ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಳ್ಳು ಭರವಸೆ ಕೊಟ್ಟು ಜನರನ್ನು ದಾರಿ‌ತಪ್ಪಿಸುವ ಕೆಲಸ; ಎಲ್ಲಾ ಸಮಯದಲ್ಲಿ ಮೋಸ ಮಾಡಲು ಸಾಧ್ಯವಿಲ್ಲ: ಸಿಎಂ

ಜನರನ್ನು ಭ್ರಮಾಲೋಕದಲ್ಲಿಡುವ ಪ್ರಯತ್ನ ಈಗಲೂ ನಡೆಯುತ್ತಿದೆ. ಆದರೆ, ಜನಪ್ರತಿನಿಧಿಗಳು ಜನರು ಬುದ್ದಿವಂತರಿದ್ದಾರೆ, ಜಾಗೃತರಾಗಿದ್ದಾರೆ ಎಂದು ಅರ್ಥ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

|
Google Oneindia Kannada News

ಬೆಂಗಳೂರು,ಜನವರಿ31: ಸುಳ್ಳು ಭರವಸೆ ಕೊಟ್ಟು ಜನರನ್ನು ದಾರಿ‌ತಪ್ಪಿಸುವ ಕೆಲಸ ಮಾಡಬಾರದು. ಎಲ್ಲಾ ಸಮಯದಲ್ಲಿ ಎಲ್ಲರನ್ನೂ ಮೋಸ ಮಾಡಲು ಸಾಧ್ಯವಿಲ್ಲ ಎಂದು ಅರ್ಥಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ವಿರುದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಮಂಗಳವಾರ ಯಲಹಂಕ ತಾಲ್ಲೂಕಿನ ಅಗ್ರಹಾರಪಾಳ್ಯದಲ್ಲಿ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯ ಲೋಕಾರ್ಪಣೆ ಮತ್ತು ವಸತಿಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಜನರಿಗೆ ಏನು ಮಾಡಲು ಸಾಧ್ಯವಿದೆ ಎಂಬ ಸತ್ಯವನ್ನು ಹೇಳಬೇಕು. ಜನರನ್ನು ಭ್ರಮಾಲೋಕದಲ್ಲಿಡುವ ಪ್ರಯತ್ನ ಈಗಲೂ ನಡೆಯುತ್ತಿದೆ. ಆದರೆ, ಜನಪ್ರತಿನಿಧಿಗಳು ಜನರು ಬುದ್ದಿವಂತರಿದ್ದಾರೆ, ಜಾಗೃತ ರಾಗಿದ್ದಾರೆ ಎಂದು ಅರ್ಥ ಮಾಡಿಕೊಳ್ಳಬೇಕು.

ಎಲ್ಲಾ ಉಚಿತವಾಗಿ ನೀಡುತ್ತಿದ್ದೇವೆ ಎಂದರೆ ಯಾರೂ ನಂಬುವುದಿಲ್ಲ. ಜನರ ತೆರಿಗೆಯ ಮೂಲಕ ಬರುವ ಹಣವನ್ನು ಎಲ್ಲಿ ಉಪಯೋಗಿಸಬೇಕು, ದೀನದಲಿತರಿಗೆ ವಿಶೇಷವಾಗಿರುವ ಕಾರ್ಯಕ್ರಮ ರೂಪಿಸಬೇಕು. ಜನಪ್ರಿಯತೆಗಾಗಿ, ಅಧಿಕಾರಕ್ಕೆ ಬರಬೇಕೆಂದು ಹತಾಶರಾಗಿ ಇಡೀ ವ್ಯವಸ್ಥೆಯನ್ನು ನಾವು ಕೆಡಿಸುವ ಲೆಕ್ಕದಲ್ಲಿ ಜವಾಬ್ದಾರಿ ಇದ್ದವರು ಮಾತನಾಡಬಾರದು. ಜನರು ಎಲ್ಲವನ್ನೂ ಅರ್ಥಮಾಡಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ವಿರದ್ದು ಟೀಕೆ ನಡೆಸಿದರು.

Attempts To Keep People In Delusion Are Still Going On Basavaraj Bommai Said

ಬಡವರು ನಿವೇಶನ ಕೊಳ್ಳಲು ಹಾಗೂ ಗೃಹ ನಿರ್ಮಾಣ ಮಾಡಿಕೊಳ್ಳಲು ಅನುಕೂಲ ವಾಗುವಂತೆ ಕಾನೂನು ಸರಳೀಕರಣ ಮಾಡಲಾಗುವುದು. ಬರುವ ದಿನಗಳಲ್ಲಿ ರಾಜ್ಯದಲ್ಲಿ ಮನೆ ಕಟ್ಟುವುದು ಕಷ್ಟವಾಗಲಿದೆ. ಕಂದಾಯ ಕಾಯ್ದೆಯಲ್ಲಿ ಮನೆ ಕಟ್ಟಲು ನಿರ್ದಿಷ್ಟ ರಿಯಾಯಿತಿಗಳಿಲ್ಲ. ಭೂಮಿ ಬೆಲೆ ಹೆಚ್ಚಾಗಲು ಬೇಡಿಕೆ ಹೆಚ್ಚಾಗಿದೆ ಮತ್ತು ನಾವು ಮಾಡಿರುವ ಕಾನೂನುಗಳಿಂದ ಸಾಮಾನ್ಯ ಜನರು ನಿವೇಶನ ಖರೀದಿ ಮಾಡುವ ಪರಿಸ್ಥಿತಿಯಲ್ಲಿಲ್ಲ. ಹೀಗಾಗಿ ಮನೆ ಕಟ್ಟಲು ಅವಕಾಶ ಸಿಗುವಂತೆ ಕಾನೂನಿಗೆ ತಿದ್ದುಪಡಿ ತಂದು, ನಿರ್ಬಂಧಗಳನ್ನು ದೂರಮಾಡಿ ನೇರವಾಗಿ ಕೈಗೆಟುಕುವ ಬೆಲೆಯಲ್ಲಿ ಜಮೀನು ದೊರೆಯುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ವಸತಿಗಾಗಿಯೇ ಜಮೀನು ಪಡೆಯಲು, ಮನೆ ಕಟ್ಟಲು ಎಲ್ಲಾ ಕಾನೂನನ್ನು ಸರಳೀಕರಣ ಮಾಡಲಾಗುವುದು.‌ ಹಾಗಾದಾಗ ಬಡವರಿಗೆ ಮನೆ ಹಾಗೂ ನಿವೇಶನ ನೀಡಬಹುದು ಎಂದರು.

3 ಲಕ್ಷಕ್ಕಿಂತ ಹೆಚ್ಚು ನಿವೇಶನಗಳನ್ನು ಸೋಮ್ಮಣ್ಣ ಅವರು ರಾಜ್ಯದಲ್ಲಿ ನೀಡಿರುವುದು ದಾಖಲೆ. ಪ್ರಗತಿಪರ ಚಿಂತನೆ ಮಾಡಿದಾಗ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ನಮ್ಮ ಸರ್ಕಾರ ಸಮಸ್ಯೆಯನ್ನು ಬಿಟ್ಟು ಹೋಗುವುದಿಲ್ಲ‌ , ಪರಿಹಾರ ಕೊಟ್ಟು ಜನರಿಗೆ ಎಲ್ಲಾ ರೀತಿಯ ಸೌಲಭ್ಯ ನೀಡುವ ಕೆಲಸ ಮಾಡಲಿದೆ ಎಂದರು.

ತಾನು ಹಾಗೂ ತನ್ನ ಕುಟುಂಬ ಒಂದು ಸೂರಿನಡಿ ಗೌರವದಿಂದ ಬದುಕಬೇಕೆನ್ನುವುದು ಪ್ರತಿ ಮನುಷ್ಯನ ಆಸೆ. ಮನುಷ್ಯ ಮಾತ್ರವಲ್ಲದೇ ಪಕ್ಷಿಗಳು ಒಂದು ಗೂಡು ಕಟ್ಟಿ, ಸಂಸಾರ ಮಾಡುವುದು ಕಾಣುತ್ತೇವೆ. ಪಕ್ಷಿಗಳಿಗೆ ಇರುವ ಸೌಭಾಗ್ಯ ಮನುಷ್ಯರಿಗೂ ಇರಬೇಕು. ಬೃಹತ್ ಪ್ರಮಾಣದಲ್ಲಿ ಬೆಳೆಯುತ್ತಿರುವ ನಾಗರಿಕತೆಯಲ್ಲಿ ಬಡವರಿಗೆ ಪುಟ್ಟ ಮನೆ ಕಟ್ಟಿ ಕೊಡುವ ಅವಕಾಶವನ್ನು ಸಮಾಜ ದೊಡ್ಡ ಪ್ರಮಾಣದಲ್ಲಿ ಮಾಡಬೇಕು. ಸರ್ಕಾರ ಈ ಕೆಲಸ ಮಾಡಬೇಕು ಎಂದರು.

Attempts To Keep People In Delusion Are Still Going On Basavaraj Bommai Said

ಘೋಷಣೆಗಳು ಬಹಳಷ್ಟು ಆಗುತ್ತವೆ‌. ಅದಕ್ಕೆ ಹಣ ಮೀಸಲಿಡಬೇಕು. ಆರು ವರ್ಷಗಳ ಹಿಂದೆ 15 ಲಕ್ಷ ಮನೆ ಕಟ್ಟುವುದಾಗಿ ಘೋಷಣೆಯಾಯಿತು. ಹಿಂದಿನ ಸರ್ಕಾರ ಚುನಾವಣೆ ಸಂದರ್ಭದಲ್ಲಿ 15 ಲಕ್ಷ ಮನೆ ಘೋಷಣೆ ಮಾಡಿದರು. ಅದಕ್ಕೆ ಹಣ ಮೀಸಲಿಡದೇ ಹೋದರು‌. 15 ಸಾವಿರ ಕೋಟಿ ರೂ. ಅಗತ್ಯವಿದ್ದರೆ, 3 ಸಾವಿರ ಕೋಟಿ ಮೀಸಲಿಟ್ಟರು. ಅಗತ್ಯವಿರುವಷ್ಟು ಮನೆಗಳನ್ನು ಕಟ್ಟಲು ಸಾಧ್ಯವಾಗಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಗತ್ಯ ಅನುದಾನ ಒದಗಿಸಿ ಸುಮಾರು 10 ಲಕ್ಷ ಮನೆಗಳನ್ನು ಕಟ್ಟುವ ಗುರಿ ಹೊಂದಿ ಇಂದು 5 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಕೊನೆಯ ಹಂತದಲ್ಲಿ ಇದ್ದೇವೆ ಎಂದರು.

English summary
karnataka assembly elections 2023; Attempts To Keep People In Delusion Are Still Going On Basavaraj Bommai Said,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X