗಳಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

'ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶದಿಂದಲೂ ದೊಡ್ಡ ಪ್ರಮಾಣದಲ್ಲಿ ಭಕ್ತಾದಿಗಳು ಭೇಟಿ ನೀಡುತ್ತಾರೆ. ಹಿಂದಿರುಗುವ ಸಂದರ್ಭದಲ್ಲಿ ಕೆಲವು ಭಕ್ತರ ನಡುವೆ ಜಗಳ ಉಂಟಾಗಿ ಇರಿತವೂ ನಡೆದಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಮತ್ತು ಹೊರಗಿನಿಂದ ಬಂದಿದ್ದ ಭಕ್ತರ ನಡುವೆ ಜಗಳ ಉಂಟಾಗಿದೆ. ಆಂಧ್ರಪ್ರದೇಶದ ಅಧಿಕಾರಿಗಳೊಂದಿಗೆ ರಾತ್ರಿಯಿಂದಲೇ ಸಂಪರ್ಕದಲ್ಲಿದ್ದೇನೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಇಬ್ಬರಿಗೆ ತೀವ್ರವಾಗಿ ಗಾಯವಾಗಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ ಆಂಧ್ರಪ್ರದೇಶದ ಮುಖ್ಯ ಮಂತ್ರಿಗಳೊಂದಿಗೆ ಮಾತನಾಡಲು ಪ್ರಯತ್ನ ನಡೆದಿದೆ' ಎಂದರು.
ಕರ್ನೂಲ್ ಎಸ್‌ಪಿಗೆ ಸೂಚನೆ:
ಶ್ರೀಶೈಲದಲ್ಲಿ ಕರ್ನಾಟಕದ ಯಾತ್ರಿಗಳು ಮತ್ತು ಸ್ಥಳೀಯ ವ್ಯಾಪಾರಸ್ಥರ ಮಧ್ಯದಲ್ಲಿ ಘರ್ಷಣೆ ಉಂಟಾಗಿ ಹಲವು ವಾಹನಗಳು ಜಖಂ ಆಗಿದ್ದು ಇಬ್ಬರಿಗೆ ಗಾಯವಾಗಿರುವ ಘಟನೆ ಕಳವಳ ತಂದಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.

ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಬುಧವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಸ್ಥಳೀಯರು ಮತ್ತು ಕನ್ನಡಿಗರ ನಡುವೆ ಪ್ರಾರಂಭವಾದ ಜಗಳ ವಿಕೋಪಕ್ಕೆ ತಿರುಗಿ ಬಾಗಲಕೋಟೆ, ಬೆಳಗಾವಿ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳ ಭಕ್ತರ ಮೇಲೆ ಹಲ್ಲೆಯಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆಯೆಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ನಾನು ಕರ್ನೂಲ್ ಜಿಲ್ಲ ಪೊಲೀಸ್ ವರಿಷ್ಠಾಧಿಕಾರಿಯವರೊಂದಿಗೆ ಸಂಪರ್ಕ ಸಾಧಿಸಿ, ಕರ್ನಾಟಕದ ಎಲ್ಲಾ ಯಾತ್ರಿಗಳ ಸುರಕ್ಷತೆಯನ್ನು ಕಾಪಾಡಲು ಮತ್ತು ಅವರ ಗಾಯಾಳುಗಳ ಆರೋಗ್ಯದ ಕಡೆ ಲಕ್ಷ್ಯ ವಹಿಸಲು ಮತ್ತು ಸುರಕ್ಷಿತವಾಗಿ ಕರ್ನಾಟಕಕ್ಕೆ ಮರಳಿ ಕಳುಹಿಸುವ ವ್ಯವಸ್ಥೆ ಮಾಡಬೇಕೆಂದು ವಿನಂತಿಸಿರುತ್ತೇನೆ ಎಂದು ಹೇಳಿದ್ದಾರೆ.
ಈಗಾಗಲೇ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಪರಿಸ್ಥಿತಿಯ ಕುರಿತು ಸತತ ನಿಗಾ ವಹಿಸಿರುತ್ತಾರೆ. ಸೂಕ್ತಕ್ರಮ ಕೈಗೊಳ್ಳಲು ಯಾತ್ರಿಗಳ ಸುರಕ್ಷತೆಯನ್ನು ಸುನಿಶ್ಚಿತಗೊಳಿಸಲು ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.












Click it and Unblock the Notifications